Ganesha Chaturthi 2021: ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅವಕಾಶ, ತಜ್ಞರ ಸಲಹೆ ಏನು?
ಗಣೇಶ ಹಬ್ಬ ಆಚರಣೆ ವೇಳೆ ಹಲವು ನಿರ್ಬಂಧಕ್ಕೆ ಷರತ್ತುಬದ್ಧ ಅವಕಾಶವನ್ನು ನೀಡುವಂತೆ ತಜ್ಞರಿಂದ ಸಲಹೆ ಕೇಳಿ ಬಂದಿದೆ. ಆದ್ರೆ ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಅವಕಾಶ ನೀಡಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸೇರಿದಂತೆ ಹಲವು ಸಮಿತಿಗಳಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆತಂಕವಿರುವ ಹಿನ್ನೆಲೆಯಲ್ಲಿ ಗಣೇಶ ಹಬ್ಬ ಆಚರಣೆ ವೇಳೆ ಹಲವು ನಿರ್ಬಂಧಕ್ಕೆ ಷರತ್ತುಬದ್ಧ ಅವಕಾಶವನ್ನು ನೀಡುವಂತೆ ತಜ್ಞರಿಂದ ಸಲಹೆ ಕೇಳಿ ಬಂದಿದೆ. ಆದ್ರೆ ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಅವಕಾಶ ನೀಡಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸೇರಿದಂತೆ ಹಲವು ಸಮಿತಿಗಳಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ. ಈಗಾಗಲೇ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಗಣೇಶ ಹಬ್ಬ ಆಚರಣೆ ಬಗ್ಗೆ ಸಿಎಂರಿಂದ ಅಧಿಕೃತ ಮಾಹಿತಿ ಹೊರ ಬೀಳಲಿದೆ.
ಗೌರಿ ಗಣೇಶ ಹಬ್ಬಕ್ಕೆ ತಜ್ಞರ ಸಲಹೆ ಏನು? 1 ಗಣೇಶ ಹಬ್ಬವನನ್ನ ಸರಳವಾಗಿ ತಮ್ಮ ತಮ್ಮ ಮನೆಯಲ್ಲಿ ಹಾಗೂ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ 2 ಸಾರ್ವಜನಿಕ ಸ್ಥಳ, ಹೊರಾಂಗಣ ವೇದಿಕೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಈ ವರ್ಷವೂ ಅವಕಾಶ ಡೌಟ್ 3 ಹೊರಾಂಗಣ ವೇದಿಕೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ರು ಕಡ್ಡಾಯ ಮಾರ್ಗಸೂಚಿ ಪಾಲನೆ ಮಾಡಬೇಕು 4 ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡಲು ನಿರ್ಬಂಧ 5 ಉತ್ಸವ ಹಾಗೂ ಮನರಂಜನಾ ಕಾರ್ಯಕ್ರಮಕ್ಕೆ ಬ್ರೇಕ್ 6 ಪಾರಂಪರಿಕ ಮೂರ್ತಿಗಳನ್ನ ಮನೆಯಲ್ಲಿಯೇ ವಿಸರ್ಜನೆ ಮಾಡಬೇಕು ಅಥವಾ ಸಮಿಪದ ಪಾಲಿಕೆಯ ಜಿಲ್ಲಾಡಳಿತ ಹೊಂಡ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಬೇಕು 7 ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಕಡ್ಡಾಯ 8 ದೇವಸ್ಥಾನಗಳಲ್ಲಿ ದರ್ಶನಕ್ಕೆ ಬರೊ ಭಕ್ತರಿಗೆ ಕಡ್ಡಾಯ ಥರ್ಮಲ್ ಸ್ಕೀನಿಂಗ್ ಮಾಸ್ಕ್ ಕಡ್ಡಾಯ 9 ದೇವಸ್ಥಾನಗಳಲ್ಲಿ ಆರು ಅಡಿಗೊಂದರಂತೆ ಮಾರ್ಕ್ ಮಾಡಬೇಕು ಭಕ್ತರು ಕಡ್ಡಾಯ ಸಾಮಾಜಿಕ ಅತಂರ ಕಾಪಾಡುವಂತೆ ನೋಡಿಕೊಳ್ಳಬೇಕು 10 ಗೌರಿ – ಗಣೇಶ ಹಬ್ಬದ ವೇಳೆ ಹೆಚ್ಚು ಜನದಟ್ಟಣೆಯಾಗದಂತೆ ಕ್ರಮವಹಿಸುವುದು. ಹೀಗೆ ಕೆಲವು ಸಲಹೆಗಳನ್ನು ತಜ್ಞರು ನೀಡಿದ್ದಾರೆ.
ಇದನ್ನೂ ಓದಿ: Ganesh Chaturthi 2021: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ? ಇಂದು ಸಭೆ ಕರೆದ ಸಿಎಂ ಬೊಮ್ಮಾಯಿ
Published On - 11:08 am, Mon, 30 August 21