ಇಂದಿರಾ ಗಾಂಧಿ ನೆನಪಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರನ್ನೇ ಮರೆತ ಕೆಪಿಸಿಸಿ, ಸಿಎಂ ಬೇಸರ
ಎಲ್ಲೆಡೆ ಇಂದು ‘ಉಕ್ಕಿನ ಮನುಷ್ಯ’ ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ‘ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಪ್ರತಿ ವರ್ಷವು ಆಚರಣೆ ಮಾಡಲಾಗುತ್ತಿದೆ. ಮತ್ತೊಂದೆಡೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮ ನಡೆದಿದೆ. ಇತ್ತ ಕರ್ನಾಟಕ ಕಾಂಗ್ರೆಸ್ , ಇಂದಿರಾ ಗಾಂಧಿ ನೆನಪಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರನ್ನೇ ಮರೆತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, (ಅಕ್ಟೋಬರ್ 31): ‘ಉಕ್ಕಿನ ಮನುಷ್ಯ’ ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ (sardar vallabhbhai patel) ಅವರ ಜನ್ಮದಿನವನ್ನು ಅಕ್ಟೋಬರ್ 31ರಂದು ‘ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಪ್ರತಿ ವರ್ಷವು ಆಚರಣೆ ಮಾಡಲಾಗುತ್ತದೆ. ಅದರಂತೆ ಈ ವರ್ಷವೂ ಸಹ ಎಲ್ಲೆಡೆ ವಲ್ಲಭಭಾಯಿ ಪಟೇಲರ ಭಾವಚಿತ್ರಕ್ಕೆ ಪ್ರಧಾನಿ ಮೋದಿ ಸೇರಿ ಇತರೆ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಮತ್ತೊಂದೆಡೆ ಇಂದೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ(Indira Gandhi) ಅವರ ಪುಣ್ಯತಿಥಿ. ಆದ್ರೆ, ಇಂದಿರಾ ಗಾಂಧಿ ನೆನಪಿನಲ್ಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್(ಕೆಪಿಸಿಸಿ) ಸರ್ದಾರ್ ವಲ್ಲಭಭಾಯಿ ಪಟೇಲರನ್ನೇ ಮರೆತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಇಂದಿರಾ ಗಾಂಧಿ ಪುಣ್ಯ ತಿಥಿ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಅವರ ಫೋಟೋವನ್ನು ಮಾತ್ರ ಇಟ್ಟಿದ್ದು, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರ ಇಡುವುದನ್ನೇ ಮರೆತಿದ್ದಾರೆ. ಆದ್ರೆ, ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರು ತಮ್ಮ ಭಾಷದ ವೇಳೆ ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಸ್ಮರಿಸಿಕೊಂಡಿದ್ದಾರೆ.
ಇದನ್ನೂ ಓದಿ: ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲಭಭಾಯಿ ಪಟೇಲ್ ಜನ್ಮದಿನ: ಪ್ರಧಾನಿ ಮೋದಿ ಸೇರಿ ಇತರೆ ಗಣ್ಯರಿಂದ ನಮನ
ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮಹಾತ್ಮ ಗಾಂಧಿ ಹತ್ಯೆ, ಇಂದಿರಾ ಗಾಂಧಿ ಹತ್ಯೆ, ರಾಜೀವ್ ಗಾಂಧಿ ಹತ್ಯೆ . ಈ ಮೂರು ಘಟನೆಗಳನ್ನು ದೇಶದಲ್ಲಿ ಮರೆಯುವುದಕ್ಕೆ ಸಾಧ್ಯವಿಲ್ಲ. ಇವರ ಬಲಿದಾನ ಆಗಿದ್ದು ದೇಶಕೋಸ್ಕರ. ಹಾಗೇ ಇಂದು ಪಟೇಲ್ ಜನ್ಮದಿನ. ಅವರ ಭಾವಚಿತ್ರ ಇಡಬೇಕಿತ್ತು ಎಂದು ಪರೋಕ್ಷವಾಗಿ ಕೆಪಿಸಿಸಿ ನಡೆಗೆ ಬೇಸರ ವ್ಯಕ್ತಪಡಿಸಿದರು.
ಇಡೀ ರಾಷ್ಟ್ರದಲ್ಲಿ ಇಂದಿರಾ ಗಾಂಧಿ ಪುಣ್ಯ ತಿಥಿ ಆಚರಣೆ ಮಾಡಿ ನಮನ ಸಲ್ಲಿಸಲಾಗುತ್ತಿದೆ. ಇಂದಿರಾಗಾಂಧಿ ದೇಶ ಕಂಡ ಅತ್ಯಂತ ಜನಪ್ರಿಯ ರಾಜಕಾರಣಿ. ಬಹಳ ಧೈರ್ಯ ಇದ್ದ ಮಹಿಳೆ. ದೇಶದ ಬಡವರ ಆರಾಧ್ಯ ದೈವರಾಗಿದ್ದವರು ಇಂದಿರಾ ಗಾಂಧಿ. 1978ರಲ್ಲಿನಾನು ಜನತಾ ಪಾರ್ಟಿಯಲ್ಲಿ ಇದ್ದೆ. ಹಾರೋಹಳ್ಳಿ ಎಂಬ ಕಡೆ ನಾನು ಓಟು ಕೇಳಲು ಜನತಾ ಪಾರ್ಟಿ ಅಧ್ಯಕ್ಷನಾಗಿ ಹೋಗಿದ್ದೆ. ಮನೆ ಮನೆಗೆ ಹೋಗಿ ಅಲ್ಲಿ ವಿಚಾರಿಸುತ್ತಿದ್ದೆ. ಅವರ ಮನೆ ಮನೆಗಳಲ್ಲಿ ಇಂದಿರಾ ಗಾಂಧಿ ಫೋಟೋ ಇರುತ್ತಿದ್ದವು. ಅಲ್ಲಿ ಜನರು ನಾವು ಇಂದಿರಾಗಾಂಧಿಗೆ ಓಟು ಹಾಕುವುದು ಎಂದು ಹೇಳುತ್ತಿದ್ದರು ಎಂದು ಅಂದಿನ ಪ್ರಸಂಗಗಳನ್ನು ನೆನಪಿಸಿಕೊಂಡರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ