ಶಾಸಕ ಜಮೀರ್ ಅಹ್ಮದ್​ಗೆ ಮಾರ್ಗದರ್ಶನ ನೀಡಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಈಶ್ವರಪ್ಪ ಅವರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಬಿಚ್ಚಿಬಿಚ್ಚಿ ಹೇಳ್ತಿದಾರೆ. ನಿನ್ನೆ ಒಂದಿಷ್ಟು, ಇವತ್ತು ಒಂದಿಷ್ಟು ಮಾತಾಡಿದ್ದಾರೆ. ಅವರ ಪಾಂಡಿತ್ಯ ಜನಕ್ಕೆ ಅರ್ಥ ಆಗುತ್ತಿದೆ ಎಂದು ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದರು.

ಶಾಸಕ ಜಮೀರ್ ಅಹ್ಮದ್​ಗೆ ಮಾರ್ಗದರ್ಶನ ನೀಡಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್
Follow us
TV9 Web
| Updated By: guruganesh bhat

Updated on: Aug 10, 2021 | 11:06 PM

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ನಂತರ ಅವರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚೆ ಮಾಡಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.  

ಈಶ್ವರಪ್ಪ ಸಂಸ್ಕೃತದಲ್ಲಿ ಪಂಡಿತರು. ಅವರು ಚಂದವಾಗಿ ವೇದಗಳನ್ನು ಅಭ್ಯಾಸ ಮಾಡಿದ್ದಾರೆ. ಈಶ್ವರಪ್ಪ ಅವರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಬಿಚ್ಚಿಬಿಚ್ಚಿ ಹೇಳ್ತಿದಾರೆ. ನಿನ್ನೆ ಒಂದಿಷ್ಟು, ಇವತ್ತು ಒಂದಿಷ್ಟು ಮಾತಾಡಿದ್ದಾರೆ. ಅವರ ಪಾಂಡಿತ್ಯ ಜನಕ್ಕೆ ಅರ್ಥ ಆಗುತ್ತಿದೆ ಎಂದು ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದರು.

ಇಡಿ ಅಧಿಕಾರಿಗಳ ದಾಳಿಯ ಬಗ್ಗೆ ನನಗೂ ಅನುಭವ ಇದೆ. ಜಮೀರ್ ಬಂದರೆ ಅದನ್ನೆಲ್ಲಾ ಅವರ ಜೊತೆ ಹಂಚಿಕೊಳ್ಳುವೆ. ಈ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ಇಡಿ ದೂರು ನೀಡಿರುವ ಬಗ್ಗೆ ಯಾರು ಹೇಳಿಕೆ ಕೊಟ್ಟಿದ್ದಾರೆ. ಹೇಳಿಕೆ ಕೊಟ್ಟವರ ಬಳಿಯೇ ದೂರಿನ ಬಗ್ಗೆ ಕೇಳಬೇಕು. ನನಗೂ ಅದಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ನಾಯಕ. ಅವರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಕಾನೂನು ವಿಚಾರದ ಬಗ್ಗೆ ಜಮೀರ್ ಅಹ್ಮದ್‌ಗೆ ಹೇಳಿದ್ದೇನೆ ಎಂದು ಹೇಳಿದರು.

ನಿನ್ನೆ ಮಾತನಾಡಿದ ಜಮೀರ್, ಮನೆ ವಿಚಾರವಾಗಿ ದಾಳಿ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶೀವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೂ ED ದಾಳಿ ಆಗಿತ್ತು. ಹಾಗಾದರೆ ಡಿಕೆಶಿಗೂ ಐಎಂಎಗೂ ಸಂಬಂಧ ಇತ್ತಾ? ಎಂದು ಡಿ.ಕೆ.ಶಿವಕುಮಾರ್‌ಗೆ ಜಮೀರ್ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: 

ಇ.ಡಿ. ಅಧಿಕಾರಿಗಳು ಸಮಾಧಾನಗೊಂಡಿದ್ದಾರೆ; ಯಾವುದೇ ನೋಟಿಸ್ ಕೊಟ್ಟಿಲ್ಲ: ಶಾಸಕ ಜಮೀರ್

ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

(KPCC President DK Shivakumar says I have given guidance to MLA Zameer Ahmed in the ED Raid case)

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್