Kota Srinivas Poojary: ದೇವಸ್ಥಾನಗಳನ್ನು ಭಕ್ತರ ಕೈಗೆ ನೀಡಬೇಕೆಂಬುದು ನಮ್ಮ ಚಿಂತನೆ -ಸಚಿವ ಶ್ರೀನಿವಾಸ ಪೂಜಾರಿ

ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬುದು ನಮ್ಮ ಚಿಂತನೆ. ಭಕ್ತರು ಅಂದ್ರೆ ಬಿಜೆಪಿ, RSS ಕಾರ್ಯಕರ್ತರು ಆಗಿರಬಹುದು. ಡಿ.ಕೆ.ಶಿವಕುಮಾರ್ ಕೂಡ ಆಗಿರಬಹುದು ಎಂದ ಬೆಂಗಳೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ಕೊಟ್ಟಿದ್ದಾರೆ.

TV9kannada Web Team

| Edited By: Ayesha Banu

Dec 31, 2021 | 1:41 PM

ಬೆಂಗಳೂರು: ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಾಲಯ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿ ಡಿಕೆಶಿ ಆರೋಪಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ಕೊಟ್ಟಿದ್ದಾರೆ. ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬುದು ನಮ್ಮ ಚಿಂತನೆ. ಭಕ್ತರು ಅಂದ್ರೆ ಬಿಜೆಪಿ, RSS ಕಾರ್ಯಕರ್ತರು ಆಗಿರಬಹುದು. ಡಿ.ಕೆ.ಶಿವಕುಮಾರ್ ಕೂಡ ಆಗಿರಬಹುದು ಎಂದ ಬೆಂಗಳೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ಕೊಟ್ಟಿದ್ದಾರೆ.

ಇದೇ ವೇಳೆ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರು ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್‌ಐ ಸಸ್ಪೆಂಡ್ ಆಗಿದ್ದಾರೆ. ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‌ಟೇಬಲ್ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ದೆ. ಅಲ್ಲಿರುವ ಪರಿಸ್ಥಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ. ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್‌ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನುಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ. ಕೊರಗರ, ಗಿರಿ ಜನರ,ದಲಿತ ಬಂಧುಗಳಿಗೆ ಭಯ ಪಡುವ ಅವಶ್ಯಕತೆ ಇಲ್ಲ. ನಾನು,ಗೃಹ ಸಚಿವರು,ಸರ್ಕಾರ ನಿಮ್ಮ ಜತೆ ಇದ್ದೇವೆ. ಏನಾದರೂ ಇದ್ರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Follow us on

Click on your DTH Provider to Add TV9 Kannada