ಏಷ್ಯನ್‌‌ ಗೇಮ್ಸ್‌ ಪದಕ ವಿಜೇತರಿಗೆ ಬಹುಮಾನ ಮೊತ್ತ ಹೆಚ್ಚಳ: ಸರ್ಕಾರಕ್ಕೆ ಡಾ.ಕೆ.ಗೋವಿಂದರಾಜ್‌ ಅಭಿನಂದನೆ

ಏಷ್ಯನ್‌‌ ಗೇಮ್ಸ್‌ ಪದಕ ವಿಜೇತರಿಗೆ ನಗದು ಬಹುಮಾನ ಮೊತ್ತವನ್ನು ಹೆಚ್ಚಿಸಿದ ರಾಜ್ಯ ಸರ್ಕಾರದ ತೀರ್ಮಾನವನ್ನು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಡಾ.ಕೆ.ಗೋವಿಂದರಾಜ್ ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರದ ತೀರ್ಮಾನದಿಂದ ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗಿದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏಷ್ಯನ್‌‌ ಗೇಮ್ಸ್‌ ಪದಕ ವಿಜೇತರಿಗೆ ಬಹುಮಾನ ಮೊತ್ತ ಹೆಚ್ಚಳ: ಸರ್ಕಾರಕ್ಕೆ ಡಾ.ಕೆ.ಗೋವಿಂದರಾಜ್‌ ಅಭಿನಂದನೆ
ಸರ್ಕಾರಕ್ಕೆ ಡಾ.ಕೆ.ಗೋವಿಂದರಾಜ್‌ ಅಭಿನಂದನೆ
Image Credit source: Tv9 Kannada

Updated on: Oct 06, 2026 | 5:51 PM

ಬೆಂಗಳೂರು, ಅಕ್ಟೋಬರ್​​ 06: ಕರ್ನಾಟಕದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಷ್ಯನ್‌‌ ಗೇಮ್ಸ್‌ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿದ ರಾಜ್ಯದ ಸರ್ಕಾರದ ತೀರ್ಮಾನವನ್ನು ಫಿಬಾ ಮತ್ತು ಕರ್ನಾಟಕ ಒಲಿಂಪಿಕ್‌ ಸಂಸ್ಥೆ (ಕೆಒಎ) ಅಧ್ಯಕ್ಷರು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಡಾ.ಕೆ.ಗೋವಿಂದರಾಜ್‌ ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರೂ ಆದ ಡಾ.ಜಿ. ಪರಮೇಶ್ವರ ಅವರು ಮಹತ್ವದ ತೀರ್ಮಾನಕೈಗೊಂಡಿದ್ದು, ಕರ್ನಾಟಕದ ಕ್ರೀಡಾಪಟುಗಳ ಪರವಾಗಿ ಹಾಗೂ ಕೆಒಎ ಪರವಾಗಿ ಅವರಿಗೆ ಧನ್ಯವಾದ ತಿಳಿಸೋದಾಗಿ ಹೇಳಿದ್ದಾರೆ.

‘ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ’

ಈ ಹಿಂದೆ ಚಿನ್ನದ ಪದಕ ವಿಜೇತರಿಗೆ 35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ 15 ಲಕ್ಷ ನಗದು ಪುರಸ್ಕಾರ ನೀಡಲಾಗುತ್ತಿತ್ತು. ಪರಿಷ್ಕೃತ ಮೊತ್ತದ ಪ್ರಕಾರ, ಚಿನ್ನದ ಪದಕ ವಿಜೇತರಿಗೆ 1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ 50 ಲಕ್ಷ ರೂಪಾಯಿ ಮೊತ್ತವನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ತೀರ್ಮಾನದಿಂದ ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗಿದೆ ಎಂದು ಡಾ.ಕೆ.ಗೋವಿಂದರಾಜ್‌ ಹೇಳಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಡಿಕೆಶಿ ಸನ್ಮಾನ: ರಾಜ್ಯ ಸರ್ಕಾರದಿಂದ ನಗದು ಬಹುಮಾನ ಹೆಚ್ಚಳ ಘೋಷಣೆ

ಏಷ್ಯನ್ ಗೇಮ್ಸ್‌ನಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಜೊತೆಗೆ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಸರ್ಕಾರ ಬಹುಮಾನ ಮೊತ್ತವನ್ನು ಪರಿಷ್ಕರಿಸಿರುವುದು ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಅವರ ಜವಾಬ್ದಾರಿಯನ್ನು ಹೆಚ್ಚಿಸಿದಂತಾಗಿದೆ. ಮುಂಬರುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳ ರಾಜ್ಯದ ಕ್ರೀಡಾಪಟುಗಳು ಹೆಚ್ಚಿನ ಪದಕ ಜಯಿಸುವಂತಾಗಲಿ ಎಂಬುದೇ ನನ್ನ ಆಶಯ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:49 pm, Tue, 6 October 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us