AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಹಗರಣದಿಂದ 24 ಅಭ್ಯರ್ಥಿಗಳು ಬಲಿಪಶು: ಕೋರ್ಟ್​ಗೆ ಸಲ್ಲಿಸಿರುವ ವರದಿಯಲ್ಲಿ ಇಡಿ ವಿವರಣೆ

KPSC ಹಗರಣದಿಂದ 24 ಅಭ್ಯರ್ಥಿಗಳು ಬಲಿಪಶು: ಕೋರ್ಟ್​ಗೆ ಸಲ್ಲಿಸಿರುವ ವರದಿಯಲ್ಲಿ ಇಡಿ ವಿವರಣೆ

ಶಿವಪ್ರಸಾದ್​ ಬಿ.
| Edited By: |

Updated on: Oct 12, 2026 | 12:52 PM

Share

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದಲ್ಲಿ 24 ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದು ಇಡಿ ವರದಿಯಿಂದ ದೃಢಪಟ್ಟಿದೆ. ಕಷ್ಟಪಟ್ಟು ಓದಿದ್ದ ಈ ಅಭ್ಯರ್ಥಿಗಳನ್ನು ಬಿಟ್ಟು ಹಣ ಪಡೆದು ಅಕ್ರಮ ನೇಮಕಾತಿ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಿಗದಿತ ಪ್ರಶ್ನೆಗಳ ಉತ್ತರ ಸೋರಿಕೆ, 1:3 ಮೆರಿಟ್ ಲಿಸ್ಟ್ ವೇಳೆ ಅಕ್ರಮ ನಡೆದಿದೆ ಎಂದು ಇಡಿ ಕೋರ್ಟ್​ಗೆ ಸಲ್ಲಿಸಿರುವ ವರದಿಯಲ್ಲಿ ವಿವರಣೆ ನೀಡಿದೆ.

ಬೆಂಗಳೂರು, ಅಕ್ಟೋಬರ್​​ 12: ಕೆಪಿಎಸ್​ಸಿಪಶು ವೈದ್ಯರ ನೇಮಕಾತಿಯಲ್ಲಿ ಹಗರಣದಲ್ಲಿ ಬಲಿಪಶುವಾಗಿರುವ 24 ಪ್ರಾಮಾಣಿಕ ಅಭ್ಯರ್ಥಿಗಳ ಬಗ್ಗೆಯೂ ತನಿಳೆ ವೇಳೆ ಇಡಿ ಉಲ್ಲೇಖಿಸಿದೆ. ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಹುದ್ದೆ ಸಿಗದೆ ಅನ್ಯಾಯವಾಗಿದ್ದು, ಅವರಿಗೆ ನ್ಯಾಯ ಸಿಗಬೇಕಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖಾ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಪರೀಕ್ಷಾ ಅಕ್ರಮದಲ್ಲಿ ಹಣ ನೀಡಿ 29 ಜನರು ನೇಮಕವಾಗಿದ್ದಾರೆ. ಇವರು 400ಕ್ಕೂ ಹೆಚ್ಚು ಅಂಕ ಗಳಿಸಿದ್ದರು. ನೇಮಕಾತಿಯಲ್ಲಿ 3 ಮಾದರಿಯಲ್ಲಿ ಅಕ್ರಮವಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ, ನಿಗದಿತ ಪ್ರಶ್ನೆಗಳ ಉತ್ತರ ಸೋರಿಕೆ, 1:3 ಮೆರಿಟ್ ಲಿಸ್ಟ್ ವೇಳೆ ಅಕ್ರಮ ನಡೆದಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿರೋದಾಗಿ ಕೋರ್ಟ್​ಗೆ ಸಲ್ಲಿಸಿರುವ ವರದಿಯಲ್ಲಿ ಇಡಿ ವಿವರಣೆ ನೀಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More