AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್​​: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸಂಬಂಧ FIR

KPSC Scam: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ 80 ಲಕ್ಷ ಡೀಲ್ ಆರೋಪದಡಿ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 2026 ಜನವರಿಯಲ್ಲಿ ನಡೆದಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಸುಮಾರು 29 ಅಭ್ಯರ್ಥಿಗಳು ಅಕ್ರಮವಾಗಿ ಉತ್ತೀರ್ಣರಾಗಿದ್ದಾರೆ ಎಂದು ದೂರಲಾಗಿತ್ತು. ಡೀಲ್​​ನ ಆಡಿಯೋ ಕೂಡ ವೈರಲ್​​ ಆಗಿತ್ತು.

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್​​: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸಂಬಂಧ FIR
KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್
ಪ್ರಸನ್ನ ಹೆಗಡೆ
|

Updated on:Jul 26, 2026 | 12:24 PM

Share

ಬೆಂಗಳೂರು, ಜುಲೈ 26: 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ ಮತ್ತೊಂದು FIR ದಾಖಲಾಗಿದೆ. ಸಂಬಂಧಿಕರಿಗೆ, ಹಣ ನೀಡಿದವರಿಗೆ ಹುದ್ದೆ ಎಂದು ಆರೋಪಿಸಿ ಪಶು ವೈದ್ಯಾಧಿಕಾರಿ ಮಂಜುನಾಥ ಎಂಬುವರು ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಶಿವಶಂಕರಪ್ಪ ಸಾಹುಕರ್, KPSC ಸದಸ್ಯರು, ಕೆಲ ಅಭ್ಯರ್ಥಿಗಳ ಮೇಲೆ FIR ದಾಖಲಾಗಿದೆ.

KPSC ಮಾಜಿ ಅಧ್ಯಕ್ಷರ ವಿರುದ್ಧದ ಆರೋಪವೇನು?

2026 ಜನವರಿಯಲ್ಲಿ ನಡೆದಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಸುಮಾರು 29 ಅಭ್ಯರ್ಥಿಗಳು ಅಕ್ರಮವಾಗಿ ಉತ್ತೀರ್ಣರಾಗಿದ್ದಾರೆ. ಶಿವಶಂಕರಪ್ಪ ಸಂಬಂಧಿ ಸೂಗುರೇಶ್‌ ಜಾಕ ಸೇರಿ 24 ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅನುಮಾನದ ಜೊತೆಗೆ, ಇಂತಹ ಕೆಲ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ತರಬೇತಿ ನೀಡಿದ್ದಾರೆ. ಕೆಲವರಿಗೆ OMR ಶೀಟ್ ತಿದ್ದುಪಡಿ ಅಕ್ರಮ ನಡೆಸಿದ್ದಾರೆ ಎಂದು ದೂರಲಾಗಿತ್ತು. ಅಲ್ಲದೆ, ಈ ಬಗ್ಗೆ 80 ಲಕ್ಷ ರೂಪಾಯಿಗಳ ಡೀಲ್ ಆಡಿಯೋ ಕೂಡ ವೈರಲ್ ಆಗಿತ್ತು. ಅಭ್ಯರ್ಥಿಗಳ ಖಾಸಗಿ ಮಾಹಿತಿ, OMR ಶೀಟ್ ಅಂಕಗಳ ಮಾಹಿತಿ ಮಧ್ಯವರ್ತಿಗಳಿಗೆ ಸಿಕ್ಕಿದ್ದರ ಹಿಂದೆ ಆರೋಪಿಗಳ ಕೈವಾಡ ಇದೆ. ಹೀಗಾಗಿ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ದಾಖಲಾಗಿದ್ದ ದೂರಿನ ಅನ್ವಯ ವಂಚನೆ ಮತ್ತು ಕರ್ನಾಟಕ ಪಬ್ಲಿಕ್​​ ಎಕ್ಸಾಮಿನೇಷನ್​​ ಆ್ಯಕ್ಟ್​​ ಅಡಿ ಎಫ್​​ಐಆರ್​​ ದಾಖಲಾಗಿದೆ.

ಇದನ್ನೂ ಓದಿ: KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್​​ ಬಿಕರಿ?

‘ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟ ಬೇಡ’

ಸಾಲು ಸಾಲು ವಿವಾದಗಳ ಹಿನ್ನೆಲೆ ಕೆಪಿಎಸ್ಸಿಯಲ್ಲೂ ಬದಲಾವಣೆ ಆಗಲಿದ್ಯಾ ಎಂಬ ಪ್ರಶ್ನೆಗೆ ರಾಜ್ಯ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಪ್ರತಿಕ್ರಿಯಿಸಿದ್ದು, ಯಾರೂ ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟ ಆಡುವಂತಿಲ್ಲ. ಆಡಳಿತ ವಿಪಕ್ಷದವರು ಎಲ್ಲರು ಸೇರಿ ಕ್ರಾಂತಿ ಮಾಡೋಣ. ಹೊಸ ಕಾನೂನು ಜಾರಿಗೆ ತರೋಣ. ಆ ಮೂಲಕ ಕೇಂದ್ರ, ರಾಜ್ಯದಲ್ಲಿ ಪಾರದರ್ಶಕವಾದ ನೇಮಕಾತಿ ವ್ಯವಸ್ಥೆ ಜಾರಿಗೆ ಮಾಡೋಣ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, KPSC ಚೇರ್ಮನ್ ಯಾರ ನಾಮಿನಿ? ಅವರ ಪರ ಹೈಕೋರ್ಟ್​​ನಲ್ಲಿ ಡಿಫೆಂಡ್​​ ಮಾಡುತ್ತಿರೋದು ಯಾರೆಂದು ಪ್ರಶ್ನಿಸಿದ್ದಾರೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:51 am, Sun, 26 July 26

Follow Us
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!