ಕೆಪಿಎಸ್‌ಸಿ ಅಕ್ರಮ ನೇಮಕಾತಿ ಹಗರಣ: ಇಡಿ ತನಿಖೆ ವೇಳೆ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವ ಆರೋಪಿಗಳು

ಕೆಪಿಎಸ್‌ಸಿ ಪಶುವೈದ್ಯಕೀಯ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ವಶದಲ್ಲಿರುವ ಪ್ರಮುಖ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್ ಮತ್ತು ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ, ಗೀತಾ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ಈ ಕುರಿತು ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ ಅವರನ್ನೇ ಕೇಳುವಂತೆ ಹೇಳಿದ್ದಾರೆ ಎನ್ನಲಾಗಿದೆ.

ಕೆಪಿಎಸ್‌ಸಿ ಅಕ್ರಮ ನೇಮಕಾತಿ ಹಗರಣ: ಇಡಿ ತನಿಖೆ ವೇಳೆ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವ ಆರೋಪಿಗಳು
ಗೀತಾ ಮತ್ತ ಶಿವಶಂಕರಪ್ಪ ಸಾಹುಕಾರ್​​
Edited By:

Updated on: Oct 11, 2026 | 11:18 AM

ಬೆಂಗಳೂರು, ಅಕ್ಟೋಬರ್​​ 11: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯಕೀಯ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಪಿಎಸ್‌ಸಿ ಸದಸ್ಯೆ ಗೀತಾರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಇಬ್ಬರು ಆರೋಪಿಗಳು ವಿಚಾರಣೆಯ ಸಮಯದಲ್ಲಿ ವಿಭಿನ್ನ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿರುವುದು ತನಿಖೆಗೆ ಹೊಸ ತಿರುವು ನೀಡಿದೆ.

ತನಗೇನೂ ಗೊತ್ತಿಲ್ಲ ಎನ್ನುತ್ತಿರುವ ಗೀತಾ?

KPSC Recruitment Scam: ಕೆಪಿಎಸ್​ಸಿ ಅಕ್ರಮ ನೇಮಕಾತಿ ಹಗರಣ ಅಧ್ಯಕ್ಷರನ್ನೇ ಕೇಳಿ ಎಂದ ಗೀತಾ ಸಂಬಂಧಿಕರಿಗಷ್ಟೇ ಸಹಾಯ

ಗೀತಾ ಪ್ರಕರಣದಲ್ಲಿ ತಮ್ಮ ಪಾತ್ರವನ್ನು ಸಂಪೂರ್ಣವಾಗಿ ನಿರಾಕರಿಸುತ್ತಿದ್ದು, ತನನಗೂ ಈ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ. ನೀವು ಏನಾದರೂ ಕೇಳುವುದಿದ್ದರೆ ದಯವಿಟ್ಟು ಕೆಪಿಎಸ್‌ಸಿ ಮಾಜಿ ಅಧ್ಯಕ್ಷರನ್ನೇ ಕೇಳಿ. ನಾನೊಬ್ಬ ಸದಸ್ಯೆಯಾಗಿ ಸಭೆಗಳಲ್ಲಿ ಭಾಗಿಯಾಗುತ್ತಿದ್ದೆ ಅಷ್ಟೇ. ಪರೀಕ್ಷೆಗೆ ಮೊದಲು ಮತ್ತು ಫಲಿತಾಂಶದ ನಂತರ ನಡೆದ ಸಭೆಗಳಲ್ಲಿ ಭಾಗವಹಿಸಿ, ನಂತರ ದಾಖಲೆಗಳಿಗೆ ಸಹಿ ಹಾಕುತ್ತಿದ್ದೆ. ಇದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ ಎಂದು ಇಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ, ಗೀತಾರ ಹೇಳಿಕೆ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಕೆಪಿಎಸ್‌ಸಿಯಂತಹ ಉನ್ನತ ಸಂಸ್ಥೆಯ ಸದಸ್ಯರೊಬ್ಬರು ಕಣ್ಮುಚ್ಚಿ ಕಡತಗಳಿಗೆ ಸಹಿ ಹಾಕಿದ್ದಾರೆ ಎಂಬುದನ್ನು ಒಪ್ಪುವುದು ಹೇಗೆ? ಎಂದು ಪ್ರಶ್ನೆ ತನಿಖಾಧಿಕಾರಿಗಳು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: KPSC ನೇಮಕಾತಿ ಹಗರಣ: ಇಡಿ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಿಗೆ

ಹೇಗಿರಲಿದೆ ಇಡಿಯ ಮುಂದಿನ ವಿಚಾರಣೆ?

ಇನ್ನು ಇಡಿ ಅಧಿಕಾರಿಗಳು ಈಗಾಗಲೇ ಶಿವಶಂಕರಪ್ಪ ಸಾಹುಕಾರ್ ಮತ್ತು ಗೀತಾ ನಡುವೆ ನಡೆದಿರುವ ಹಣಕಾಸು ವ್ಯವಹಾರಗಳ ಕುರಿತು ಮಹತ್ವದ ಮಾಹಿತಿಯನ್ನು ಕಲೆಹಾಕಿದ್ದಾರೆ. ಈ ವ್ಯವಹಾರಗಳಿಗೆ ಸಂಬಂಧಿಸಿದಂತೆ ಹಲವು ನಿರ್ಣಾಯಕ ದಾಖಲೆಗಳನ್ನು ಸಹ ಸಂಗ್ರಹಿಸಲಾಗಿದೆ. ಜೊತೆಗೆ ಅಭ್ಯರ್ಥಿಗಳಿಂದ ಹಾಗೂ ಅವರ ಪೋಷಕರಿಂದ ಹೇಗೆ ಹಣವನ್ನು ಸಂಗ್ರಹಿಸಲಾಗಿದೆ ಎಂಬ ವಿವರಗಳನ್ನೂ ಸಹ ಪತ್ತೆಹಚ್ಚಿದ್ದಾರೆ. ಕೆಪಿಎಸ್‌ಸಿಯ ಸದಸ್ಯರು ಮತ್ತು ಆಗಿನ ಪ್ರಮುಖ ಚೇರ್ಮನ್ ಆಗಿದ್ದ ಶಿವಶಂಕರಪ್ಪ ಸಾಹುಕಾರ್ ಅಭ್ಯರ್ಥಿಗಳು ಹಾಗೂ ಅವರ ಪೋಷಕರೊಂದಿಗೆ ಸಂಪರ್ಕ ಸಾಧಿಸಿ, ಹಣ ಸಂಗ್ರಹಿಸಲು ಹೇಗೆ ಯೋಜನೆ ರೂಪಿಸಿದ್ದರು ಮತ್ತು ಮಾತುಕತೆ ನಡೆಸಿದ್ದರು ಎಂಬ ಮಾಹಿತಿಯೂ ಅಧಿಕಾರಿಗಳ ಬಳಿಯಿದೆ. ಸದ್ಯ ಪ್ರಾಥಮಿಕ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ಇಬ್ಬರೂ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹೀಗಾಗಿ ಮುಂದಿನ ಹಂತದಲ್ಲಿ, ಸಂಗ್ರಹಿಸಿರುವ ಎಲ್ಲಾ ಸಾಕ್ಷ್ಯಧಾರಗಳನ್ನು ಆರೋಪಿಗಳ ಮುಂದೆ ಇಟ್ಟು ಮತ್ತಷ್ಟು ತೀವ್ರ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:15 am, Sun, 11 October 26

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us