AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದ SIT ರಚನೆಗೆ ಸುಪ್ರೀಂಕೋರ್ಟ್ ತಡೆ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಕುರಿತು ಅಲೋಕ್ ಕುಮಾರ್ ನೇತೃತ್ವದ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 21ರಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಿತ್ತು. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.

ಕೆಪಿಎಸ್​​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದ SIT ರಚನೆಗೆ ಸುಪ್ರೀಂಕೋರ್ಟ್ ತಡೆ
ಸುಪ್ರೀಂ ಕೋರ್ಟ್Image Credit source: Getty Images
ರಮೇಶ್​ ಎಮ್​.
| Edited By: |

Updated on: Oct 01, 2026 | 8:10 PM

Share

ನವದೆಹಲಿ/ಬೆಂಗಳೂರು, ಅಕ್ಟೋಬರ್​​ 01: ಕರ್ನಾಟಕ ಲೋಕಸೇವಾ ಆಯೋಗ (KPSC)ದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿ, ಹೊಸದಾಗಿ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರ್ದೇಶನಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 21ರಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನೋಜ್ ಮಿಶ್ರಾ ಹಾಗೂ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರ ಪೀಠ ಈ ಮಧ್ಯಂತರ ಆದೇಶ ನೀಡಿದೆ. ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ KPSCಯ ಇತರ ನೇಮಕಾತಿಗಳಿಗೆ ಸಂಬಂಧಿಸಿದ ಆರೋಪಗಳ ತನಿಖೆಗಾಗಿ ಹೈಕೋರ್ಟ್ SIT ರಚಿಸಿತ್ತು.

ಸುಪ್ರೀಂ ಕೋರ್ಟ್ ಅಕ್ಟೋಬರ್ 12ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದು, ಹೈಕೋರ್ಟ್ ರಚಿಸಿದ್ದ SITನ ಸದಸ್ಯರ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಆಕ್ಷೇಪಣೆಗಳಿದ್ದರೆ, ಅವುಗಳನ್ನು ಒಳಗೊಂಡ ಹೆಚ್ಚುವರಿ ಪ್ರಮಾಣಪತ್ರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಿದೆ. ಪರ್ಯಾಯ ಅಧಿಕಾರಿಗಳ ಹೆಸರನ್ನೂ ರಾಜ್ಯ ಸರ್ಕಾರ ಸೂಚಿಸಬಹುದು ಎಂದು ಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ವಾದ-ಪ್ರತಿವಾದ

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಈಗಾಗಲೇ ಅಪರಾಧ ತನಿಖಾ ಇಲಾಖೆ (CID) ಪ್ರಕರಣಗಳ ತನಿಖೆ ನಡೆಸುತ್ತಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ಅವರು ತಿಳಿಸಿದರು. ಪ್ರಸ್ತುತ ಪ್ರಕರಣಗಳ ತನಿಖೆ ನಡೆಸುತ್ತಿರುವ CID ಅಧಿಕಾರಿಗಳ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲ. ಹೀಗಿರುವಾಗ ಹೊಸದಾಗಿ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸಿಬಲ್ ವಾದಿಸಿದರು. ಹೊಸದಾಗಿ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಸಿಬಲ್ ವಿರೋಧಿಸಿದ್ದು, ಇದರಿಂದ CID ಈಗಾಗಲೇ ನಡೆಸಿರುವ ತನಿಖೆಯನ್ನು ಮತ್ತೆ ಆರಂಭಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಕೋರ್ಟ್​​ ಗಮನಕ್ಕೆ ತಂದರು.

LIVE TV

ಇದನ್ನೂ ಓದಿ: KPSC ಅಕ್ರಮ ಪ್ರಕರಣದಲ್ಲಿ ED ಸ್ಫೋಟಕ ವರದಿ: ಹುದ್ದೆಗೆ 40 ಲಕ್ಷ ರೂ. ರೇಟ್, ಬಯಲಾಯ್ತು ಚೆಕ್ ಗ್ಯಾರಂಟಿ ಡೀಲ್

ಅಲ್ಲದೆ, ರಾಜ್ಯ ಸರ್ಕಾರದ ಸಲಹೆಗಳನ್ನು ಪಡೆಯದೆ ಹೈಕೋರ್ಟ್ ನೇರವಾಗಿ SIT ಸದಸ್ಯರನ್ನು ಆಯ್ಕೆ ಮಾಡಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. SITನಲ್ಲಿ ಕಾರಾಗೃಹಗಳ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ ಅಲೋಕ್ ಕುಮಾರ್ ಅವರನ್ನು ಸೇರಿಸಿರುವುದರ ಬಗ್ಗೆಯೂ ಸಿಬಲ್ ಆಕ್ಷೇಪ ವ್ಯಕ್ತಪಡಿಸಿದರು. ಪ್ರತ್ಯೇಕ CBI ತನಿಖೆಯೊಂದರಲ್ಲಿ ಅಲೋಕ್ ಕುಮಾರ್ ಅವರ ಫೋನ್ ಇಂಟರ್‌ಸೆಪ್ಷನ್ ಮತ್ತು ಟ್ಯಾಪಿಂಗ್‌ಗೆ ಸಂಬಂಧಿಸಿದ ಪಾತ್ರದ ಕುರಿತು ಪ್ರಶ್ನೆಗಳು ಎದ್ದಿವೆ ಎಂದು ಅವರು ಉಲ್ಲೇಖಿಸಿದರು.

ಪ್ರತಿವಾದಿಗಳ ಪರ ವಾದಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್, ಪ್ರಕರಣದ ತನಿಖೆಯನ್ನು CBIಗೆ ವಹಿಸುವಂತೆ ಮೂಲತಃ ಹೈಕೋರ್ಟ್‌ನಲ್ಲಿ ಮನವಿ ಮಾಡಲಾಗಿತ್ತು ಎಂದು ತಿಳಿಸಿದರು. ರಾಜ್ಯ ಪೊಲೀಸ್ ಅಧಿಕಾರಿಗಳನ್ನೇ ಒಳಗೊಂಡ SIT ರಚನೆಗೆ ರಾಜ್ಯ ಸರ್ಕಾರ ಏಕೆ ವಿರೋಧಿಸುತ್ತಿದೆ ಎಂದು ಅವರು ಪ್ರಶ್ನಿಸಿದರು. ರಾಜ್ಯವು ತನ್ನದೇ ಅಧಿಕಾರಿಗಳು ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಕಾರಾಗೃಹಗಳ DGPಯನ್ನು ತನಿಖೆ ನಡೆಸಲು ಸೂಚಿಸಲಾಗಿದೆ. ತಂಡ ಸಂಪೂರ್ಣವಾಗಿ ರಾಜ್ಯದ ಅಧಿಕಾರಿಗಳದ್ದೇ ಆಗಿದೆ. ರಾಜ್ಯವು ಹೇಗೆ ಆಕ್ಷೇಪಿಸಬಹುದು? ಇದರರ್ಥ ತನಿಖೆ ನಡೆಸುವ ಅಧಿಕಾರಿಗಳನ್ನು ತಮಗೆ ಬೇಕಾದಂತೆ ಆಯ್ಕೆ ಮಾಡಲು ರಾಜ್ಯ ಬಯಸುತ್ತಿದೆ ಎಂದು ಅವರು ವಾದಿಸಿದರು. ಹೈಕೋರ್ಟ್ ಆದೇಶದ ಬಳಿಕ ರಾಜ್ಯ ಸರ್ಕಾರ SITಗೆ ಅಧಿಸೂಚನೆ ಹೊರಡಿಸಿಲ್ಲ ಹಾಗೂ ಸಂಬಂಧಿತ ದಾಖಲೆಗಳನ್ನು ವರ್ಗಾಯಿಸಿಲ್ಲ ಎಂದು ಪರಮೇಶ್ವರ್ ತಿಳಿಸಿದರು. ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಪಾಲಿಸಬೇಕಿದೆ ಎಂದು ಅವರು ವಾದಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ