AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್

ಕೆಎಂಎಫ್ ತನ್ನ ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ.

ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್
ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್
Vinay Kashappanavar
| Updated By: ಭಾವನಾ ಹೆಗಡೆ|

Updated on: Dec 03, 2025 | 8:21 AM

Share

ಬೆಂಗಳೂರು, ಡಿಸೆಂಬರ್ 03: ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಮೊಸರು ತುಪ್ಪ (Nandini Products) ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರುತಿಸಿಕೊಂಡಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿಯೂ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ನಂದಿನಿ ಮಳಿಗೆಗಳಲ್ಲಿ ನಂದಿನಿ ಉತ್ಪನಗಳ ಜೊತೆ ಬೇರೆ ಉತ್ಪನಗಳನ್ನೂ ಮಾರಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ನಂದಿನಿ ಬೂತ್​ಗಳಲ್ಲಿ ಇತರ ಪ್ರಾಡೆಕ್ಟ್ ಮಾರಟಕ್ಕೆ ಕಡಿವಾಣ ಹಾಕಲು ಕೆಎಂಎಫ್ (Karnataka Cooperative Milk Producers’ Federation Limited) ಮುಂದಾಗಿದೆ.

ನಂದಿನಿ ಬಿಟ್ಟು ಬೇರೆ ಉತ್ಪನ್ನ ಮಾರಿದರೆ ಲೈಸೆನ್ಸ್ ರದ್ದು

ಹಲವು ನಂದಿನಿ ಬೂತ್​ಗಳಲ್ಲಿ ನಂದಿನಿ ಉತ್ಪನ್ನಗಳೊಡನೆ ಬೇರೆ ಬ್ರ್ಯಾಂಡ್​ಗಳ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಅರಿತ KMF, ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಬೂತ್​ಗಳಲ್ಲಿ ನಂದಿನಿ ಹೊರತುಪಡಿಸಿ ಬೇರೆ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಮಾಲೀಕರಿಗೆ KMF ನೋಟಿಸ್ ನೀಡಲು ಹೊರಟಿದ್ದು, ಈ ಮೂಲಕ ಬೇರೆ ಬ್ರಾಂಡ್ ಮಾರುವ ಮಾಲೀಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಒಂದು ವೇಳೆ ಆದೇಶ ಮೀರಿ ಇತರ ಉತ್ಪನ್ನಗಳ ಮಾರಾಟ ಮಾಡುವುದರ ಕುರಿತು ತಿಳಿದುಬಂದಲ್ಲಿ ಬೂತ್​ಗಳ ಮಾಲೀಕರ ಲೈಸೆನ್ಸ್ ರದ್ದು ಮಾಡುವುದಾಗಿ KMF ಎಂಡಿ ಶಿವಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ ನಕಲಿ ನಂದಿನಿ ತುಪ್ಪ ಕಡಿವಾಣಕ್ಕೆ KMF ಹೊಸ ಪ್ರಯೋಗ: ಕ್ಯೂ ಆರ್ ಕೋಡಿನಲ್ಲೇ ಅಸಲಿ, ನಕಲಿ ಪತ್ತೆ

ಇನ್ನು ಮುಂದೆ ಬೇರೆ ಉತ್ಪನ್ನ ಮಾರಲ್ಲ ಎಂದ ಮಾರಾಟಗಾರರು

ನಂದಿನಿ ಬೂತ್​ಗೆ ಅನುಮತಿ ಪಡೆದ ಕೆಲ ಮಾಲೀಕರು ನಂದಿನ ಪ್ರಾಡಕ್ಟ್ಗಳ ಜೊತೆಗೆ ಬೇರೆ ಪ್ರಾಡಕ್ಟ್ ಗಳ ತಿನಿಸು, ತಿಂಡಿ ಸೇರಿದಂತೆ ನೀರಿನ ಬಾಟಲಿಗಳನ್ನು ಮಾರಾಟ ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವ ಕೆಎಂಎಫ್ ಮೊದಲ ಹಂತದಲ್ಲಿ ನೋಟಿಸ್ ನೀಡಲಿದೆ. ಈ ನೋಟಿಸ್​ ಅನ್ನು ನಿರ್ಲಕ್ಷಿಸಿದಲ್ಲಿ ಲೈಸೆನ್ಸ್ ರದ್ದು ಮಾಡಲು ಮುಂದಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾರಾಟಗಾರರು, ಬೂತ್​ಗಳ ಬಾಡಿಗೆ ಹೆಚ್ಚಿರುವ ಕಾರಣ ನಾವು ಕೇವಲ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಿದರೆ ನಮಗೆ ನಷ್ಟವಾಗುತ್ತದೆ. ನಮಗೂ ಈಗಾಗಲೇ KMF ನೋಟಿಸ್ ನೀಡಿದೆ. ಇನ್ನು ಮುಂದೆ ಬೂತ್​ನಲ್ಲಿ ಇತರೆ ಉತ್ಪನ್ನಗಳನ್ನು ಮಾರಾಟ ಮಾಡುವುದಿಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ