ಕೊಪ್ಪಳ ಕಲುಷಿತ ನೀರು ಪ್ರಕರಣ: ಅನಾಹುತ ಮರುಕಳಿಸಿದರೆ ಸಿಇಒ ಸಸ್ಪೆಂಡ್ -ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳ ಜಿ.ಪಂ. ಸಿಇಒಗೆ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಅನಾಹುತ ಮರುಕಳಿಸಿದರೆ ಕೊಪ್ಪಳ ಜಿ.ಪಂ. ಸಿಇಒ ನೇರಹೊಣೆಯಾಗುತ್ತಾರೆ. ಸಿಇಒ ಅಮಾನತು ಮಾಡುವುದಾಗಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕೊಪ್ಪಳ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ(Koppal Contaminated Water) ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಸೂಚನೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಪ್ರಕರಣ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೂ ನೀವು ಜನರನ್ನು ಸಾಯಿಸಲು ಇರೋದಾ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ 8 ಜಿಲ್ಲೆಗಳ ಡಿಸಿಗಳು, ಜಿ.ಪಂ. ಸಿಇಒಗಳ ಜೊತೆ ಸಭೆ ನಡೆಸಿದರು. ಈ ವೇಳೆ ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳ ಜಿ.ಪಂ. ಸಿಇಒಗೆ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ. ಕಳಪೆ ಕಾಮಗಾರಿಯೇ ಕಲುಷಿತ ನೀರಿಗೆ ಕಾರಣ. ಮತ್ತೆ ಈ ರೀತಿಯ ಅನಾಹುತ ಮರುಕಳಿಸಿದರೆ ಕೊಪ್ಪಳ ಜಿ.ಪಂ. ಸಿಇಒ ನೇರಹೊಣೆಯಾಗುತ್ತಾರೆ. ಸಿಇಒ ಅಮಾನತು ಮಾಡುವುದಾಗಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಮೊದಲ ಅನಾಹುತ ಸಂಭವಿಸಿದಾಗಲೇ ಯಾಕೆ ಎಚ್ಚೆತ್ತುಕೊಳ್ಳಲಿಲ್ಲ? ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ. ಮತ್ತೆ ಕಲುಷಿತ ನೀರಿನ ಅನಾಹುತವಾದ್ರೆ ನೀವೇ ಹೊಣೆ ಆಗುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ: ಕೊಪ್ಪಳ: ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ
ಇನ್ನು ಈ ಬಗ್ಗೆ ತನಿಖೆ ನಡೆಸುವಂತೆ ಸಿಎಸ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಕಲುಷಿತ ನೀರಿನ ಬಗ್ಗೆ ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡ ಕಳುಹಿಸಿ ತನಿಖೆ ನಡೆಸುತ್ತೇವೆ. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿದ್ದರಾಮಯ್ಯ ತಿಳಿಸಿದರು.
ಕೊಪ್ಪಳದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ