AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛಲವಾದಿ ನಿವಾಸಕ್ಕೆ ಚಾಕು ಪಾರ್ಸೆಲ್: NSUI ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ; ಕಮಿಷನರ್​​ಗೆ ದೂರು

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಸರ್ಕಾರಿ ನಿವಾಸಕ್ಕೆ ಬ್ಲಿಂಕಿಟ್ ಮೂಲಕ ಚಾಕು ಆರ್ಡರ್ ಮಾಡಿದ ವಿಚಾರ ಸದ್ಯ ರಾಜಕೀಯ ಚರ್ಚೆಗೆ ಕಾರಣವಾಗಿದೆ. NSUI ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಛಲವಾದಿ ನಿವಾಸಕ್ಕೆ ಚಾಕು ಪಾರ್ಸೆಲ್: NSUI ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ; ಕಮಿಷನರ್​​ಗೆ ದೂರು
ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು
ಕಿರಣ್​ ಹನಿಯಡ್ಕ
| Edited By: |

Updated on: Nov 07, 2026 | 7:08 PM

Share

ಮುಖ್ಯಾಂಶಗಳು

  • ಛಲವಾದಿ ಸರ್ಕಾರಿ ನಿವಾಸಕ್ಕೆ ಚಾಕು ಪಾರ್ಸೆಲ್
  • ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು
  • NSUI ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು

ಬೆಂಗಳೂರು, ನವೆಂಬರ್​​ 07: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಡಿದ ತುಂಡು ಮಾತು ಇದೀಗ ಮತ್ತೊಂದು ಹಂತಕ್ಕೆ ಹೋಗಿದೆ. ತುಂಡು ಮಾತಿಗೆ ಕೆರಳಿರುವ NSUI ಸದಸ್ಯರು, ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು, ಚೂರಿಗಳನ್ನ ಪಾರ್ಸೆಲ್ ಕಳಿಸಿದ್ದಾರೆ. ಸದ್ಯ ಇದೇ ಪ್ರಕರಣ ಪೊಲೀಸ್ ಆಯುಕ್ತರ ಕಚೇರಿವರೆಗೂ ಹೋಗಿದ್ದು, ಬಿಜೆಪಿ ನಿಯೋಗ ಸೀಮಂತ್ ಕುಮಾರ್ ಸಿಂಗ್​​ಗೆ ದೂರು ನೀಡಿದ್ದಾರೆ.

ಬಿಜೆಪಿ ನಿಯೋಗ ನೀಡಿದ ದೂರಿನಲ್ಲಿ ಏನಿದೆ?

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಗೆ 10 ರಿಂದ 20 ಮೊಬೈಲ್ ನಂಬರ್‌ಗಳಿಂದ ಚಾಕು, ಚೂರಿ ಅಂತಹ ಮಾರಕ ವಸ್ತುಗಳನ್ನು ಬುಕ್ ಮಾಡಿದ್ದ ಪಾರ್ಸಲ್‌ನ್ನು 8 ರಿಂದ 10 ಜನ ಕಾಂಗ್ರೆಸ್ ಪಕ್ಷದ ಎನ್‌ಎಸ್‌ಯುವ ಹುಡುಗರು ಛಲವಾದಿ ನಾರಾಯಣಸ್ವಾಮಿಯವರ ಮನೆಯ ಹತ್ತಿರ ಬಂದು, ಗೇಟ್ ಸುತ್ತ ಸುತ್ತುವರಿದು, ಭಯ ಭೀತಿಯನ್ನು ಹುಟ್ಟಿಸುತ್ತಿದ್ದರು.

ಇದನ್ನೂ ಓದಿ: ‘ಕಾಂಗ್ರೆಸನ್ನ ತುಂಡುತುಂಡಾಗಿ ಕತ್ತರಿಸುತ್ತಾರೆ’: ವ್ಯಕ್ತಿಯೋರ್ವನಿಂದ ಛಲವಾದಿ ನಿವಾಸಕ್ಕೆ ಚಾಕು ಆರ್ಡರ್!​​ ​​

ಇಂತಹ ಗೂಂಡಾ ಸಂಸ್ಕೃತಿಯ ಎನ್‌ಎಸ್‌ಯುಐ ಕಾರ್ಯಕರ್ತರು ಇಂತಹ ಕೆಲಸಗಳಲ್ಲಿ ತೊಡಗಲು ಕುಮ್ಮಕ್ಕು ನೀಡಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು, ಗೃಹ ಮಂತ್ರಿಗಳು ನೇರ ಕಾರಣರಾಗಿರುತ್ತಾರೆ. ಕೆಪಿಸಿಸಿ ಕಾರ್ಯದರ್ಶಿ ಮನೋಹರ್ ಮತ್ತು ಸಹಚರರು ಸಾಕಷ್ಟು ಬಾರಿ ಮನೆ ಮುಂದೆ ಪ್ರತಿಭಟನೆ ಮಾಡಿದ್ದು, ಇದಕ್ಕೆಲ್ಲಾ ಯಾರು ಕುಮ್ಮಕ್ಕು ನೀಡುತ್ತಿದ್ದಾರೆ.

LIVE TV

ಛಲವಾದಿ ನಾರಾಯಣಸ್ವಾಮಿ ಮನೆಯ ಅಕ್ಕ-ಪಕ್ಕದಲ್ಲಿ ಅನೇಕ ಮಂತ್ರಿಗಳ ಹಾಗೂ ಹೈಕೋರ್ಟ್‌ ನ್ಯಾಯಾಧೀಶರ ಮನೆಗಳಿವೆ. ಆನ್‌ಲೈನ್ ವ್ಯವಹಾರಿಕ ಸಂಸ್ಥೆಯಾದ ಬ್ಲಿಂಕಿಟ್ ಯಾವುದೇ ವಸ್ತುಗಳನ್ನು ಪಾರ್ಸಲ್ ಕೊಡುವ ಮುಂಚೆ ಪರಿಶೀಲಿಸಬೇಕಾಗಿರುತ್ತದೆ. ಇದ್ಯಾವುದನ್ನೂ ಪರಿಶೀಲಿಸದೇ ಏಕಾಏಕಿ ಮಾರಕ ವಸ್ತುಗಳನ್ನು ಪಾರ್ಸಲ್ ಮೂಲಕ ಕೊಟ್ಟಿರುವುದು ಸಂಸ್ಥೆಯ ಸಂಶಯಕ್ಕೆ ಕಾರಣವಾಗಿದ್ದು, ಅದರ ಪರವಾನಗಿ ರದ್ದು ಪಡಿಸುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ: ನನ್ನ ಹೇಳಿಕೆಯನ್ನು ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಸ್ಪಷ್ಟನೆ

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಪ್ರತಿಭಟನೆಗಳು, ಭಯದ ವಾತಾವರಣ ಸೃಷ್ಟಿಸುತ್ತಿರುವವರ ಪತ್ತೆ ಹಚ್ಚಿ, ಪ್ರಕರಣವನ್ನು ದಾಖಲಿಸಿ, ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕ್ರಮ ಆಗದಿದ್ರೆ ಹೋರಾಟ ಎಂದ ಛಲವಾದಿ ನಾರಾಯಣಸ್ವಾಮಿ

ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ‘ಇಡೀ ಬೆಳವಣಿಗೆ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ. 1 ವಾರದಿಂದ ಕಾಂಗ್ರೆಸ್ ಗೂಂಡಾಗಳು ನನ್ನ ಮನೆ ಬಳಿ ಧರಣಿ ಮಾಡುತ್ತಿದ್ದಾರೆ. ಇಂದು ಪ್ರಚೋದನೆ ಮಾಡಲು ಮನೆಗೆ ಚಾಕು, ಚೂರಿ ಕಳಿಸಿದ್ದಾರೆ. ಧಮ್ಕಿ ಹಾಕುವುದು, ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಸತ್ಯ ಹೇಳಲು ಹೆದರಬೇಕಾಗಿಲ್ಲ. ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಕಾದು ನೋಡುತ್ತೇವೆ, ಕ್ರಮ ಆಗದಿದ್ರೆ ಹೋರಾಟ ಮಾಡುತ್ತೇವೆ’ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!
ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!
ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!
ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್