ಬೆಂಗಳೂರು: ಸತೀಶ್ ಜಾರಕಿಹೊಳಿ (Satish jarkiholi) ನಿಜವಾದ ಹಿಂದೂ (Hindu) ಧರ್ಮ ಪಾಲಿಸುತ್ತಿದ್ದಾರೆ. ಬಿಜೆಪಿಯವರು (BJP) ಚುನಾವಣೆಗೆ ಹಿಂದೂ ಧರ್ಮ ಬಳಸಿಕೊಳ್ಳುತ್ತಿದ್ದಾರೆ. ನಮಗೆ ಹಿಂದೂ ಧರ್ಮದ ಬಗ್ಗೆ ಗೌರವವಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalinga reddy)ಹೇಳಿದ್ದಾರೆ. ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಕುರಿತು ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತಾಡಿಲ್ಲ ವಿಕಿಪಿಡಿಯಾದಲ್ಲಿ ಇರುವುದನ್ನು ಹೇಳಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡರು.
ಮುಂದವರೆದು ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಕಟ್ಟಿಲ್ಲ. ನಾವು ಅಧಿಕಾರದಲ್ಲಿದ್ದಾಗ ದೇವಸ್ಥಾನಗಳಿಗೆ ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ. ಬಿಜೆಪಿಯವರು ಏನೂ ಕೊಡದೆ ಪ್ರಚಾರ ಪಡೆಯುತ್ತಾರೆ. ಬಿಜೆಪಿಯವರು ತಮಗೆ ಬೇಕಾದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕೆಪಿಸಿಸಿಯಿಂದ 15 ಪ್ರಶ್ನೆಗಳು
ಪ್ರಧಾನಿ ನರೇಂದ್ರ ಮೋದಿ ಅವರು ನ. 11 ರಾಜ್ಯಕ್ಕೆ ಆಗಮಿಸಲಿದ್ದು, ಈ ವೇಳೆ ಕೆಪಿಸಿಸಿ ಪ್ರಧಾನಿಯವರಿಗೆ 15 ಪ್ರಶ್ನೆಗಳನ್ನು ಕೇಳಲು ಸಿದ್ದವಾಗಿದೆ. ಅವು 4 ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ.ಚುನಾವಣೆ ಸಮೀಪಿಸುತ್ತಿದ್ದಂತೆ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ 5 ವರ್ಷಗಳಲ್ಲಿ ನೆರೆಯಿಂದಾಗಿ 2.62 ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ. ರಸ್ತೆಗಳು, 30 ಸಾವಿರ ಸೇತುವೆಗಳು ಹಾನಿಯಾಗಿವೆ, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ.
ರಾಜ್ಯದಲ್ಲಿ 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ.ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂದಿರುವ ಪರಿಹಾರ ಎಷ್ಟು?ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಾದ ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್, 2 ಕೋಟಿ ಉದ್ಯೋಗ ಸೇರಿದಂತೆ 2022ರೊಳಗೆ ಎಲ್ಲರಿಗೂ ಸ್ವಂತ ಸೂರು ಸಂಪೂರ್ಣವಾಗಿದ್ಯಾ? ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದಯ ಕೆಪಿಸಿಸಿ ಟ್ವೀಟ್ ಮೂಲಕ ಪ್ರಶ್ನೆ ಕೆಳಿದೆ.ā
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಈದಲು ಇಲ್ಲಿ ಕ್ಲಿಕ್ ಮಾಡಿ
Published On - 2:43 pm, Wed, 9 November 22