AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಆಡಿಯೋ ನಳಿನ್ ಕುಮಾರ್ ಅವರದ್ದೇ; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಮ್ಮ  ಪಕ್ಷದ ಬೆಳವಣಿಗೆ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ವೈರಲ್ ಕೇಸ್ ತನಿಖೆಗೆ ಕೊಡಬೇಕು ಅಂತಾರೆ. ತನಿಖೆಗೆ ಅಧಿಕಾರಿ ನೇಮಿಸ್ತಾರೆ, ಫೇಕ್‌ ಎಂದು ಆತ ಹೇಳ್ತಾನೆ. ಈ ಹಿಂದೆ ಸಿಎಂ ಯಡಿಯೂರಪ್ಪರ ಪ್ರಕರಣ ಏನಾಯ್ತು?ನಾವಂತೂ ಕಟೀಲು ಆಡಿಯೋ ಪ್ರಕರಣದಲ್ಲಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಆ ಆಡಿಯೋ ನಳಿನ್ ಕುಮಾರ್ ಅವರದ್ದೇ; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯ
ಡಿ ಕೆ ಶಿವಕುಮಾರ್ ಮತ್ತು ನಳಿನ್ ಕುಮಾರ್ ಕಟೀಲ್
TV9 Web
| Edited By: |

Updated on:Jul 19, 2021 | 10:55 PM

Share

ಬೆಂಗಳೂರು: ನಳಿನ್ ಕುಮಾರ್‌ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ‘ಆ ಆಡಿಯೋ ನಳಿನ್ ಕುಮಾರ್ ಕಟೀಲು ಅವರದ್ದೇ, ಅದು ಯಾರೋ ಸಾಮಾನ್ಯರ ಆಡಿಯೋ ಅಲ್ಲ’ ಎಂದು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಮ್ಮ  ಪಕ್ಷದ ಬೆಳವಣಿಗೆ ಬಗ್ಗೆ ಮಾತನಾಡಿದ್ದಾರೆ. ಆಡಿಯೋ ವೈರಲ್ ಕೇಸ್ ತನಿಖೆಗೆ ಕೊಡಬೇಕು ಅಂತಾರೆ. ತನಿಖೆಗೆ ಅಧಿಕಾರಿ ನೇಮಿಸ್ತಾರೆ, ಫೇಕ್‌ ಎಂದು ಆತ ಹೇಳ್ತಾನೆ. ಈ ಹಿಂದೆ ಸಿಎಂ ಯಡಿಯೂರಪ್ಪರ ಪ್ರಕರಣ ಏನಾಯ್ತು?ನಾವಂತೂ ಕಟೀಲು ಆಡಿಯೋ ಪ್ರಕರಣದಲ್ಲಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮಿಮಿಕ್ರಿ ಮಾಡಿದ್ದಾರೆಂದು ಸಚಿವ ಡಾ.ಸುಧಾಕರ್ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಸಚಿವ ಡಾ.ಕೆ.ಸುಧಾಕರ್‌ ವಾಯ್ಸ್‌ ಮಿಮಿಕ್ರಿ ಮಾಡಿಸೋಣ. ನಾವೇನು ಮಿಮಿಕ್ರಿ ಇಟ್ಟುಕೊಂಡಿದ್ದೀವಾ? ನಾನು ಯಾವ ಧ್ವನಿಯಲ್ಲಿ ಮಾತನಾಡ್ತೀನಿ, ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ. ದೇವೇಗೌಡರು ಯಾವ ರೀತಿ ಮಾತಾಡ್ತಾರೆಂದು ಎಲ್ಲರಿಗೂ ಗೊತ್ತು. ಬಿಜೆಪಿ ಕಿತ್ತೊಗೆಯಬೇಕು ಎಂದು ಜನರು ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ನರೇಶ್ ಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ.

ಶೀಘ್ರದಲ್ಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಕಾಂಗ್ರೆಸ್ ಸಂಘಟನೆ ಕುರಿತು ಅವರು ಸಭೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಎನ್​ಎಸ್​ಯುಐ ಅಧ್ಯಕ್ಷರ ಬದಲಾವಣೆಗೆ ಆಗ್ರಹ ಎನ್​ಎಸ್​ಯುಐ ಅಧ್ಯಕ್ಷರ ಬದಲಾವಣೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ ಡಿ.ಕೆ.ಶಿವಕುಮಾರ್ ನಿವಾಸದ ಎದುರು ಧರಣಿ ಎನ್​ಎಸ್​ಯುಐ ಕಾರ್ಯಕರ್ತರ ಧರಣಿ ನಡೆಸಿದ್ದಾರೆ. ಎನ್​ಎಸ್​ಯುಐನ ನೂತನ ಅಧ್ಯಕ್ಷ ಕೀರ್ತಿ ಗಣೇಶ್ ಅವರನನ್ನು ಬದಲಿಸುವಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಣೆ ಕೂಗದಂತೆ ಸೂಚನೆ ನೀಡಿದ್ದಾರೆ.

ಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ನಡೆಸಲು ಪಕ್ಷದ ವಕ್ತಾರ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ. ಮಾರ್ಗದರ್ಶನ ಪಡೆಯಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ಪದಾಧಿಕಾರಿಗಳ ನೇಮಕ ಬಗ್ಗೆಯೂ ಚರ್ಚೆ ನಡೆಯಲಿದೆ. ಮುಂದಿನ ವಾರ ಉಸ್ತುವಾರಿ 5 ದಿನ ರಾಜ್ಯಕ್ಕೆ ಭೇಟಿ ನೀಡಿದ ನಂತರ ಪದಾಧಿಕಾರಿಗಳ ಪಟ್ಟಿ ಸಂಪೂರ್ಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 

ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್; ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ

ನಳಿನ್ ಕುಮಾರ್ ಕಟೀಲ್​ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್: ಅದು ನನ್ನ ದನಿಯಲ್ಲ ಎಂದ ಕಟೀಲ್

(KPCC President DK Shivakumar says That audio is BJP state President Nalin Kumar Kateels only)

Published On - 4:06 pm, Mon, 19 July 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​