AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಲೇಔಟ್: ಅಕ್ರಮ ಮನೆಗೆ 1 ರಿಂದ 2 ಲಕ್ಷ ರೂ. ವಸೂಲಿ, ಸರ್ಕಾರಿ ಭೂಮಿ ಕಬಳಿಸಿ ತನ್ನದೇ ಹೆಸರಿಟ್ಟಿದ್ದ ಆರೋಪಿ!

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅಕ್ರಮ ಮನೆಗಳನ್ನು ನಿರ್ಮಿಸಿದ್ದ ಪ್ರಕರಣದ ಸ್ಫೋಟಕ ಮಾಹಿತಿ ಈಗ ಬೆಳಕಿಗೆ ಬಂದಿದೆ. ಭೂ ಮಾಫಿಯಾ ಅಕ್ರಮ ಮನೆ ನಿರ್ಮಾಣಕ್ಕೆ ಹಣ ಪಡೆದಿರುವುದು ಬಯಲಾಗಿದ್ದು, ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಇಬ್ಬರನ್ನು ಬಂಧಿಸಲಾಗಿದೆ. ಆರೋಪಿ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದಲ್ಲದೆ, ತನ್ನದೇ ಹೆಸರಿನಲ್ಲಿ ಲೇಔಟ್ ಸಹ ಮಾಡಿಕೊಂಡಿದ್ದ!

ಕೋಗಿಲು ಲೇಔಟ್: ಅಕ್ರಮ ಮನೆಗೆ 1 ರಿಂದ 2 ಲಕ್ಷ ರೂ. ವಸೂಲಿ, ಸರ್ಕಾರಿ ಭೂಮಿ ಕಬಳಿಸಿ ತನ್ನದೇ ಹೆಸರಿಟ್ಟಿದ್ದ ಆರೋಪಿ!
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on: Jan 08, 2026 | 7:04 AM

Share

ಬೆಂಗಳೂರು, ಜನವರಿ 8: ಕೋಗಿಲು ಲೇಔಟ್​ನಲ್ಲಿ (Kogilu Layout) ಬೀದಿಗೆ ಬಿದ್ದವರು ಮನೆಗಾಗಿ ಎದುರು ನೋಡುತ್ತಿದ್ದಾರೆ. ಪರ-ವಿರೋಧದ ಮಧ್ಯೆಯೇ ಕಾಂಗ್ರೆಸ್ ಸರ್ಕಾರ ನಿರಾಶ್ರಿತರಿಗೆ ಮನೆ ಕೊಡುವುದಕ್ಕೆ ಮುಂದಾಗಿದೆ. ಅರ್ಹತೆ ಹೊಂದಿರುವವರಿಗೆ ಮಾತ್ರವೇ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಕೊಡಲುನಿರ್ಧರಿಸಿದೆ. ಪ್ರಾಥಮಿಕ ಹಂತದಲ್ಲಿ ಅಂದಾಜು 37 ಅರ್ಜಿಗಳು ಮಾತ್ರ ಅರ್ಹತೆ ಹೊಂದಿವೆ. 5 ವರ್ಷಗಳಿಗಿಂತ ಹಳೆಯ ದಾಖಲೆಗಳು ಇದ್ದು, ಅವರು ಇಲ್ಲೇ ನೆಲೆಸಿದ್ದಾರೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ. ಆದರೆ ಈಗ ಅಕ್ರಮ ಒತ್ತುವರಿ ಪ್ರಕರಣದಲ್ಲಿ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡವರು ತಲಾ ಒಂದರಿಂದ 2 ಲಕ್ಷ ರೂಪಾಯಿ ನೀಡಿರುವ ವಿಚಾರವೂ ಬಹಿರಂಗವಾಗಿದೆ.

ಭೂ ಕಬಳಿಕೆಯಲ್ಲಿ ಭಾಗಿಯಾಗಿದ್ದ ನಾಲ್ವರ ವಿರುದ್ಧ ಎಫ್​ಐಆರ್

ಅಕ್ರಮವಾಗಿ ಮನೆ ನಿರ್ಮಿಸಲು ಹಣ ಪಡೆದವರಿಗೀಗ ಸಂಕಷ್ಟ ಎದುರಾಗಿದೆ. ಆರೋಪಿಗಳಾದ ವಿಜಯ್, ವಸೀಂ, ಮುನಿ ಆಂಜಿನಪ್ಪ, ರಾಬಿನ್ ಹೀಗೆ ನಾಲ್ವರ ವಿರುದ್ಧ ಜನರಿಂದ ಹಣ ಪಡೆದು, ಸರ್ಕಾರ ಜಾಗ ಅತಿಕ್ರಮಣ ಮಾಡಿದ ಆರೋಪದಡಿ ಕೇಸ್ ದಾಖಲಾಗಿದೆ. ಅದರಲ್ಲೂ A2 ವಾಸೀಂ, ಸರ್ಕಾರಿ ಜಾಗ ಅತಿಕ್ರಮ ಮಾಡಿದ್ದು ಅಲ್ಲದೇ, ಆ ಜಾಗಕ್ಕೆ ವಾಸೀಂ ಲೇಔಟ್ ಅಂತಾ ಹೆಸರಿಟ್ಟಿದ್ದ. ಕೇಸ್ ದಾಖಲಾಗುತ್ತಿದ್ದಂತೆಯೇ ಆರೋಪಿಗಳಾದ ವಾಸಿಮ್ ಬೇಗ್ ಮತ್ತು ವಿಜಯ್‌ಕುಮಾರ್‌ನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಕೋರ್ಟ್‌ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ.

ಸರ್ಕಾರಿ ಜಾಗ ಕಬಳಿಸಿ ಆ ಜಾಗಕ್ಕೆ ತಮ್ಮದೇ ಹೆಸರಿಟ್ಟಿದ ಆರೋಪಿಗಳು!

2023ರಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. ಆ ಪ್ರಕಾರ 14 ಎಕರೆ 36 ಗುಂಟೆ ಜಮೀನಿನಲ್ಲಿ ಘಟಕ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿತ್ತು. BSWML ವತಿಯಿಂದ 2023 ರಲ್ಲಿ ಬಯೋಮೆಥನೈಸೇಷನ್ ಘಟಕ, ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಮಾಡಲು ಟೆಂಡರ್ ಆಹ್ವಾನಿಸಲಾಗಿತ್ತು ಆದರೆ ಘಟಕ ನಿರ್ಮಾಣಕ್ಕೂ ಮೊದಲೇ 4 ಎಕರೆ ಪ್ರದೇಶ ಒತ್ತುವರಿ ಮಾಡಿದ್ದು ಗೊತ್ತಾಗಿದೆ. ಆ ಬಳಿಕ 167 ಕಚ್ಚಾ ಮನೆಗಳನ್ನು ಒತ್ತುವರಿ ತೆರವು ಮಾಡಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ವೇಳೆ ಮನೆ ಕಟ್ಟಿಕೊಳ್ಳಲು ಹಣ ಪಡೆದು ಅವಕಾಶ ನೀಡಿದ್ದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಹೈಕೋರ್ಟ್‌ನಲ್ಲಿ ಕೋಗಿಲು ವಿಚಾರವಾಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಬುಧವಾರ ನಡೆದಿದೆ. ಮನೆ ತೆರವಿನಿಂದ ವಸತಿ ರಹಿರತರಾಗಿದ್ದಾರೆ, ಅವರಿಗೆ ಪುನರ್ವಸತಿ ಕಲ್ಪಿಸಬೇಕು ಪರಿಹಾರ ನೀಡಬೇಕು ಎಂದು ಅರ್ಜಿದಾರರ ವಾದಿಸಿದರು. ಇದಕ್ಕೆ ಆಕ್ಷೇಪವೆತ್ತಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, 28 ವರ್ಷಗಳಿಂದ ವಾಸಿಸುತ್ತಿದ್ದಾರೆಂಬುದು ಸುಳ್ಳು ಎಂದರು. ಸರ್ಕಾರದಿಂದ ಊಟ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರತಿವಾದ ಮಂಡಿಸಿದರು. ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶವನ್ನು ಸರ್ಕಾರ ಕೋರಿದ್ದರಿಂದ ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ