AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Scam: ಪರಾರಿಯಾಗಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ದಿಢೀರ್ ಪ್ರತ್ಯಕ್ಷ! CID ವಿಚಾರಣೆಗೆ ಹಾಜರು

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕೊನೆಗೂ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ಹಾಗೂ ಸಿಐಡಿ ದಾಳಿಯ ಮುನ್ಸೂಚನೆ ಸಿಗುತ್ತಿದ್ದಂತೆಯೇ ದೆಹಲಿಗೆ ಪರಾರಿಯಾಗಿದ್ದ ಅಧಿಕಾರಿಗೆ ಸಿಐಡಿ ನೋಟಿಸ್ ನೀಡಿತ್ತು. ಸಿಐಡಿ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

KPSC Scam: ಪರಾರಿಯಾಗಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ದಿಢೀರ್ ಪ್ರತ್ಯಕ್ಷ! CID ವಿಚಾರಣೆಗೆ ಹಾಜರು
IAS ಅಧಿಕಾರಿ ಜ್ಞಾನೇಂದ್ರ ಕುಮಾರ್
ಶಿವಪ್ರಸಾದ್​ ಬಿ.
| Edited By: |

Updated on: Aug 28, 2026 | 1:07 PM

Share

ಮುಖ್ಯಾಂಶಗಳು

  • ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣ: ಕೊನೆಗೂ ಸಿಐಡಿ ತನಿಖೆಗೆ ಹಾಜರಾದ ಜ್ಞಾನೇಂದ್ರ ಕುಮಾರ್
  • ಇಡಿ ದಾಳಿ ಮುನ್ಸೂಚನೆಯಿಂದ ತಲೆಮರೆಸಿಕೊಂಡಿದ್ದ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ
  • ತಂದೆಗೆ ಅನಾರೋಗ್ಯದ ನೆಪವೊಡ್ಡಿ ದೆಹಲಿಗೆ ಪರಾರಿಯಾಗಿದ್ದ ಅಧಿಕಾರಿಗೆ ಸಿಐಡಿ ನೋಟಿಸ್

ಬೆಂಗಳೂರು, ಆಗಸ್ಟ್  28: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಐಡಿ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗವಾರ್ ಶುಕ್ರವಾರ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ತಲೆಮರೆಸಿಕೊಂಡಿದ್ದು ಯಾಕೆ?

2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ ಕುಮಾರ್, ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಶುವೈದ್ಯರ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು, ಬೆಂಗಳೂರಿನ ಜಯಮಹಲ್‌ನಲ್ಲಿರುವ ಅವರ ನಿವಾಸ ಹಾಗೂ ಉತ್ತರ ಪ್ರದೇಶದ ಲಖನೌ ಬಳಿಯ ಸ್ವಗ್ರಾಮದ ಮನೆ ಮೇಲೆಯೂ ದಾಳಿ ನಡೆಸಿದ್ದರು.

ಆದರೆ, ಇಡಿ ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಜ್ಞಾನೇಂದ್ರ ಕುಮಾರ್ ತಮ್ಮ ಮೊಬೈಲ್, ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳೊಂದಿಗೆ ತರಾತುರಿಯಲ್ಲಿ ದೆಹಲಿಗೆ ತೆರಳಿ ಪರಾರಿಯಾಗಿದ್ದರು. ತಂದೆಗೆ ಹೃದಯಾಘಾತವಾಗಿದ್ದು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು 15 ದಿನಗಳ ತುರ್ತು ರಜೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಲಖನೌ ಮನೆಯಲ್ಲಿದ್ದ ತಂದೆ, ‘ತಾನು ಆರೋಗ್ಯವಾಗಿದ್ದು ಪುತ್ರ ಮನೆಗೇ ಬಂದಿಲ್ಲ’ ಎಂದು ಹೇಳಿಕೆ ನೀಡುವ ಮೂಲಕ ಅಧಿಕಾರಿಯ ಡ್ರಾಮಾ ಬಯಲಾಗಿತ್ತು.

ಇದನ್ನೂ ಓದಿ 9 ಗಂಟೆಗಳ ಶೋಧ, ಸಿಗದ ದಾಖಲೆಗಳು: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?

ಸಿಐಡಿ ನೋಟಿಸ್‌ಗೆ ಮಣಿದ ಐಎಎಸ್ ಅಧಿಕಾರಿ!

ಇಡಿ ಶೋಧದ ಬಳಿಕ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳು, ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ಮನೆ ಹಾಗೂ ಕಚೇರಿಯ ಬಾಗಿಲಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ಅಂಟಿಸಿ ಬಂದಿದ್ದರು. ಸಾಲು ಸಾಲು ಅನುಮಾನಗಳು ಹಾಗೂ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ, ಕೊನೆಗೂ ಜ್ಞಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ಆಗಮಿಸಿ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು