ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ; ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ ಸಿಬ್ಬಂದಿ ವಿಕೃತಿ!

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದ ವೈಶಾಖ ಮಹೋತ್ಸವದಲ್ಲಿ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, 1,000 ರೂಪಾಯಿ ವಿಐಪಿ ಟಿಕೆಟ್ ಹೆಸರಿನಲ್ಲಿ ನಡೆಯುತ್ತಿರುವ ಸ್ಕ್ಯಾಮ್ ಸಹ ಬಯಲಾಗಿದೆ. ಹೀಗಾಗಿ ಯಾರೂ ಈ ದೇವಸ್ಥಾನಕ್ಕೆ ಬರಬೇಡಿ ಎಂದು ಕನ್ನಡಿಗರು ವೀಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ; ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ ಸಿಬ್ಬಂದಿ ವಿಕೃತಿ!
ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗ ಭಕ್ತರ ಮೇಲೆ ದೌರ್ಜ

Updated on: Jun 08, 2026 | 12:37 PM

ಬೆಂಗಳೂರು, ಜೂನ್ 08: ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡಿ, ಅವರ ಮೇಲೆ ಕಾಲಿನಿಂದ ನೀರು ಎರಚಿ ವಿಕೃತಿ ಮೆರೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗ ಭಕ್ತರ ಮೇಲೆ ದೌರ್ಜನ್ಯ ನಡೆದಿದೆ.
  • ಮಹಿಳಾ ಭಕ್ತರನ್ನು ತಳ್ಳಾಡಿ ದೇವಸ್ಥಾನದ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
  • ಯಾರೂ ಕೊಟ್ಟಿಯೂರಿಗೆ ಬರಬೇಡಿ ಎಂದು ಅಲ್ಲಿಗೆ ಹೋಗಿರುವ ಕನ್ನಡಿಗರು ಮನವಿ ಮಾಡಿದ್ದಾರೆ.

ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವರ್ಷಕ್ಕೊಮ್ಮೆ ವೈಶಾಖ ಮಹೋತ್ಸವ ನಡೆಯುತ್ತದೆ. ಈ ವೇಳೆ ಮೇ ಅಥವಾ ಜೂನ್ ಒಂದು ತಿಂಗಳು ಮಾತ್ರ ಈ ದೇವಸ್ಥಾನ ತೆರೆದಿರುತ್ತದೆ. ವರ್ಷದ ಇನ್ನುಳಿದ ಕಾಲ ದೇವರ ದರ್ಶನವಿರುವುದಿಲ್ಲ. ಕಳೆದ ವರ್ಷ ಸೋಶಿಯಲ್ ಮೀಡಿಯಾ ರೀಲ್ಸ್‌ಗಳ ಮೂಲಕ ಈ ಕ್ಷೇತ್ರ ವೈರಲ್ ಆಗಿದ್ದರಿಂದ, ಈ ಬಾರಿ ಕರ್ನಾಟಕದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಕನ್ನಡಿಗರು ಬಸ್, ಕಾರುಗಳ ಮೂಲಕ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಅಲ್ಲಿ ಕನ್ನಡಿಗರಿಗೆ ಕನಿಷ್ಠ ಗೌರವವೂ ಸಿಗುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಅಳಲು ತೋಡಿಕೊಂಡಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ವಿಐಪಿ ಟಿಕೆಟ್ ಸ್ಕ್ಯಾಮ್

ಶಿವನ ದರ್ಶನಕ್ಕೆ 8 ರಿಂದ 10 ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದ್ದು, ಇಲ್ಲಿ 1,000 ರೂಪಾಯಿ ಮುಖಬೆಲೆಯ ವಿಐಪಿ ಟಿಕೆಟ್ ಹೆಸರಿನಲ್ಲಿ ದೊಡ್ಡ ಸ್ಕ್ಯಾಮ್ ನಡೆಯುತ್ತಿದೆ. ಹಣ ಕೊಟ್ಟರೂ ಸರಿಯಾಗಿ ದರ್ಶನ ಭಾಗ್ಯ ಸಿಗುತ್ತಿಲ್ಲ. ಹೆಣ್ಣುಮಕ್ಕಳು ಗಂಟೆಗಟ್ಟಲೆ ಸಾಲಿನಲ್ಲಿ ನಿಂತಿದ್ದರೂ ಮುಂದೆ ಹೋಗಲು ಬಿಡದೆ, ಕೈ ಹಿಡಿದು ಕೆಟ್ಟದಾಗಿ ನೂಕುತ್ತಿದ್ದಾರೆ ಎಂದು ಕರ್ನಾಟಕದ ಭಕ್ತರು ಅಳಲು ತೋಡಿಕೊಂಡಿದ್ದಾರೆ. ಇದೇ ವೇಳೆ ದೇವಸ್ಥಾನದ ಸಿಬ್ಬಂದಿ ಮಹಿಳೆಯರ ಮೇಲೆ ಕಾಲಿನಿಂದ ನೀರು ಎರಚುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಕೊಟ್ಟಿಯೂರಿಗೆ ಕನ್ನಡಿಗರು ಬರಬೇಡಿ ಎಂದು ಭಕ್ತರ ಮನವಿ

ಮಲಯಾಳಂ ಭಾಷೆ ಬಾರದ ಕನ್ನಡಿಗರನ್ನು ಗುರಿಯಾಗಿಸಿಕೊಂಡು ಅಲ್ಲಿನ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ಕೇರಳದ ಭಕ್ತರು ನಮ್ಮ ಧರ್ಮಸ್ಥಳ, ಉಡುಪಿಗೆ ಬಂದಾಗ ನಾವು ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ. ಆದರೆ ಇಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹೀಗಾಗಿ ಯಾರೂ ಕೊಟ್ಟಿಯೂರಿಗೆ ಬರಬೇಡಿ ಎಂದು ಅಲ್ಲಿಗೆ ಹೋಗಿರುವ ಭಕ್ತರೇ ವಿಡಿಯೋ ಮಾಡಿ ಕನ್ನಡಿಗರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ದರ್ಶನಕ್ಕೆ ವ್ಯವಸ್ಥಿತ ಮಾರ್ಗವಿಲ್ಲದೆ ಭಕ್ತರು ಗೇಟ್ ಬಳಿಯೇ ಪರದಾಡುವಂತಾಗಿದ್ದು, ತಮಗೆ ಬೇಕಾದವರನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ. ದೇವರ ಸನ್ನಿಧಿಯಲ್ಲಿ ನಡೆದಿರುವ ಈ ಅಮಾನವೀಯ ವರ್ತನೆಗೆ ಕನ್ನಡಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us