ಹೋಟೆಲ್ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಸಸ್ಪೆಂಡ್

ಕಳೆದ 5 ದಿನದ ಹಿಂದೆ ಪಿಐ ಗೋಪಾಲಕೃಷ್ಣಗೌಡ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯ ಹೋಟೆಲ್ಯೊಂದಕ್ಕೆ ತೆರಳಿದ್ದರು. ಈ ವೇಳೆ ರೂಮ್ ನೀಡುವಂತೆ ಮಹಿಳಾ ಸಿಬ್ಬಂದಿ ಜೊತೆ ಪಿಐ ಗಲಾಟೆ ಮಾಡಿದ್ದಾರೆ. ಗಲಾಟೆಮಾಡಿ ಅನುಚಿತವಾಗಿ ವರ್ತಿಸಿದ್ದಾರೆ.

ಹೋಟೆಲ್ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಸಸ್ಪೆಂಡ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 28, 2022 | 5:49 PM

ಬೆಂಗಳೂರು: ಹೋಟೆಲ್ನ ಮಹಿಳಾ ಸಿಬ್ಬಂದಿ ಜೊತೆ ಪಿಐ ಅನುಚಿತ ವರ್ತನೆ ಹಿನ್ನೆಲೆ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣಗೌಡರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಆದೇಶ ಹೊರಡಿಸಿದ್ದಾರೆ.

ಕಳೆದ 5 ದಿನದ ಹಿಂದೆ ಪಿಐ ಗೋಪಾಲಕೃಷ್ಣಗೌಡ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯ ಹೋಟೆಲ್ಯೊಂದಕ್ಕೆ ತೆರಳಿದ್ದರು. ಈ ವೇಳೆ ರೂಮ್ ನೀಡುವಂತೆ ಮಹಿಳಾ ಸಿಬ್ಬಂದಿ ಜೊತೆ ಪಿಐ ಗಲಾಟೆ ಮಾಡಿದ್ದಾರೆ. ಗಲಾಟೆಮಾಡಿ ಅನುಚಿತವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಹೋಟೆಲ್ನ ಮಹಿಳಾ ಸಿಬ್ಬಂದಿ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಜೀವನ್ ಭೀಮಾನಗರ ಠಾಣೆ ಪೊಲೀಸರು ಎನ್ಸಿಆರ್ ದಾಖಲಿಸಿದ್ದರು.

ನಾಗ್ಪುರದಿಂದ ಬೆಂಗಳೂರಿಗೆ ನಾಡಪಿಸ್ತೂಲ್ ತಂದು ಡೀಲಿಂಗ್

ಬೆಂಗಳೂರು: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಾಡಪಿಸ್ತೂಲ್ ಡೀಲಿಂಗ್ ಪ್ರಕರಣಕ್ಕೆ ಸಂಬಂಧಿಸಿ ನಾಗ್ಪುರದಿಂದ ಬೆಂಗಳೂರಿಗೆ ನಾಡಪಿಸ್ತೂಲ್ ತಂದು ಡೀಲಿಂಗ್ ಮಾಡಲಾಗುತ್ತಿದ್ದು ನಾಡ ಪಿಸ್ತೂಲ್ ಡೀಲಿಂಗ್ಗೆ ಮುಂಬೈನ ಭೂಗತ ಪಾತಕಿ ನಂಟು ಇದೆ ಎಂಬ ಮಾಹಿತಿ ಸಿಕ್ಕಿದೆ. 2 ನಾಡಪಿಸ್ತೂಲ್, 6 ಸಜೀವ ಗುಂಡು ಪಡೆದಿದ್ದವರ ವಿವರ ಪತ್ತೆಯಾಗಿದೆ. ನೀಲೇಶ್ ನಾವರೆ ಕಾಲ್ ಡಿಟೇಲ್ಸ್ ಆಧಾರದಲ್ಲಿ ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.

ನಾಗ್ಪುರದ ನೀಲೇಶ್ ನಾವರೆಗೆ ನಾಡ ಪಿಸ್ತೂಲ್ಗೆ ಸಪ್ಲೈ ಮಾಡಲು ಭವೀನ್ ಗಡಾಹೀಯಾ ಹೇಳಿದ್ದ. ನಾಡ ಪಿಸ್ತೂಲ್, ಗುಂಡುಗಳನ್ನು ವಿಫುಲ್ ಪನ್ನೋರ್ ಎಂಬ ವ್ಯಕ್ತಿ ಪಡೆದುಕೊಂಡಿದ್ದ. ಹೀಗಾಗಿ ವಿಫುಲ್ ಪನ್ನೋರ್ಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರೆದಿದೆ. ವಿಫುಲ್ ಪನ್ನೋರ್, ಡಿ.ಜೆ.ಹಳ್ಳಿ ಠಾಣೆ ಸೇರಿದಂತೆ ಹಲವೆಡೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಗಣೇಶೋತ್ಸವ, ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ವೇಳೆ ಡೀಲಿಂಗ್ ನಡೆದಿದ್ದು ಎಚ್ಚೆತ್ತ ಪೊಲೀಸರು ನಾಡಪಿಸ್ತೂಲ್ ಡೀಲಿಂಗ್ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಯಾವುದೇ ದಾಖಲೆ ಇಲ್ಲದೇ ಆಧಾರ್​​ ಸೃಷ್ಟಿಸುತ್ತಿದ್ದ ಆರೋಪಿಗಳು

ಅಕ್ರಮವಾಗಿ ದಾಖಲೆ ಸೃಷ್ಟಿಸಿ ಆಧಾರ್​ ಕಾರ್ಡ್ ನೀಡ್ತಿದ್ದ ಆರೋಪ ಹಿನ್ನೆಲೆ ಆನೇಕಲ್​ ತಾಲೂಕಿನ 6 ಕಡೆ ಪೊಲೀಸ್ ರೇಡ್ ಮಾಡಲಾಗಿದ್ದು ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ಪಟ್ಟಣದ 2 ಅಂಗಡಿ, ಹೆಬ್ಬಗೋಡಿಯ 2 ಅಂಗಡಿ, ಜಿಗಣಿಯ 2 ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ್ ಬಾಲದಂಡಿ‌, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಆರೋಪಿಗಳು ಯಾವುದೇ ದಾಖಲೆ ಇಲ್ಲದೇ ಆಧಾರ್​​ ಸೃಷ್ಟಿಸುತ್ತಿದ್ದರು. ಗೆಜೆಟೆಡ್​ ಆಫೀಸರ್​​ಗಳ ನಕಲಿ ಸಹಿ ಮಾಡಿ ಆಧಾರ್​ ಕಾರ್ಡ್ ಸೃಷ್ಟಿಸುತ್ತಿದ್ದದ್ದು ಪತ್ತೆಯಾಗಿದೆ. 2ರಿಂದ 3 ಸಾವಿರ ಹಣ ಪಡೆದು ಆಧಾರ್ ಕಾರ್ಡ್ ನೀಡ್ತಿದ್ದ ಆರೋಪ ಕೇಳಿ ಬಂದಿದೆ. ಬಾಂಗ್ಲಾ ವಲಸಿಗರು, ಅಕ್ರಮ ನುಸುಳುಕೋರರಿಗೆ ಆಧಾರ್ ನೀಡಿರುವ ಶಂಕೆ ವ್ಯಕ್ತವಾಗಿದೆ. ಜಿಗಣಿಯಲ್ಲಿ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 5:32 pm, Sun, 28 August 22

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ