AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್​​ ಬಿಕರಿ?

KPSC Recruitment Scam: ಗಂಭೀರ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಅಮಾನತಿನ ಬೆನ್ನಲ್ಲೇ ಕೆಪಿಎಸ್‌ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ತೀವ್ರ ಅಕ್ರಮ ನಡೆದಿದೆ ಎಂದು ಆರೋಪಿಸಿ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದಾರೆ. ಒಂದು ಹುದ್ದೆ 80 ಲಕ್ಷ ರೂ.ಗೆ ಬಿಕರಿಯಾಗಿದೆ ಎಂದು ಆರೋಪಿಸಲಾಗಿದೆ.

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್​​ ಬಿಕರಿ?
KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ?
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Jul 23, 2026 | 12:43 PM

Share

ಮುಖ್ಯಾಂಶಗಳು

  • KPSC ವಿರುದ್ಧ ಕೇಳಿಬಂತು ಮತ್ತೊಂದು ಅಕ್ರಮದ ಆರೋಪ
  • ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್?
  • ವಿಧಾನಸೌಧ ಪೋಲೀಸ್ ಠಾಣೆಗೆ ದೂರು ನೀಡಿದ ಅಭ್ಯರ್ಥಿಗಳು

ಬೆಂಗಳೂರು, ಜುಲೈ 23: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್​​ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ದೂರಲಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ತಳಕುಹಾಕಿಕೊಂಡಿದೆ.

80 ಲಕ್ಷ ರೂಪಾಯಿಗೆ ಒಂದು ಸೀಟ್​​ ಬಿಕರಿ ಆರೋಪ

ಜನವರಿ 8 ರಂದು 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಪರೀಕ್ಷೆ ನಡೆದಿದ್ದು, ಜುಲೈ 17ರಂದು ಹೊರಬಿದ್ದ ಫಲಿತಾಂಶ ಕಂಡು ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಒಂದು ಹುದ್ದೆ ಬರೋಬ್ಬರಿ 80 ಲಕ್ಷ ರೂಪಾಯಿಗೆ ಬಿಕರಿ ಆಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಆಗಮಿಸಿ ವಿಧಾನಸೌಧ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿರೋದೀಗ ಹೊಸ ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’; KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್

ಶಿವಶಂಕರಪ್ಪ, ಸೇರಿ ಹಲವು ಕೆಪಿಎಸ್ಸಿ ಸದಸ್ಯರೂ ಅಕ್ರಮದಲ್ಲಿ ಭಾಗಿ ಆಗಿದ್ದಾರೆ. ಮಧ್ಯವರ್ತಿಗಳ ಮೂಲಕ ಭಾರೀ ಮಟ್ಟದಲ್ಲಿ ವ್ಯವಹಾರ ನಡೆದಿದೆ. ಇಂಥವರ ವಿರುದ್ಧ ಕೇವಲ ಕ್ರಮವಲ್ಲ, ಗಲ್ಲು ಶಿಕ್ಷೆ ಆಗಬೇಕು ಎಂದು ವಿಧ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತ್ ಕುಮಾರ್ ಆಗ್ರಹಿಸಿದ್ದಾರೆ. ಗ್ರೂಪ್ ಎ ಹುದ್ದೆಯಾಗಿರುವ ಪಶು ವೈದ್ಯಾಧಿಕಾರಿಗಳ ಸೀಟ್​​​ಗೆ ದುಡ್ಡು ಕೊಡಿ ಎಂದು ಅಭ್ಯರ್ಥಿಗಳಿಗೆ ಕರೆ ಮಾಡಿ ಬೇಡಿಕೆ ಇಟ್ಟಿದ್ದಾರೆ . ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಮಾಡಬೇಕು. UPSC ಬರೆದ ಅಭ್ಯರ್ಥಿಗಳು ಪಾಸ್ ಆಗಲು ಕಷ್ಟ ಪಟ್ಟಿದ್ದರೆ, ಶಿವಶಂಕರಪ್ಪ ಸಂಬಂಧಿಕರು ಮೆರಿಟ್ ಅಂಕ ಗಳಿಸಿದ್ದಾರೆ. ಪ್ರತಿಭಾವಂತ ವಿಧ್ಯಾರ್ಥಿಗಳು 300 ಅಂಕ ದಾಟುವುದು ಕಷ್ಟ ಇರುವಾಗ ಇದು ಹೇಗೆ ಸಾಧ್ಯ ಎಂದವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:36 pm, Thu, 23 July 26

Follow Us
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು