ಕೋಲಾರ: ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಕೋಲಾರ ತಾಲೂಕಿನ ಮಣಿಯನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀಪತಿ ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಚಂದ್ರಕಲಾ ಹತ್ಯೆ ಮಾಡಿದ್ದ. 2019ರ ಜನವರಿ 21 ರಂದು ಪತ್ನಿಯನ್ನು ಸ್ವತಃ ಪತಿಯೇ ಕೊಲೆ ಮಾಡಿದ್ದ.

ಕೋಲಾರ: ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ
ಪ್ರಾತಿನಿಧಿಕ ಚಿತ್ರ

ಕೋಲಾರ: ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಒಂದನೇ ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಮಣಿಯನಹಳ್ಳಿ ನಿವಾಸಿ ಲಕ್ಷ್ಮೀಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೋಲಾರ ತಾಲೂಕಿನ ಮಣಿಯನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀಪತಿ ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಚಂದ್ರಕಲಾ ಹತ್ಯೆ ಮಾಡಿದ್ದ. 2019ರ ಜನವರಿ 21 ರಂದು ಪತ್ನಿಯನ್ನು ಸ್ವತಃ ಪತಿಯೇ ಕೊಲೆ ಮಾಡಿದ್ದ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಚಿಕ್ಕಬಳ್ಳಾಪುರ: ಅತ್ಯಾಚಾರ ಆರೋಪಿಗೆ ಕಠಿಣ ಕಾರಾಗೃಹ
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರ ಆರೋಪಿಗೆ 13 ವರ್ಷ ಕಠಿಣ ಕಾರಾಗೃಹ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೀಗೆ ತೀರ್ಪು ನೀಡಿದೆ. ನ್ಯಾಯಾಧೀಶರಾದ ಬಿ.ಸಿ. ಭಾನುಮತಿ ಅವರಿಂದ ತೀರ್ಪು ನೀಡಲಾಗಿದೆ. 2018 ರ ಆಗಸ್ಟ್ 27 ರಂದು ಈ ಅತ್ಯಾಚಾರ ಪ್ರಕರಣ ನಡೆದಿತ್ತು. ಗೌರಿಬಿದನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಭಿಯೋಜಕ ಮುನಿರೆಡ್ಡಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ಹೆಂಡತಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು!

ಇದನ್ನೂ ಓದಿ: ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದವನ ಹತ್ಯೆ ಮಾಡಿದ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್​..

Click on your DTH Provider to Add TV9 Kannada