ಬಿಜೆಪಿ, ಜೆಡಿಎಸ್​ನ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ: ಡಿಕೆ ಶಿವಕುಮಾರ್

ಬಿಜೆಪಿ, ಜೆಡಿಎಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರನ್ನು ಚನ್ನಪಟ್ಟಣದಲ್ಲೇ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬಿಜೆಪಿ, ಜೆಡಿಎಸ್​ನ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 12, 2022 | 3:27 PM

ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರನ್ನು ಚನ್ನಪಟ್ಟಣದಲ್ಲೇ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವೇ​ ಮತ್ತೆ ಅಧಿಕಾರಕ್ಕೆ ಬರುತ್ತದೆ. ಇಡೀ ರಾಜ್ಯದಲ್ಲಿ ನಾವು ಸರ್ವೆ ಮಾಡಿದ್ದೇವೆ. ನಮ್ಮ ಪಕ್ಷದ ಪರವಾಗಿ ಜನಾಭಿಪ್ರಾಯ ವ್ಯಕ್ತವಾಗಿದೆ. ಚನ್ನಪಟ್ಟಣದಲ್ಲಿ ಸಾಕಷ್ಟು ಜನರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಚನ್ನಪಟ್ಟಣದಲ್ಲಿ ನಾವು ಗೆಲ್ಲಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ. ಕ್ಷೇತ್ರದ ಜನರು ಎಲ್ಲರಿಗೂ ಅವಕಾಶ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ, ಜೆಡಿಎಸ್ ನಾಯಕರು-ಕಾರ್ಯಕರ್ತರ ಕಾಂಗ್ರೆಸ್​ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುತ್ತಿಗೆಗೆ ತೆಗೆದುಕೊಂಡವರು ಏನು ಮಾಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಈ ವೇದಿಕೆಯಲ್ಲಿ ನಾನು ಹೇಳುವುದಿಲ್ಲ. ಕರ್ನಾಟಕ ರಾಜ್ಯದ ಜನರು ಈಗ ಬದಲಾವಣೆ ಬಯಸುತ್ತಿದ್ದಾರೆ ಎಂದು ನುಡಿದರು.

ಕರ್ನಾಟಕದ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪಿಎಸ್​ಐ ನೇಮಕಾತಿಯಲ್ಲಿ ಯಾಱರ ಪಾಲು ಎಷ್ಟಿದೆ ಎನ್ನುವುದು ಗೊತ್ತಿದೆ. ಪಾಪ, ಈಗ ಎಲ್ಲವನ್ನೂ ಹುಡುಗರ ಮೇಲೆ ಹಾಕುವುದಕ್ಕೆ ಹೊರಟಿದ್ದಾರೆ. ನೇಮಕಾತಿ ಹಗರಣ ಮುಚ್ಚಿಹಾಕಲು ಇದನ್ನು ತರುತ್ತಿದ್ದಾರೆ. ಇವರು ಅಂಗಡಿ ತೆಗೆದಿದ್ದಕ್ಕೆ ತಾನೇ ಅಭ್ಯರ್ಥಿಗಳು ಬಂದಿದ್ದು. ಇವರು ಭರ್ಜರಿ ವ್ಯಾಪಾರವನ್ನೇ ಮಾಡಿದರು ಎಂದು ವ್ಯಂಗ್ಯವಾಡಿದರು.

ರಾಜ್ಯದ ಜನರು ಬದಲಾವಣೆ ಬಯಸಿದ್ದಾರೆ. ಸರ್ಕಾರ ಮತಾಂತರ ನಿಷೇಧ ಕಾನೂನು ಜಾರಿಗೆ ಮುಂದಾಗಿದೆ. ಈ ಕಾಯ್ದೆಗೂ ಬಸವಣ್ಣನ ತತ್ವಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಆ ಕಾನೂನಿನ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ. ವಿಧಾನಸಭೆಯಲ್ಲಿ ಮಸೂದೆ ಕುರಿತು ಚರ್ಚಿಸಿ ಕಾನೂನು ಜಾರಿ ಮಾಡಬೇಕಿತ್ತು. ಬಿಲ್​ ಬಗ್ಗೆ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಗೊಂದಲ ಸರಿಪಡಿಸುತ್ತೇವೆ

ಟ್ವೀಟ್​ ಮೂಲಕ ಎಂ.ಬಿ.ಪಾಟೀಲ ಪರ ರಮ್ಯಾ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಮ್ಯಾ ಟ್ವೀಟ್​ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಎಂ.ಬಿ.ಪಾಟೀಲ್ ಮತ್ತು ರಮ್ಯಾ ಇಬ್ಬರೂ ನಮ್ಮ ಪಕ್ಷದವರೇ. ರಮ್ಯಾ ಟ್ವೀಟ್ ವಿಚಾರದಲ್ಲಿ ಎಲ್ಲೋ ಗೊಂದಲವಾಗಿರಬೇಕು. ಈ ಗೊಂದಲವನ್ನು ನಾವು ಸರಿಪಡಿಸಿಕೊಳ್ಳುತ್ತೇವೆ ಎಂದರು.

Published On - 3:26 pm, Thu, 12 May 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ