AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ನೇಮಕಾತಿ ಅಕ್ರಮ: ಯಾವುದೇ FIR ದಾಖಲಾದರೂ SITಗೆ ವರ್ಗಾಯಿಸಲು ರಾಜ್ಯ ಸರ್ಕಾರ ಆದೇಶ

KPSC ನೇಮಕಾತಿ ಅಕ್ರಮ: ಯಾವುದೇ FIR ದಾಖಲಾದರೂ SITಗೆ ವರ್ಗಾಯಿಸಲು ರಾಜ್ಯ ಸರ್ಕಾರ ಆದೇಶ

ಪ್ರದೀಪ್​ ಚಿಕ್ಕಾಟಿ
| Edited By: |

Updated on: Nov 26, 2026 | 6:36 AM

Share

ಹೈಕೋರ್ಟ್ ಸೂಚನೆ ಮೇರೆಗೆ ಕೆಪಿಎಸ್‌ಸಿ ನೇಮಕಾತಿ ಹಗರಣದ ಎಲ್ಲಾ ಎಫ್‌ಐಆರ್‌ಗಳನ್ನು ಎಸ್‌ಐಟಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಮತ್ತೊಂದೆಡೆ ಅಕ್ರಮ ತಡೆಗೆ ಆರ್.ವಿ. ದೇಶಪಾಂಡೆ ನೇತೃತ್ವದ ಸದನ ಸಮಿತಿಯು ಸ್ಪೀಕರ್‌ಗೆ ವರದಿ ಸಲ್ಲಿಸಿದೆ. KPSC ಅಕ್ರಮ ತಡೆ ಮತ್ತು ಸುಧಾರಣೆಗೆ ಸಮಿತಿ ರಚಿಸಲಾಗಿತ್ತು.

ಬೆಂಗಳೂರು, ನವೆಂಬರ್​​ 26: KPSC ನೇಮಕಾತಿಗಳಲ್ಲಿ ಹಗರಣ ಆರೋಪ ಪ್ರಕರಣ ಸಂಬಂಧ ಯಾವುದೇ FIR ದಾಖಲಾದರೂ ಅದನ್ನು SITಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ. ಈವರೆಗೆ ದಾಖಲಾದ, ಮುಂದೆ ದಾಖಲಾಗುವ ಎಲ್ಲ FIR ವರ್ಗಾವಣೆಗೆ ಸೂಚಿಸಲಾಗಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಈ ಕುರಿತು ಆದೇಶ ನೀಡಿದೆ. ಮತ್ತೊಂದೆಡೆ KPSC ಅಕ್ರಮ ತಡೆಗೆ R.V.ದೇಶಪಾಂಡೆ ನೇತೃತ್ವದ ಸದನ ಸಮಿತಿಯಿಂದ ಸ್ಪೀಕರ್​ಗೆ ವರದಿ ಸಲ್ಲಿಸಲಾಗಿದೆ. ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಶಾಸಕರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಶಾಸಕಿ ರೂಪಾ ಶಶಿಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More