AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್ ಹುದ್ದೆಗಾಗಿ ₹2 ಕೋಟಿ ಡೀಲ್: ಕೆಪಿಎಸ್​ಸಿ ಹಗರಣದ ಇಡಿ ಚಾರ್ಜ್‌ಶೀಟ್‌ನಲ್ಲಿ ಮತ್ತೊಬ್ಬ ಐಪಿಎಸ್ ಅಧಿಕಾರಿ ಹೆಸರು

ಕೆಪಿಎಸ್​ಸಿ ನೇಮಕಾತಿ ಹಗರಣದ ಇಡಿ ಚಾರ್ಜ್‌ಶೀಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಹೆಸರು ಉಲ್ಲೇಖವಾಗಿರುವುದು ತಿಳಿದುಬಂದಿದೆ. ಇಬ್ಬರು ಪುತ್ರಿಯರಿಗೆ ಕೆಎಎಸ್ ಹುದ್ದೆ ಕೊಡಿಸಲು ಎರಡು ಕೋಟಿ ರೂಪಾಯಿ ನೀಡಿದ್ದರು ಎಂದು ಆರೋಪಿ ಬಸವರಾಜ್ ಕನ್ನಾಳೆ ಜಾರಿ ನಿರ್ದೇಶನಾಲಯ ತನಿಖೆ ವೇಳೆ ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಎಎಸ್ ಹುದ್ದೆಗಾಗಿ ₹2 ಕೋಟಿ ಡೀಲ್: ಕೆಪಿಎಸ್​ಸಿ ಹಗರಣದ ಇಡಿ ಚಾರ್ಜ್‌ಶೀಟ್‌ನಲ್ಲಿ ಮತ್ತೊಬ್ಬ ಐಪಿಎಸ್ ಅಧಿಕಾರಿ ಹೆಸರು
ಇಡಿ ಚಾರ್ಜ್​ಶೀಟ್ ಪ್ರತಿ ಹಾಗೂ ಉದ್ಯೋಗ ಸೌಧದ ಸಾಂದರ್ಭಿಕ ಚಿತ್ರ
ವಿಕಾಸ್​ ಬಿಎಂ
| Edited By: |

Updated on: Nov 21, 2026 | 8:51 AM

Share

ಮುಖ್ಯಾಂಶಗಳು

  • ಇಡಿ ಚಾರ್ಜ್‌ಶೀಟ್‌ನಲ್ಲಿ ಎಸ್‌ಪಿ ಚಂದ್ರಕಾಂತ್ ಹೆಸರು ಉಲ್ಲೇಖ
  • ಇಬ್ಬರು ಪುತ್ರಿಯರಿಗಾಗಿ ಎರಡು ಕೋಟಿ ರೂ. ನೀಡಿದ ಆರೋಪ
  • ಬಸವರಾಜ್ ಕನ್ನಾಳೆ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು

ಬೆಂಗಳೂರು, ನವೆಂಬರ್ 21: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಚಂದ್ರಕಾಂತ್ ಅವರ ಹೆಸರು ಉಲ್ಲೇಖವಾಗಿದೆ. ಇಬ್ಬರು ಪುತ್ರಿಯರಿಗೆ ಕೆಎಎಸ್ ಹುದ್ದೆ ಕೊಡಿಸಲು ಚಂದ್ರಕಾಂತ್ ಅವರು ಎರಡು ಕೋಟಿ ರೂಪಾಯಿ ನೀಡಿದ್ದರು ಎಂಬ ಅಂಶ ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿದೆ. ಈ ಪ್ರಕರಣದಲ್ಲಿ ಆರೋಪಿ ಬಸವರಾಜ್ ಕನ್ನಾಳೆ ನೀಡಿರುವ ಹೇಳಿಕೆಯ ಆಧಾರದಲ್ಲಿ ಚಂದ್ರಕಾಂತ್ ಅವರ ಹೆಸರು ಉಲ್ಲೇಖವಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕನ್ನಾಳೆಯಿಂದ ಇಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು.

ಚಂದ್ರಕಾಂತ್ ಅವರ ಪುತ್ರಿಯರಾದ ತೇಜಸ್ವಿನಿ ಮತ್ತು ಪಲ್ಲವಿ ಕೆಎಎಸ್ ಪರೀಕ್ಷೆ ಬರೆದಿದ್ದರು. ಈ ಪೈಕಿ ಒಬ್ಬರು ಸಂದರ್ಶನಕ್ಕೆ ಅರ್ಹತೆ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳಲು ಎರಡು ಕೋಟಿ ರೂಪಾಯಿ ನೀಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಜ್ಞಾನೇಂದ್ರ ಕುಮಾರ್ ಸೂಚನೆಯಂತೆ ತಾನು ಎರಡು ಕೋಟಿ ರೂಪಾಯಿ ಹಣ ಪಡೆದಿದ್ದೆ. ಚಂದ್ರಕಾಂತ್ ಅವರ ಮನೆ ಸಮೀಪಕ್ಕೆ ತೆರಳಿ ಹಣ ಪಡೆಯುವಂತೆ ಜ್ಞಾನೇಂದ್ರ ಕುಮಾರ್ ತಿಳಿಸಿದ್ದರು. ಅದರಂತೆ ಎರಡು ಕೋಟಿ ರೂಪಾಯಿ ಪಡೆದು ಜ್ಞಾನೇಂದ್ರ ಕುಮಾರ್ ಅವರಿಗೆ ನೀಡಿದ್ದಾಗಿ ಕನ್ನಾಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ಕೊಡಿಸುವ ಉದ್ದೇಶದಿಂದ ಈ ಹಣ ಸಂಗ್ರಹಿಸಲಾಗಿತ್ತು. ಈ ಹಣವನ್ನು ಶಿವಶಂಕರಪ್ಪ ಸಾಹುಕಾರ್ ಅವರಿಗೆ ನೀಡಬೇಕೆಂದು ಜ್ಞಾನೇಂದ್ರ ಕುಮಾರ್ ಸೂಚಿಸಿದ್ದರು ಎಂದು ಕನ್ನಾಳೆ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೆಪಿಎಸ್​ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಸಾಹುಕರ್ ಶಿವಶಂಕರಪ್ಪರನ್ನು ವಶಕ್ಕೆ ಪಡೆದ ಎಸ್​ಐಟಿ

ಇದಲ್ಲದೆ, ವಾಟ್ಸಾಪ್ ಕರೆಗಳ ಮೂಲಕ ಚಂದ್ರಕಾಂತ್ ಮತ್ತು ಅವರ ಪತ್ನಿ ತಮ್ಮನ್ನು ಸಂಪರ್ಕಿಸುತ್ತಿದ್ದರು. ಪದೇಪದೇ ಕರೆ ಮಾಡಿ ಹಣದ ವಿಚಾರವಾಗಿ ವಿಚಾರಿಸುತ್ತಿದ್ದರು ಎಂದು ಕನ್ನಾಳೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳ ಆಧಾರದಲ್ಲಿ ಚಾರ್ಜ್‌ಶೀಟ್‌ನಲ್ಲಿ ಚಂದ್ರಕಾಂತ್ ಅವರ ಹೆಸರು ಪ್ರಸ್ತಾಪವಾಗಿದ್ದು, ಪ್ರಕರಣದಲ್ಲಿ ಅವರ ಪಾತ್ರದ ಕುರಿತು ತನಿಖೆಯ ಮಹತ್ವ ಹೆಚ್ಚಾಗಿದೆ.

ಕೆಪಿಎಸ್​ಸಿ ನೇಮಕಾತಿ ಹಗರಣದ ಹಿನ್ನೆಲೆ

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ಅಕ್ರಮವಾಗಿ ಅಂಕಗಳನ್ನು ಹೆಚ್ಚಿಸುವುದು, ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಹಣದ ವಹಿವಾಟು ನಡೆಸಿರುವ ಆರೋಪಗಳು ಪ್ರಕರಣದ ಪ್ರಮುಖ ಅಂಶಗಳಾಗಿವೆ. ಈ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಆರೋಪಿಗಳ ಹೇಳಿಕೆಗಳು ಮತ್ತು ಹಣದ ವಹಿವಾಟಿನ ವಿವರಗಳನ್ನು ಆಧರಿಸಿ ಚಾರ್ಜ್‌ಶೀಟ್ ಸಲ್ಲಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ