AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ: ಕರ್ನಾಟಕದ ಇತರ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ಮಾರಾಟಕ್ಕೆ ಪ್ಲಾನ್

ಕೆಎಂಎಫ್​​ನ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಬೆಂಗಳೂರಿನಲ್ಲಿ ಭಾರಿ ಯಶಸ್ಸು ಕಂಡಿದೆ. ಮೂರು ದಿನಗಳಲ್ಲಿ 2250 ಮೆಟ್ರಿಕ್ ಟನ್‌ಗಳಷ್ಟು ಮಾರಾಟವಾಗಿದೆ. ಈ ಯಶಸ್ಸಿನಿಂದಾಗಿ, ಕೆಎಂಎಫ್ ರಾಜ್ಯದ ಇತರ ಜಿಲ್ಲೆಗಳಿಗೂ ಶೀಘ್ರದಲ್ಲಿ ಈ ಹಿಟ್ಟನ್ನು ವಿತರಿಸಲು ಯೋಜಿಸಿದೆ. ಒಂದು ವಾರದೊಳಗೆ ಇತರ ಜಿಲ್ಲೆಗಳನ್ನೂ ಮಾರಾಟ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುಳಿವು ಲಭ್ಯವಾಗಿದೆ.

ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ: ಕರ್ನಾಟಕದ ಇತರ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ಮಾರಾಟಕ್ಕೆ ಪ್ಲಾನ್
ನಂದಿನಿ ದೋಸೆ, ಇಡ್ಲಿ ಹಿಟ್ಟು
ಶಾಂತಮೂರ್ತಿ
| Updated By: Ganapathi Sharma|

Updated on: Jan 03, 2025 | 7:35 AM

Share

ಬೆಂಗಳೂರು, ಜನವರಿ 3: ಕರ್ನಾಟಕ ಹಾಗೂ ಹೊರರಾಜ್ಯಗಳಲ್ಲಿ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್ ಇದೀಗ ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾಗಿದೆ. ಇತ್ತೀಚೆಗಷ್ಟೇ ಕೆಎಂಎಫ್ ಪರಿಚಯಿಸಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು, ಶೀಘ್ರದಲ್ಲೇ ಇತರೆ ಜಿಲ್ಲೆಗಳಿಗೂ ದೋಸೆ ಹಿಟ್ಟಿನ ವ್ಯಾಪಾರ ವಿಸ್ತರಿಸಲು ಕೆಎಂಎಫ್ ಸಜ್ಜಾಗುತ್ತಿದೆ.

ಸದ್ಯ ಕೆಎಂಎಫ್ ಬೆಂಗಳೂರಿನಲ್ಲಿ ಮಾತ್ರ ಪ್ರಾಯೋಗಿಕವಾಗಿ ದೋಸೆ ಹಿಟ್ಟಿನ ಮಾರಾಟ ಆರಂಭಿಸಿದೆ. ಇದೀಗ ರಾಜಧಾನಿಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದ್ದಂತೆಯೇ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ದೋಸೆ-ಇಡ್ಲಿ ಹಿಟ್ಟಿನ ಮಾರಾಟ ಮಾಡಲು ನಿರ್ಧಾರ ಮಾಡಿದೆ. ಇತ್ತ ನಂದಿನಿ ಪರಿಚಯಿಸಿರುವ ದೋಸೆ ಹಿಟ್ಟಿನಲ್ಲಿ ವೇ ಪ್ರೊಟೀನ್ ಕೂಡ ಇರುವುದರಿಂದ ಸದ್ಯ ಜಿಮ್, ಡಯಟ್ ಬಗ್ಗೆ ಗಮನಹರಿಸುವವರು ಕೂಡ ನಂದಿನಿ ಹಿಟ್ಟಿನ ಮೊರೆಹೋಗುತ್ತಿದ್ದಾರೆ.

ಒಂದು ವಾರದಲ್ಲಿ ಇತರ ಜಿಲ್ಲೆಗಳಲ್ಲೂ ಸಿಗಲಿದೆ ದೋಸೆ, ಇಡ್ಲಿ ಹಿಟ್ಟು

ಮುಂದಿನ ಒಂದು ವಾರದೊಳಗಾಗಿ ಇತರೆ ಜಿಲ್ಲೆಗಳಲ್ಲೂ ದೋಸೆ, ಇಡ್ಲಿ ಹಿಟ್ಟು ಮಾರಾಟ ಆರಂಭಿಸುವುದಾಗಿ ಕೆಎಂಎಫ್ ಸುಳಿವು ನೀಡಿದೆ. ಈ ಬಗ್ಗೆ ಕೆಎಂಎಫ್ ಎಂಡಿ ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.

ನಂದಿನಿ ದೋಸೆ ಹಿಟ್ಟಿನ ದರ ಎಷ್ಟು?

ಸದ್ಯ ಬೆಂಗಳೂರಲ್ಲಿ 450 ಗ್ರಾಂ ಪ್ಯಾಕ್ ದೋಸೆ ಹಿಟ್ಟಿಗೆ 40 ರೂಪಾಯಿ ಹಾಗೂ 900 ಗ್ರಾಂಗೆ 80 ರೂಪಾಯಿ ದರ ನಿಗದಿಪಡಿಸಿರುವ ಕೆಎಂಎಫ್, ಇದೇ ಪ್ರಥಮಬಾರಿಗೆ ದೋಸೆ ಹಿಟ್ಟಿಗೆ ಶೇಕಡ 5 ರಷ್ಟು ವೇ ಪ್ರೊಟೀನ್ ಸೇರಿಸಿ ಜನರಿಗೆ ನೀಡುತ್ತಿದೆ. ಇದರಿಂದಾಗಿ ಮತ್ತಷ್ಟು ಜನಪ್ರಿಯತೆ ಗಳಿಸಿದೆ.

ಇದನ್ನೂ ಓದಿ: ಹಾಲು, ಮೊಸರಿನಂತೆ ಮಾರುಕಟ್ಟೆಗೆ ನಂದಿನಿ ಇಡ್ಲಿ, ದೋಸೆ ಹಿಟ್ಟು ಲಗ್ಗೆ, ಬೆಲೆ ಎಷ್ಟು?

ಸದ್ಯ ಈಗಾಗಲೇ ಹಲವು ಉತ್ತಮ ಗುಣಮಟ್ಟದ ಉತ್ಪನ್ನಗಳ ಮೂಲಕ ಜನರ ಮನಗೆದ್ದಿದ್ದ ನಂದಿನಿ, ಇದೀಗ ತನ್ನ ಹೊಸ ಪ್ರಾಡಕ್ಟ್ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲು ಹೊರಟಿದೆ. ಸದ್ಯ ಜನರ ಮೆಚ್ಚಿನ ಬ್ರ್ಯಾಂಡ್ ಇದೀಗ ಹೊಸ ಮೈಲಿಗಲ್ಲು ಬರೆಯಲು ಹೊರಟಿದ್ದು, ನಂದಿನಿ ದೋಸೆಯ ಸವಿ ಸವಿಯಲು ಇತರ ಜಿಲ್ಲೆಗಳ ಜನರು ಇನ್ನು ಕೆಲವು ದಿನ ಕಾಯಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ