ಆದಾಯ ಮೀರಿ ಆಸ್ತಿ ಗಳಿಕೆ: ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ ಕೆಎನ್ ಜಗದೀಶ್

Ravi D Channannanavar: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಸಂಬಂಧಿಕರ ಹೆಸರಿನಲ್ಲಿ ಅಕ್ರಮ‌ ಆಸ್ತಿ ಸಂಪಾದನೆ, ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ, ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ಆರೋಪ ಕೇಳಿಬಂದಿದೆ.

ಆದಾಯ ಮೀರಿ ಆಸ್ತಿ ಗಳಿಕೆ: ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ ಕೆಎನ್ ಜಗದೀಶ್
ಕೆಎನ್ ಜಗದೀಶ್. ರವಿ ಡಿ. ಚನ್ನಣ್ಣನವರ್
Follow us
TV9 Web
| Updated By: ganapathi bhat

Updated on: Mar 28, 2022 | 5:02 PM

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಆದಾಯಕ್ಕೂ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಸಂಬಂಧಿಕರ ಹೆಸರಿನಲ್ಲಿ ಅಕ್ರಮ‌ ಆಸ್ತಿ ಸಂಪಾದನೆ, ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ, ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಈ ಆರೋಪದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕಿದೆ, ಹೀಗಾಗಿ ಸಿಬಿಐ, EDಯಿಂದ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ವಕೀಲರ ಮೂಲಕ ರಿಟ್ ಅರ್ಜಿ ಸಲ್ಲಿಸಿದ ಕೆ.ಎನ್. ಜಗದೀಶ್ ತಿಳಿಸಿದ್ದಾರೆ.

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅವರ ತಂದೆ- ತಾಯಿ ಈ ಮೊದಲು ಮಾಧ್ಯಮ ಪ್ರಕಟಣೆ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿರುವಂತೆ ನಮ್ಮದು ಅಕ್ರಮ ಆಸ್ತಿ ಅಲ್ಲ ಎಂದು ರವಿ ಅವರ ತಾಯಿ ರತ್ನವ್ವ ಮತ್ತು ತಂದೆ ದ್ಯಾಮಪ್ಪ ಚನ್ನಣ್ಣವರ್ ಸ್ಪಷ್ಟನೆ ನೀಡಿದ್ದರು. ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರದ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿದ್ದ ಅವರು, 25 ವರ್ಷಗಳಿಂದ ನಮ್ಮ ಕುಟುಂಬಕ್ಕೆ 6 ಎಕರೆ ಪಿತ್ರಾರ್ಜಿತ ಆಸ್ತಿ ಇತ್ತು ಎಂದು ಸ್ಪಷ್ಟಪಡಿಸಿದ್ದರು.

ಸ್ವಂತ ಪರಿಶ್ರಮದಿಂದ ಹಿರಿಯ ಮಗ ಯುಪಿಎಸ್​ಸಿ ತೇರ್ಗಡೆಯಾಗಿ, ಐಪಿಎಸ್ ಅಧಿಕಾರಿಯಾಗಿದ್ದಾನೆ. ನಮ್ಮ ಕಿರಿಯ ಮಗ ರಾಘವೇಂದ್ರ ಚನ್ನಣ್ಣವರ್ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ. ಅವರು ಸುಮಾರು ಐದು ಸ್ಥಳಗಳಲ್ಲಿರುವ ಆಸ್ತಿ ವಿವರ ಪ್ರಕಟಿಸಿದ್ದರು. ಕಿರಿಯ ಮಗನ ಆದಾಯ, ಕೃಷಿ ಆದಾಯದಿಂದ ಆಸ್ತಿ ಗಳಿಸಿರುವ ಆಸ್ತಿಯ ವಿವರಗಳನ್ನೂ ಬಹಿರಂಗಪಡಿಸಿದ್ದರು.

ಕುಟುಂಬ ಸಂಪಾದಿಸಿದ ಆದಾಯ ಮಾಹಿತಿಯನ್ನು ಸಲ್ಲಿಸುತ್ತಿದ್ದೇವೆ. ವ್ಯಾಪಾರದಲ್ಲಿ ಆಸಕ್ತಿಯಿರುವ ಹಿನ್ನೆಲೆಯಲ್ಲಿ ಕಿರಿಯ ಮಗ ಮನೆ ದೇವರು ರೇಣುಕಾ ಎಂಟರ್ ಪ್ರೈಸಸ್ ಹೆಸರಲ್ಲಿ ವ್ಯಾಪಾರ ನಡೆಸಲು ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದ. ನಮ್ಮ ಎಲ್ಲಾ ಆಸ್ತಿ ಪರಿಶ್ರಮದಿಂದಲೇ ಸಂಪಾದಿಸಿದ್ದು ಎಂದು ಅವರು ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಸುದ್ದಿ ಸುಳ್ಳು ಹಾಗೂ ಹೀಗೆ ಸುಳ್ಳುಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧ. ಸುಳ್ಳುಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ರವಿ ಡಿ ಚನ್ನಣ್ಣವರ್ ವಾಲ್ಮೀಕಿ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಕ್ಕೆ ಎಮ್​ಡಿ ಆಗಿ ವರ್ಗಾವಣೆ!!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್