ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ; ಇನ್ನೆರೆಡು ದಿನಗಳಲ್ಲಿ ಸಿಎಂ ಬೊಮ್ಮಾಯಿ ಜತೆ ಚರ್ಚೆ

ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ; ಇನ್ನೆರೆಡು ದಿನಗಳಲ್ಲಿ ಸಿಎಂ ಬೊಮ್ಮಾಯಿ ಜತೆ ಚರ್ಚೆ
ನಂದಿನಿ ಹಾಲು

ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು ಒತ್ತಾಯ ಕೇಳಿ ಬಂದಿದೆ. ಪ್ರತಿ ಲೀ.ಗೆ 5 ರೂ. ಏರಿಸಲು ಹಾಲು ಒಕ್ಕೂಟಗಳು ಮನವಿ ಮಾಡಿವೆ. 14 ಹಾಲು ಒಕ್ಕೂಟಗಳು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲು ಸಿದ್ದತೆ ಮಾಡಿಕೊಂಡಿವೆ.

TV9kannada Web Team

| Edited By: Ayesha Banu

Apr 06, 2022 | 12:20 PM

ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ KERC ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ.

ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು ಒತ್ತಾಯ ಕೇಳಿ ಬಂದಿದೆ. ಪ್ರತಿ ಲೀ.ಗೆ 5 ರೂ. ಏರಿಸಲು ಹಾಲು ಒಕ್ಕೂಟಗಳು ಮನವಿ ಮಾಡಿವೆ. 14 ಹಾಲು ಒಕ್ಕೂಟಗಳು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲು ಸಿದ್ದತೆ ಮಾಡಿಕೊಂಡಿವೆ. ಇದೇ ಏಪ್ರಿಲ್ 10ರೊಳಗೆ ಬೊಮ್ಮಾಯಿ ಭೇಟಿ ಮಾಡಲು ನಿರ್ಧಾರ ಮಾಡಿವೆ. ಈಗಾಗಲೇ ಈ ಬಗ್ಗೆ KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸತೀಶ್ ಜೊತೆ ಚರ್ಚೆ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಸಿಎಂ ಜತೆಗೆ ಚರ್ಚೆ ಮಾಡುವ ಭರವಸೆ.

14 ಹಾಲು ಒಕ್ಕೂಟಗಳು ಪ್ರತಿ ಲೀ.ಗೆ 5 ರೂ. ಏರಿಸಲು ಮನವಿ ಮಾಡಿವೆ. ಆದ್ರೆ KMF ಪ್ರತಿ ಲೀ.ಗೆ 2 ರೂ. ಮಾತ್ರ ಏರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತಾವನೆಗೆ ಸಿಎಂ ಒಪ್ಪಿದರೆ ಹಾಲಿನ ದರ ಏರಿಕೆಯಾಗಲಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಸಿಲಿಂಡರ್, ವಿದ್ಯುತ್ ಬಿಲ್ ದರವೂ ದುಬಾರಿಯಾಗಿದೆ. ನಷ್ಟ ಹಾಗೂ ನಿರ್ವಹಣೆ ವೆಚ್ಚ ದುಬಾರಿ ಕಾರಣ ನೀಡಿ ದರ ಏರಿಕೆಗೆ KMF ಮುಂದಾಗಿದೆ. ಸರ್ಕಾರ ಒಪ್ಪಿಗೆ ಸೂಚಿಸಿದ್ರೆ ಹಾಲಿನ ದರವೂ ದುಬಾರಿಯಾಗಲಿದೆ.

ಈ ಸಮಯದಲ್ಲಿ ಹಾಲಿನ ದರ ಹೆಚ್ಚಿಸುವುದು ಸರಿಯಲ್ಲ ಹಾಲಿನ ದರ ಹೆಚ್ಚಳ ಮಾಡುವಂತೆ ನಾವು ಕೇಳಿಲ್ಲ. ದರ ಹೆಚ್ಚಳಕ್ಕೆ ಯಾವ ಒಕ್ಕೂಟ ಕೇಳಿದೆಯೋ ಗೊತ್ತಿಲ್ಲ. ಈ ಸಮಯದಲ್ಲಿ ಹಾಲಿನ ದರ ಹೆಚ್ಚಿಸುವುದು ಸರಿಯಲ್ಲ ಎಂದು ದೆಹಲಿಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 13 ಒಕ್ಕೂಟಗಳು ಇವೆ. ಹಾಸನ ಒಕ್ಕೂಟಕ್ಕೆ 12 ಲಕ್ಷ ಲೀಟರ್ ಹಾಲು ಬರುತ್ತಿದೆ. ನಾವೇನು ಹಣ ಹೆಚ್ಚು ಮಾಡಿ ಎಂದು ಕೇಳಿಲ್ಲ. ಹಾಲಿನ ದರ ಹೆಚ್ಚಳಕ್ಕೆ ಕೇಳಿಲ್ಲ. ಯಾವ ಒಕ್ಕೂಟದವರು ಕೇಳಿದ್ದಾರೋ ಗೊತ್ತಿಲ್ಲ. ಈ ಸಮಯದಲ್ಲಿ ಬೆಲೆ ಹೆಚ್ಚಳ ಮಾಡುವುದು ಸೂಕ್ತವಲ್ಲ. ನಷ್ಟ ತೂಗಿಸಲು ಹೆಚ್ಚಳ ಮಾಡುವುದು ಸರಿಯಲ್ಲ. ಖಾಸಗೀಯರ ಹಿಡಿತಕ್ಕೆ ಹೋಗುವುದನ್ನು ತಪ್ಪಿಸಬೇಕು. ಬೆಂಗಳೂರಿನಲ್ಲಿ 10 ಲಕ್ಷ ಲೀ ಖಾಸಗೀಯವ್ರು ಮಾರಾಟ ಮಾಡ್ತಿದ್ದಾರೆ. ಅದನ್ನು ಕೇಳುವವರು ಯಾರೂ ಇಲ್ಲ. ಗ್ರಾಹಕರು ಮತ್ತು ರೈತರ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ನವದೆಹಲಿಯಲ್ಲಿ ಹೆಚ್.ಡಿ.ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ ಬೆಂಗಳೂರು: ಏಪ್ರಿಲ್ 04ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್‌, ಉಪಾಹಾರ ಮಂದಿರ ಮಾಲೀಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳಲ್ಲಿ ಶೇಕಡಾ 10ರಷ್ಟು ಹೆಚ್ಚಳ ಮಾಡಿವೆ. ಇದರ ನಡುವೆ ಈಗ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ದರ ಏರಿಕೆಗೆ ಖಾಸಗಿ ವಾಹನ ಸಂಘಟನೆಗಳ ಚಿಂತನೆ ದಿನೇದಿನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಶೇಕಡಾ 10ರಷ್ಟು ಖಾಸಗಿ ಬಸ್ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ವಾಹನ ಸಂಘಟನೆಗಳು ಚಿಂತನೆ ನಡೆಸಿವೆ. ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಬಾಡಿಗೆ ಜಾಸ್ತಿ ಮಾಡದೇ ಹೋದ್ರೆ ಬದುಕೋದು ಕಷ್ಟ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳ ತಿಳಿಸಿದ್ದಾರೆ.

ಉಕ್ರೇನ್ ರಷ್ಯಾದ ಯುದ್ಧದ ಪರಿಣಾಮ. ಪೆಟ್ರೋಲಿಯಂ ಬೆಲೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಡಿಸೇಲ್ ಬೆಲೆ 10 ರೂ ಜಾಸ್ತಿ ಆಗಿದೆ. ಜೊತೆಗೆ ಬೇರೆ ಬೇರೆ ವಲಯದಲ್ಲೂ ಬೆಲೆ ಏರಿಕೆಯಾಗ್ತಿದೆ. ಟೋಲ್ ದರವೂ ಸಹ ಹೆಚ್ಚಾಗಿದೆ. ಹೀಗಾಗಿ ನಾವೂ ಸಹ ದರ ಏರಿಕೆ ಮಾಡಬೇಕಾಗಿದೆ. ಶೇಕಡಾ 10ರಷ್ಟು ಏರಿಕೆ ಆಗಲೇಬೇಕಾಗಿದೆ. ಡಿಸೇಲ್ ಬೆಲೆ ಏರಿಕೆಯಾಗ್ತಿರೋದನ್ನ ನೋಡಿದ್ರೇ ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಬಾಡಿಗೆ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟ್ರಾನ್ಸ್ ಪೋರ್ಟ್ ಬೆಲೆ ಜಾಸ್ತಿಯಾಗೋದು ಅನಿವಾರ್ಯವಾಗಿದೆ. ನಾವೂ ಬೆಲೆ ಏರಿಕೆ ಮಾಡದೇ ಹೋದ್ರೆ ನಮ್ಮ ಉದ್ಯಮ ನಷ್ಟ ಅನುಭವಿಸಬೇಕಾಗುತ್ತೆ ಎಂದಿದ್ದಾರೆ. ಸದ್ಯ ದರ ಏರಿಕೆ ಬಗ್ಗೆ ಈ ವಾರ ಅಥವಾ ಮುಂದಿನ ವಾರ ಸಭೆ ಮಾಡಲು ಅಸೋಸಿಯೇಷನ್ ನಿರ್ಧರಿಸಿದೆ.

ಇದನ್ನೂ ಓದಿ: ಬಿಬಿಎಂಪಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು; ಒಂದೇ ಕಾಮಗಾರಿಗೆ ಎರಡೆರಡು ಬಾರಿ ಹಣ ಪಾವತಿ

Petrol Diesel Price Hike: ಮತ್ತೆ 110 ರೂ.ಗಳತ್ತ ಪೆಟ್ರೋಲ್, ಡೀಸೆಲ್ ಬೆಲೆಯೂ ಏರಿಕೆ; ಇಂಧನ ದರ ಎಷ್ಟಾಗಿದೆ? ಇಲ್ಲಿ ನೋಡಿ

Follow us on

Related Stories

Most Read Stories

Click on your DTH Provider to Add TV9 Kannada