AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ನಂದಿನಿ ತುಪ್ಪ ಕಡಿವಾಣಕ್ಕೆ KMF ಹೊಸ ಪ್ರಯೋಗ: ಕ್ಯೂ ಆರ್ ಕೋಡಿನಲ್ಲೇ ಅಸಲಿ, ನಕಲಿ ಪತ್ತೆ

ನಂದಿನಿ ಬ್ರಾಂಡ್‌ ತುಪ್ಪವನ್ನು ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವೊಂದು ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ತೆ ಆಗಿತ್ತು. ಇದಕ್ಕೆ ಕಡಿವಾಣ ಹಾಕಲು ಇದೀಗ KMF QR ಕೋಡ್ ಬಳಸಲು ಮುಂದಾಗಿದೆ. ಹಾಗಾದರೆ ಇದರಿಂದ ಗ್ರಾಹಕರಿಗೆ ಹೊರೆಯಾಗುತ್ತಾ, ಇಲ್ಲವಾ ಎಂಬ ಮಾಹಿತಿ ಇಲ್ಲಿದೆ.

ನಕಲಿ ನಂದಿನಿ ತುಪ್ಪ ಕಡಿವಾಣಕ್ಕೆ KMF ಹೊಸ ಪ್ರಯೋಗ: ಕ್ಯೂ ಆರ್ ಕೋಡಿನಲ್ಲೇ ಅಸಲಿ, ನಕಲಿ ಪತ್ತೆ
ನಂದಿನಿ ತುಪ್ಪ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 28, 2025 | 8:07 PM

Share

ಬೆಂಗಳೂರು, ನವೆಂಬರ್​ 28: ಕೆಎಂಎಫ್ (KMF) ತುಪ್ಪಕ್ಕೆ ಎಲ್ಲೆಲ್ಲಿದ ಬೇಡಿಕೆ. ತಿರುಪತಿ ತಿಮ್ಮಪ್ಪನಿಂದ ಹಿಡಿದು ಪ್ರತಿಯೊಬ್ಬರಿಗೆ ನಂದಿನಿ ತುಪ್ಪ (Nandini Ghee) ಬೇಕು. ಇದನ್ನೇ ಬಂಡವಾಳ ಮಾಡಿಕೊಂಡು ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವೊಂದು ಇತ್ತೀಚೆಗೆ ಪತ್ತೆಯಾಗಿತ್ತು. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ KMF ನಯಾ ಪ್ಲಾನ್​ಗೆ ಮುಂದಾಗಿದೆ. ಕ್ಯೂ ಆರ್ ಕೋಡ್ ಬಳಕೆಗೆ ಸಿದ್ಧತೆ ನಡೆಸಿದೆ.

ಕ್ಯೂ ಆರ್ ಕೋಡ್ ಬಳಕೆ ಮುಂದಾದ ಕೆಎಂಎಫ್

ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ ತಿರುಪತಿ ಲಡ್ಡುಗೆ ಬಳಕೆ ಮಾಡಲಾಗುತ್ತಿದೆ. ಜೊತೆಗೆ ಇದರ ಘಮಲು ವಿದೇಶಕ್ಕೂ ತಲುಪುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಆರೋಪಿಗಳು ನಂದಿನಿ ಬ್ರಾಂಡ್‌ ತುಪ್ಪವನ್ನು ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಸಿಸಿಬಿ ಪೊಲೀಸರು ಮತ್ತು ಕೆಎಂಎಫ್‌ನ ಜಾಗೃತ ದಳ ಬಯಲು ಮಾಡಿದೆ. ಈ ಪ್ರಕರಣದಿಂದ ಎಚ್ಚೆತ್ತ ಕೆಎಂಎಫ್ ಇದೀಗ ತುಪ್ಪದ ಪ್ಯಾಕೆಟ್ ಮತ್ತು ಬಾಟಲ್​ಗೆ ಕ್ಯೂ ಆರ್ ಕೋಡ್ ಬಳಸಲು ಮುಂದಾಗಿದೆ.

ಇದನ್ನೂ ಓದಿ: ನಂದಿನಿ ಹೆಸರಲ್ಲಿ ನಕಲಿ ತುಪ್ಪ: ತಮಿಳುನಾಡಿನಲ್ಲಿ ಕಲಬೆರಕೆ ಮಾಡಿ ಕರ್ನಾಟಕದಲ್ಲಿ ಮಾರಾಟ

ಈ ಕುರಿತು ಕೆಎಂಎಫ್ ಅಧಿಕಾರಿಗಳು, ತಜ್ಞರ ಜೊತೆ ಸಭೆ ಮಾಡಿ ಚರ್ಚೆ ಮಾಡಿದ್ದಾರೆ. ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ. ಆ ಮೂಲಕ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಗೊತ್ತಾಗಲಿದೆ. ಆದರೆ ಇದಕ್ಕೆ ಆಗುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರೆಸದೇ ಕೆಎಂಎಫ್ ಭರಿಸಲು ಮುಂದಾಗಿದೆ.

ಇದನ್ನೂ ಓದಿ: ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘KMF ನಂದಿನಿ’ ಹವಾ

ಒಟ್ಟಿನಲ್ಲಿ ಜನರು ನಂಬಿಕೆಯಿಂದ ಖರೀದಿಸುತ್ತಿದ್ದ ಕೆಎಂಎಫ್ ತುಪ್ಪ ನಕಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇದೀಗ ಕೆಎಂಎಫ್ ಹೊಸ ದಾಳ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂ ಆರ್ ಕೋಡ್ ಮೊರೆ ಹೋಗುತ್ತಿದೆ. ಆದರೆ ಇದು ಎಷ್ಟರ ಮಟ್ಟಿಗೆ ಯಶಸ್ವಿ ಆಗುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!