AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಮಾರಾಮಾರಿ ನಿನ್ನೆ ನಡೆದಿತ್ತು. ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ವಜಾ ಪ್ರಸಂಗದಿಂದ ಕೆರಳಿದ ಬೆಂಬಲಿಗರು ಹಾಗೂ ಅಧ್ಯಕ್ಷ ಮಂಜುನಾಥ್ ಗೌಡರ ಬಣದ ಮಧ್ಯೆ ಘರ್ಷಣೆ ಉಂಟಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಯುವ ಕಾಂಗ್ರೆಸ್, ಹಲವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಈ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆಗೆ ಸೂಚಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​
ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್Image Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on: May 19, 2026 | 12:05 PM

Share

ಬೆಂಗಳೂರು, ಮೇ 19: ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವ ವಿಚಾರ ಸಂಬಂಧ ಯೂತ್​ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ನಿನ್ನೆ (ಮೇ 18) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಯೇ ಮಾರಾಮಾರಿ ನಡೆದಿತ್ತು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದರು. ಈ ಬೆನ್ನಲ್ಲೇ ಭಾರತೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ   ನಿಗಮ್, ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದೊಳಗೆ ಉತ್ತರ ನೀಡುವಂತೆ ದೀಪಿಕಾ ರೆಡ್ಡಿ, ಸಂದೀಪ್, ಮಂಜುನಾಥ್ ಶೆಟ್ಟಿ, ನಿಖಿಲ್ ಕೊಂಡಜ್ಜಿ ಸೇರಿ ಹಲವರಿಗೆ ನೋಟಿಸ್ ನೀಡಲಾಗಿದೆ.

ಮುಖ್ಯಾಂಶಗಳು

  • ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಜಗಳ
  • ಮಂಜುನಾಥ್​​ ಗೌಡ, ದೀಪಿಕಾ ರೆಡ್ಢಿ ಬೆಂಬಲಿಗರ ನಡುವೆ ವಾರ್​
  • ಕ್ರಮಕ್ಕೆ ಮುಂದಾದ AICC ಯೂತ್ ಕಾಂಗ್ರೆಸ್​​ನಿಂದ ಶೋಕಾಸ್​​ ನೋಟಿಸ್​​

ಇನ್ನು ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಗಲಾಟೆ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಗಂಭೀರವಾಗಿ ಪರಿಗಣಿಸಿದ್ದಾರೆ. ಘಟನೆ ಸಂಬಂಧ ಸತ್ಯಾಸತ್ಯತೆ ಪರಾಮರ್ಶೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್​ಗೆ ಅವರು ಸೂಚನೆ ನೀಡಿದ್ದಾರೆ. ಅಧ್ಯಕ್ಷರ ಸೂಚನೆ ಹಿನ್ನೆಲೆ ಪದಾಧಿಕಾರಿಗಳಿಗೆ ಚಂದ್ರಶೇಖರ್ ಬುಲಾವ್ ನೀಡಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ನಡೆಯಲಿದೆ. ಘಟನೆ ಬಗ್ಗೆ ಜಿ.ಸಿ.ಚಂದ್ರಶೇಖರ್ ಈ ವೇಳೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ; ಅಧ್ಯಕ್ಷ ವಿರುದ್ಧ ಗಂಭೀರ ಆರೋಪ

ಕರ್ನಾಟಕ ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ಕಾರ್ಯಕರ್ತರ ನಡುವೆಯೇ ಆಕ್ರೋಶಕ್ಕೆ ಕಾರಣವಾಗಿತ್ತು. ಈ ನಡುವೆ ನೀಟ್​​​ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದರು. ಆ ಬಳಿಕ ಪ್ರತಿಕ್ರಿಯಿಸಿದ್ದ ದೀಪಿಕಾ ರೆಡ್ಡಿ ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು ಎಂದು ಅಧ್ಯಕ್ಷ ಮಂಜುನಾಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಯುವ ಕಾಂಗ್ರೆಸ್ ಚುನಾವಣೆಯಲ್ಲಿ 2.95 ಲಕ್ಷ ಮತಗಳ ಪಡೆದಿದ್ದೇನೆ. ದೇಶದಲ್ಲೇ ಅತಿ ಹೆಚ್ಚು ಮತ ಪಡೆದ ಮಹಿಳಾ ಅಭ್ಯರ್ಥಿಗಳಲ್ಲಿ ನಾನೂ ಒಬ್ಬಳು. ಪುರುಷ ಪ್ರಾಬಲ್ಯದ ರಾಜಕೀಯದಲ್ಲಿ ಅವರ ವಿರುದ್ಧ ಹೋರಾಟ ನಡೆಸಿದ್ದೇನೆ. ಚುನಾವಣೆಯ ಬಳಿಕವೂ ಪಕ್ಷ ಸಂಘಟನೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಮಂಜುನಾಥ್ ಅಭದ್ರತೆ ಮತ್ತು ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ