ಬಿಡದಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಕರ್ನಾಟಕದ ಮೊದಲ ಸ್ಥಾವರ: ಶೀಘ್ರ ಪ್ರಾಯೋಗಿಕ ಕಾರ್ಯಾಚರಣೆ

ಬೆಂಗಳೂರಿನ ಕಸ, ತ್ಯಾಜ್ಯ ಸಮಸ್ಯೆ ಪರಿಹಾರಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಜಂಟಿಯಾಗಿ ಪರಿಹಾರವೊಂದನ್ನು ಕಂಡುಕೊಂಡಿವೆ. ಇದರಿಂದ ವಿದ್ಯುತ್ ಕೂಡ ಉತ್ಪಾದನೆಯಾಗಲಿದೆ. ಇದೀಗ ಬಿಡದಿಯಲ್ಲಿ ರಾಜ್ಯದ ಮೊದಲ ‘ತ್ಯಾಜ್ಯದಿಂದ ವಿದ್ಯುತ್’ ಉತ್ಪಾದಿಸುವ ಸ್ಥಾವರ ಸಿದ್ಧವಾಗಿದ್ದು, ಮುಂದಿನ ತಿಂಗಳಿನಿಂದ ಪ್ರಾಯೋಗಿಕ ಕಾರ್ಯಾಚರಣೆ ನಡೆಯಲಿದೆ. ಆ ಕುರಿತ ವಿವರ ಇಲ್ಲಿದೆ.

ಬಿಡದಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಕರ್ನಾಟಕದ ಮೊದಲ ಸ್ಥಾವರ: ಶೀಘ್ರ ಪ್ರಾಯೋಗಿಕ ಕಾರ್ಯಾಚರಣೆ
ಬೆಂಗಳೂರಿನ ತ್ಯಾಜ್ಯದಿಂದಲೂ ಉತ್ಪಾದನೆಯಾಗಲಿದೆ ವಿದ್ಯುತ್! ಶೀಘ್ರ ಬಿಡದಿಯಲ್ಲಿ ಸ್ಥಾವರ ಕಾರ್ಯಾರಂಭ (ಸಾಂದರ್ಭಿಕ ಚಿತ್ರ)
Follow us
|

Updated on: Jun 22, 2024 | 1:10 PM

ಬೆಂಗಳೂರು, ಜೂನ್ 22: ಬಿಡದಿಯಲ್ಲಿ (Bidadi) ಆರಂಭವಾಗಲಿರುವ ಕರ್ನಾಟಕದ ಮೊದಲ ‘ತ್ಯಾಜ್ಯದಿಂದ ವಿದ್ಯುತ್ (WTE)’ ಉತ್ಪಾದಿಸುವ ಸ್ಥಾವರ ಜುಲೈ ಮಧ್ಯದ ವೇಳೆಗೆ ಪ್ರಾಯೋಗಿಕ ಕಾರ್ಯಾಚರಣೆ ಪ್ರಾರಂಭಿಸುವ ನಿರೀಕ್ಷೆಯಿದೆ. 15 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಸ್ಥಾವರವು 11.5 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿದೆ ಎಂದು ವರದಿಯಾಗಿದೆ. ಸ್ಥಾವರದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಮತ್ತು ಈಗ ಪ್ರಾಯೋಗಿಕ ಕಾರ್ಯಾಚರಣೆ ಪ್ರಾರಂಭಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ (KPCL) ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ನಾವು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದ್ದೇವೆ. ಜುಲೈ ಎರಡನೇ ವಾರದಲ್ಲಿ ಪ್ರಯೋಗಗಳನ್ನು ಆರಂಭಿಸಲು ಸಾಧ್ಯವಾಗಲಿದೆ. ಪ್ರಾಯೋಗಿಕ ಕಾರ್ಯಾಚರಣೆ ಪೂರ್ಣಗೊಂಡ ನಂತರ, ಅದರಲ್ಲಿ ಕಂಡುಕೊಂಡ ಅಂಶಗಳ ಆಧಾರದ ಮೇಲೆ ವ್ಯವಸ್ಥೆಯನ್ನು ಹೇಗೆ ಉತ್ತಮಗೊಳಿಸಬೇಕು ಮತ್ತು ನಂತರ ಅದನ್ನು ಸ್ಥಿರಗೊಳಿಸಲು ಹೇಗೆ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಕೆಪಿಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಯೋಜನೆಯು 2023 ರ ಅಕ್ಟೋಬರ್​​ನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಕಾರ್ಮಿಕರ ಸಮಸ್ಯೆಗಳು ಮತ್ತು ಸಲಕರಣೆಗಳ ಆಮದು ಪ್ರಕ್ರಿಯೆ ವಿಳಂಬದಿಂದಾಗಿ ಕಾಮಗಾರಿ ವಿಳಂಬಗೊಂಡಿತ್ತು.

ಈ ಸ್ಥಾವರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಜಂಟಿ ಉದ್ಯಮವಾಗಿದೆ. ಇತ್ತೀಚೆಗಷ್ಟೇ ಸ್ಥಾವರಕ್ಕೆ ಭೇಟಿ ನೀಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಶೀಘ್ರದಲ್ಲಿಯೇ ಪ್ರಾಯೋಗಿಕ ಕಾರ್ಯಾಚರಣೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಸ್ಥಾವರಕ್ಕೆ ಅಗತ್ಯ ಪ್ರಮಾಣದ ಒಣ ತ್ಯಾಜ್ಯವನ್ನು ಪೂರೈಸಲು ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದರು.

600 ಮೆಟ್ರಿಕ್ ಟನ್ ಒಣ ತ್ಯಾಜ್ಯ ಸಂಸ್ಕರಿಸಲು ನೆರವು

ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರಗಳು ಸಾಮಾನ್ಯವಾಗಿ ಒಣ ತ್ಯಾಜ್ಯವನ್ನು ಬಳಸುತ್ತವೆ. ಸಂಪೂರ್ಣ ದಹನವನ್ನು ಖಚಿತಪಡಿಸಿಕೊಳ್ಳಲು ಒಣ ತ್ಯಾಜ್ಯವನ್ನು ಹೆಚ್ಚಿನ ತಾಪಮಾನದಲ್ಲಿ ಸುಡಲಾಗುತ್ತದೆ ಮತ್ತು ಉತ್ಪತ್ತಿಯಾಗುವ ಶಾಖವನ್ನು ವಿದ್ಯುತ್ ಉತ್ಪಾದಿಸಲು ಬಳಸಲಾಗುತ್ತದೆ. ಸ್ಥಾವರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಸುಮಾರು 600 ಮೆಟ್ರಿಕ್ ಟನ್ ಒಣ ತ್ಯಾಜ್ಯವನ್ನು ಸಂಸ್ಕರಿಸಲು ಸಾಧ್ಯವಾಗಲಿದೆ ಮತ್ತು ಇದು ಸ್ಥಾವರದ ಮುಖ್ಯ ಉಪಯೋಗಗಳಲ್ಲಿ ಒಂದಾಗಿದೆ ಎಂದು ಕೆಪಿಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ಪಾದನಾ ವೆಚ್ಚ ಹೆಚ್ಚು!

ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸ್ಥಾವರಗಳಲ್ಲಿ ಉತ್ಪಾದನಾ ವೆಚ್ಚ ಹೆಚ್ಚು. ನಾವು ಪ್ರತಿ ಯೂನಿಟ್‌ಗೆ ಸುಮಾರು 8 ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದಾಗ್ಯೂ, ಇದು ನಗರದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಹಾಯ ಮಾಡಲಿದೆ ಮತ್ತು ಇದೇ ಕಾರಣಕ್ಕೆ ಇದನ್ನು ಬೆಂಗಳೂರಿನ ಸಮೀಪ ಬರುವಂತೆ ಸ್ಥಾಪಿಸಲಾಗುತ್ತಿದೆ.

ಇದನ್ನೂ ಓದಿ: ಬರಲಿದೆ ಹೊಸ ಮಾದರಿಯ ಕೆಎಸ್ಆರ್‌ಟಿಸಿ ಬಸ್: ಏನಿದರ ವಿಶೇಷ? ಇಲ್ಲಿದೆ ಮಾಹಿತಿ

ನಗರದಲ್ಲಿ ಒಣ ತ್ಯಾಜ್ಯವು ಒಂದು ದೊಡ್ಡ ಸಮಸ್ಯೆಯಾಗಿದೆ ಮತ್ತು ಈ ಯೋಜನೆಯ ಮೂಲಕ ನಾವು ಅದನ್ನು ಪರಿಹರಿಸಬಹುದು ಎಂದು ಮತ್ತೊಬ್ಬ ಕೆಪಿಸಿಎಲ್ ಅಧಿಕಾರಿ ಹೇಳಿರುವುದನ್ನು ವರದಿ ಉಲ್ಲೇಖಿಸಿದೆ. 260 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾವರ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ