AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​​ಸಿ ಹಗರಣದಲ್ಲಿ ಶಿವಶಂಕರಪ್ಪ ಸಾಹುಕಾರ್​​, ಬಿ.ವಿ.ಗೀತಾ ಪಾತ್ರವೇನು? ಇಲ್ಲಿದೆ ಮಾಹಿತಿ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಬಿ.ವಿ.ಗೀತಾರನ್ನು ಅಕ್ಟೋಬರ್ 19ರ ವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 4ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ಅಷ್ಟಕ್ಕೂ ಪ್ರಕರಣದಲ್ಲಿ ಇವರಿಬ್ಬರ ಪಾತ್ರವೇನು? ನ್ಯಾಯಾಲಯದಲ್ಲಿ ಇಡಿ ವಕೀಲರು ಮತ್ತು ಆರೋಪಿಗಳ ಪರ ವಕೀಲರ ವಾದದ ಮಾಹಿತಿ ಇಲ್ಲಿದೆ.

ಕೆಪಿಎಸ್​​ಸಿ ಹಗರಣದಲ್ಲಿ ಶಿವಶಂಕರಪ್ಪ ಸಾಹುಕಾರ್​​, ಬಿ.ವಿ.ಗೀತಾ ಪಾತ್ರವೇನು? ಇಲ್ಲಿದೆ ಮಾಹಿತಿ
ಶಿವಶಂಕರಪ್ಪ ಸಾಹುಕಾರ್​​, ಬಿ.ವಿ.ಗೀತಾ Image Credit source: Tv9 Kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on:Oct 07, 2026 | 6:21 PM

Share

ಬೆಂಗಳೂರು, ಅಕ್ಟೋಬರ್​​ 07: ಕರ್ನಾಟಕ ಲೋಕಸೇವಾ ಆಯೋಗದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಬಿ.ವಿ.ಗೀತಾರನ್ನು ಅಕ್ಟೋಬರ್​​ 19ರ ವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 4ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ತನಿಖೆಗೆ ಸಹಕಾರ ನೀಡುವಂತೆ ಇಬ್ಬರಿಗೂ ಜಡ್ಜ್​ ತಿಳಿಸಿದ್ದು, ಸುಮ್ಮನೆ ಮೆಡಿಕಲ್‌ ರಿಪೋರ್ಟ್ ತಗೊಂಡು ಬರಬಾರದು ಎಂದು ಹೇಳಿದ್ದಾರೆ. ಜೊತೆಗೆ ಕಸ್ಟಡಿಯಲ್ಲಿದ್ದಾಗ ಆರೋಗ್ಯ ತಪಾಸಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಜಡ್ಜ್ ಸೂಚಿಸಿದ್ದಾರೆ.

ಆರೋಪಿಗಳ ಪರ ವಕೀಲರ ವಾದವೇನು?

ಪ್ರಕರಣದ ತನಿಖೆ ವಿಚಾರದಲ್ಲಿ ಕೇಂದ್ರದ ತನಿಖಾ ತಂಡ, ರಾಜ್ಯದ ತನಿಖಾ ತಂಡದ ನಡುವೆ ಪೈಪೋಟಿ ನಡೆಯುತ್ತಿದೆ. KPSC ನೇಮಕಾತಿ ಅಕ್ರಮ ಸಂಬಂಧ ಯಾವುದೇ ಹಣ ರಿಕವರಿ ಆಗಿಲ್ಲ. ನಮ್ಮ ಕಕ್ಷಿದಾರರು ಎಲ್ಲೂ ಹೋಗಿಲ್ಲ, ಇಲ್ಲೇ ಇರುತ್ತಾರೆ. ತನಿಖೆಗೆ ಸಹಕಾರ ನೀಡುತ್ತಾರೆ, ಹಾಗಾಗಿ ಕಸ್ಟಡಿಗೆ ನೀಡುವುದು ಬೇಡ ಎಂದು ಶಿವಶಂಕರಪ್ಪ ಪರ ವಕೀಲರು ವಾದಿಸಿದ್ದರು. ಜೊತೆಗೆ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕೆಪಿಎಸ್​​ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಪ್ರಮುಖ ಆರೋಪಿಗಳ ಪಾತ್ರ ತನಿಖೆ ವೇಳೆ ಬಟಾಬಯಲು

ಇಡಿ ಪರ ವಕೀಲರ ವಾದವೇನು?

ತನಿಖೆಗೆ ಸಹಕರಿಸದೆ ನೆಪ ಹೇಳಿ ಜಾಮೀನು ಕೇಳುತ್ತಿದ್ದಾರೆ. ಸರಿಯಾಗಿ ತನಿಖೆಗೆ ಸಹಕಾರ ನೀಡಿದ್ರೆ ಕಸ್ಟಡಿಗೆ ಕೇಳುತ್ತಿರಲಿಲ್ಲ.ಬ್ಯಾಂಕ್​ಗೆ ಹಣ ಡೆಪಾಸಿಟ್ ಮಾಡಿರುವುದು ಶಿವಶಂಕರಪ್ಪ ಸಹಾಯಕ. ಜೊತೆಗೆ ಗೀತಾ ಪುತ್ರಿ ಬ್ಯಾಂಕ್​ಗೆ ಹಣ ಡೆಪಾಸಿಟ್ ಮಾಡಿರುವ ದಾಖಲೆಯೂ ಲಭ್ಯವಾಗಿದೆ.ಬ್ಯಾಂಕ್​ಗೆ ಹಣ ಡೆಪಾಸಿಟ್ ಮಾಡಿ ಅಕ್ನಾಲೆಡ್ಜ್​ಮೆಂಟ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯದ ಪರ ವಕೀಲ ಮಧುರಾವ್ ವಾದಿಸಿದ್ದರು. ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಅಲ್ಲದೆ ಉತ್ತರ ಪತ್ರಿಕೆಯನ್ನೂ ನೀಡಿದ್ದಾರೆ. ವಿನುತಾ ಹಾಲಪ್ಪ, ನಂದೀಶ್ ಉಲ್ಕುಕಟ್ಟೆ OMR ಶೀಟ್ ತಿದ್ದಲಾಗಿದೆ. ಆ ಸಂಬಂಧ ಈಗಾಗಲೇ ಅವರ ಹೇಳಿಕೆ ಪಡೆಯಲಾಗಿದೆ. 2026ರ ಜ.8ರಂದು ಅಭ್ಯರ್ಥಿಗಳಿಗೆ ಸರಿಯಾದ ಉತ್ತರ ನೀಡಲಾಗಿದ್ದು, ಅಭ್ಯರ್ಥಿಗಳ ಅಂತಿಮ ಆಯ್ಕೆಗೆ ಮುನ್ನ ವಿನುತಾ ಮತ್ತು ಆಕೆಯ ತಂದೆ ಸಂಪರ್ಕಿಸಿ ಹೋಟೆಲ್​ನಲ್ಲಿ ಭೇಟಿಯಾಗಿ ಶಿವಶಂಕರಪ್ಪ ಲಂಚದ ಹಣ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಶಿವಶಂಕರಪ್ಪ ನಿವಾಸದಲ್ಲಿಯೂ ಭೇಟಿ ನಡೆದಿದೆ. ವಿನುತಾ ಹಾಲಪ್ಪರಿಂದ 50 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಲಾಗಿದ್ದು, ಮೊದಲ ಹಂತದಲ್ಲಿ ಶಿವಶಂಕರಪ್ಪ 10 ಲಕ್ಷ ಪಡೆದಿದ್ದರು.

ಪರೀಕ್ಷೆಗೂ ಮುನ್ನ ಅಭ್ಯರ್ಥಿಗಳನ್ನು ರೆಸಾರ್ಟ್, ಹೋಟೆಲ್​ನಲ್ಲಿರಿಸಿದ್ದರು. ಆ ವೇಳೆ ಅಭ್ಯರ್ಥಿಗಳ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಎಕ್ಸಾಂ ದಿನ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಡ್ರಾಪ್ ಮಾಡಿದ್ದಾರೆ. 80 ಲಕ್ಷ ಹಣಕ್ಕೆ ಬೇಡಿಯಿಟ್ಟು ಮೊದಲ ಕಂತಿನಲ್ಲಿ 40 ಲಕ್ಷ ಪಡೆದಿದ್ದಾರೆ. ಕೆಲಸ ಸಿಗುವುದು ನಿಶ್ಚಿತವಾದ ಮೇಲೆ 40 ಲಕ್ಷ ನೀಡುವಂತೆ ಹೇಳಿದ್ದಾರೆ ಎಂದು ಸಂತ್ರಸ್ತ ಅಭ್ಯರ್ಥಿಗಳ ಪಟ್ಟಿ ಸಮೇತ ಕೋರ್ಟ್​ಗೆ ಇಡಿ ಪರ ವಕೀಲರು ಮಾಹಿತಿ ನೀಡಿದ್ದಾರೆ. ಕನ್ನಡ ಮತ್ತು ಜನರಲ್ ಸೈನ್ಸ್ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದ್ದು, ಆರೋಪಿಗಳ ವಿರುದ್ಧ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಟೆಕ್ನಿಕಲ್ ಎವಿಡೆನ್ಸ್ ಲಭ್ಯವಾಗಿದೆ. ಕೆಪಿಎಸ್​ಸಿ ಕಚೇರಿ ಮೇಲೆ ದಾಳಿ ವೇಳೆ ಮಹತ್ವದ ಸಾಕ್ಷ್ಯಗಳು ಸಿಕ್ಕಿದ್ದು, ಅಭ್ಯರ್ಥಿಗಳು ನೀಡಿದ್ದ ಬ್ಲಾಂಕ್ ಚೆಕ್ ಮತ್ತು​ ಪ್ರಾಮಿಸರಿ ನೋಟ್ ಪತ್ತೆಯಾಗಿವೆ. ಎಲ್ಲಾ ಅಂಶಗಳನ್ನು ಆಧರಿಸಿ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ನೀಡಬೇಕು ಎಂದು ಮಧುರಾವ್ ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗಳನ್ನು ಅಕ್ಟೋಬರ್​​ 19ರ ವರೆಗೆ ಇಡಿ ಕಸ್ಟಡಿಗೆ ನೀಡಿದ್ದು, ಅಂದು ಮಧ್ಯಾಹ್ನ 3ಕ್ಕೆ ಕೋರ್ಟ್​ಗೆ ಹಾಜರುಪಡಿಸಲು ಜಡ್ಜ್ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:19 pm, Wed, 7 October 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್