AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ಪ್ರಕರಣ: ತನಿಖೆಗೆ ಎಸ್​ಐಟಿ ರಚನೆ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸರ್ಕಾರದಿಂದ ಅರ್ಜಿ; ಕಾರಣಗಳು ಇಲ್ಲಿವೆ

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದ್ದ ಎಸ್‌ಐಟಿ ರಚನೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಿಐಡಿ ತನಿಖೆ ಸರಿಯಾಗಿ ನಡೆಯುತ್ತಿದ್ದು ಎಸ್‌ಐಟಿ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದ್ದರೆ, ಭ್ರಷ್ಟಾಚಾರ ಮುಚ್ಚಿಹಾಕಲು ಸರ್ಕಾರ ಎಸ್‌ಐಟಿ ವಿರೋಧಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೆಪಿಎಸ್​ಸಿ ಪ್ರಕರಣ: ತನಿಖೆಗೆ ಎಸ್​ಐಟಿ ರಚನೆ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸರ್ಕಾರದಿಂದ ಅರ್ಜಿ; ಕಾರಣಗಳು ಇಲ್ಲಿವೆ
ತನಿಖೆಗೆ ಎಸ್​ಐಟಿ ರಚನೆ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸರ್ಕಾರದಿಂದ ಅರ್ಜಿ
ಕಿರಣ ಹೆಚ್​. ವಿ.
| Edited By: |

Updated on:Sep 26, 2026 | 2:24 PM

Share

ಮುಖ್ಯಾಂಶಗಳು

  • ಕೆಪಿಎಸ್‌ಸಿ ಹಗರಣದ ಎಸ್‌ಐಟಿ ತನಿಖೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ.
  • ಸಿಐಡಿ ತನಿಖೆ ಲೋಪಗಳನ್ನ ಉಲ್ಲೇಖಿಸದೆ ಎಸ್‌ಐಟಿ ರಚಿಸಿದ್ದಕ್ಕೆ ಸರ್ಕಾರದ ಆಕ್ಷೇಪ.
  • ಎಸ್‌ಐಟಿ ವಿರೋಧಿಸಿದ ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ.

ಬೆಂಗಳೂರು, ಸೆಪ್ಟೆಂಬರ್ 26: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೈ ಕೋರ್ಟ್​ ಆದೇಶದಂತೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ ತಂಡವು 100 ದಿನಗಳ ಒಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಈಗಾಗಲೇ ಪ್ರಕರಣದ ಶೇ 80ರಷ್ಟು ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಸಾಕ್ಷ್ಯಗಳನ್ನು ಕಲೆಹಾಕಿ, ಹಣವನ್ನು ಸೀಜ್ ಮಾಡಿದ್ದಾರೆ. ಇಷ್ಟಾದ ಮೇಲೆ ಇನ್ನೊಂದು ತಂಡವನ್ನು ರಚಿಸಿ ತನಿಖೆ ನಡೆಸಲು ಹೇಳುವ ಅಗತ್ಯವೇನಿದೆ ಎಂಬ ಪ್ರಶ್ನೆ ಸರ್ಕಾರದ್ದು.

ಸಿಐಡಿ ತನಿಖೆಯಲ್ಲಿ ಏನು ಲೋಪವಿದೆ

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದ್ದ ಅಲೋಕ್ ಕುಮಾರ್ ನೇತೃತ್ವದ 5 ಅಧಿಕಾರಿಗಳ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮೂಲ ಅರ್ಜಿದಾರರು ಸಿಬಿಐ ತನಿಖೆಗೆ ಮನವಿ ಮಾಡಿದ್ದರೂ ಹೈಕೋರ್ಟ್ ಎಸ್‌ಐಟಿ ರಚನೆ ಮಾಡಿದ್ದು ಸರಿಯಲ್ಲ ಹಾಗೂ ಸದ್ಯ ನಡೆಯುತ್ತಿರುವ ಸಿಐಡಿ ತನಿಖೆಯಲ್ಲಿ ಏನು ಲೋಪವಿದೆ ಎಂಬುದನ್ನು ಹೈಕೋರ್ಟ್ ಸರಿಯಾಗಿ ಉಲ್ಲೇಖಿಸಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ. ಅಲ್ಲದೆ, ಕೋರ್ಟ್ ಆಗಸ್ಟ್ 24ರಂದು ತನಿಖಾ ವರದಿಯನ್ನು ಪಡೆದುಕೊಂಡ ನಂತರ ನಡೆಸಲಾದ ಸಿಐಡಿ ತನಿಖೆಯ ಮಾಹಿತಿಯನ್ನು ಪರಿಗಣಿಸದೆ ಆದೇಶ ಹೊರಡಿಸಿದೆ ಎಂದು ಆಕ್ಷೇಪಿಸಿರುವ ಸರ್ಕಾರ, ಹೈಕೋರ್ಟ್‌ನ ಎಸ್‌ಐಟಿ ರಚನೆ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದೆ.

ಅರ್ಜಿಗೆ ಕಾರಣಗಳು ಹೀಗಿವೆ

  • ಕಾರಣ 1. ಅರ್ಜಿದಾರರು ಸಿಬಿಐ ತನಿಖೆ ಆಗಬೇಕು ಎಂದು ಕೇಳಿದ್ದರು.
  • ಕಾರಣ 2. ಎಸ್​ಐಟಿ ರಚನೆ ಮಾಡಿ 5 ಅಧಿಕಾರಿಗಳ ನೇಮಕ ಮಾಡಿರುವುದು ಸರಿ ಇಲ್ಲ.
  • ಕಾರಣ 3. ಸಿಐಡಿ ತನಿಖೆಯಲ್ಲಿ ತಪ್ಪೇನು ಎಂಬುದರ ಬಗ್ಗೆ ಸರಿಯಾಗಿ ಉಲ್ಲೇಖ ಇಲ್ಲ.
  • ಕಾರಣ 4. 24ರ ನಂತರ ತನಿಖೆ ಕುರಿತು ಅದರ ಬಗ್ಗೆ ಮಾಹಿತಿಯನ್ನು ಪರಿಗಣಿಸಿಲ್ಲ .

ಹಾಗಾಗಿ ಹೈ ಕೋರ್ಟ್​ ಆದೇಶವನ್ನು ರದ್ದು ಪಡಿಸುವಂತೆ ಸುಪ್ರೀಂ ಕೋರ್ಟ್​ಗೆ ಸರ್ಕಾರ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ ಕೆಪಿಎಸ್​ಸಿ ನೇಮಕಾತಿ ಅಕ್ರಮ: ಎಸ್​ಐಟಿ ರಚನೆಯ ಹೈಕೋರ್ಟ್ ಆದೇಶಕ್ಕೆ ಸರ್ಕಾರ ಠಕ್ಕರ್, ಸುಪ್ರೀಂನಲ್ಲಿ ಪ್ರಶ್ನಿಸಲು ತೀರ್ಮಾನ

ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ, ಸಿಐಡಿ ತನಿಖೆಯ ಮೂಲಕ ಹಗರಣ ಮತ್ತು ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ. ಪಾರದರ್ಶಕ ತನಿಖೆ ನಡೆದಿದ್ದರೆ ಸರ್ಕಾರಕ್ಕೆ ಎಸ್‌ಐಟಿ ಎಂದರೆ ಏಕೆ ಭಯ? ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುವ ಅಧಿಕಾರಿಗಳು ಬೇಕು ಎನ್ನುವ ಕಾರಣಕ್ಕೆ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Sat, 26 September 26

Follow Us
ಕಿರಣ ಹೆಚ್​. ವಿ.
ಕಿರಣ ಹೆಚ್​. ವಿ.
ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ
ಮೈಸೂರು ದಸರಾ ಸಂಭ್ರಮ: ಗಜಪಡೆಗೆ ಇಂದಿನಿಂದ ಕುಶಾಲತೋಪು ತರಬೇತಿ ಆರಂಭ
ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!
ಕೊಪ್ಪಳದ ಗವಿಸಿದ್ದೇಶ್ವರರಿಗೂ ಮೊದಲು ದಸರಾ ಉದ್ಘಾಟಿಸಿದ್ದ ಮಠಾಧೀಶರು ಇವರು!
ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !
ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !
ನಂದಿನಿ ಹಾಲಿನ ದರ ಏರಿಕೆ ಬಹುತೇಕ ಖಚಿತ
ನಂದಿನಿ ಹಾಲಿನ ದರ ಏರಿಕೆ ಬಹುತೇಕ ಖಚಿತ
ಅರಣ್ಯ ವೀಕ್ಷಕನ ಮನೆಯಲ್ಲಿಯೇ ಲಕ್ಷಾಂತರ ಮೌಲ್ಯದ ಅಕ್ರಮ ನಾಟ ವಶ!
ಅರಣ್ಯ ವೀಕ್ಷಕನ ಮನೆಯಲ್ಲಿಯೇ ಲಕ್ಷಾಂತರ ಮೌಲ್ಯದ ಅಕ್ರಮ ನಾಟ ವಶ!
ಇಂದು ಅನಂತ ಹುಣ್ಣಿಮೆಯ ವಿಶೇಷ ದಿನ; ಈ ಎಲ್ಲಾ ರಾಶಿಗಳಿಗೆ ಶುಭ
ಇಂದು ಅನಂತ ಹುಣ್ಣಿಮೆಯ ವಿಶೇಷ ದಿನ; ಈ ಎಲ್ಲಾ ರಾಶಿಗಳಿಗೆ ಶುಭ
'ಭೂಮಿ ಬಿಡಿ, ಇಲ್ಲಾ ದಯಾಮರಣ ಕೊಡಿ' ಎಂದು ಆಕ್ರೋಶ
'ಭೂಮಿ ಬಿಡಿ, ಇಲ್ಲಾ ದಯಾಮರಣ ಕೊಡಿ' ಎಂದು ಆಕ್ರೋಶ
ಬೆಳೆ ಉಳಿಸಿಕೊಳ್ಳಲು ಪರದಾಟ: ವಿದ್ಯುತ್​ಗಾಗಿ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
ಬೆಳೆ ಉಳಿಸಿಕೊಳ್ಳಲು ಪರದಾಟ: ವಿದ್ಯುತ್​ಗಾಗಿ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
ಭಜನ್ ಕ್ಲಬ್ಬಿಂಗ್​; ದೆಹಲಿಯಲ್ಲಿ ಭಕ್ತಿಗೀತೆಗೆ ತಾಳ ಹಾಕಿದ ಪ್ರಧಾನಿ ಮೋದಿ
ಭಜನ್ ಕ್ಲಬ್ಬಿಂಗ್​; ದೆಹಲಿಯಲ್ಲಿ ಭಕ್ತಿಗೀತೆಗೆ ತಾಳ ಹಾಕಿದ ಪ್ರಧಾನಿ ಮೋದಿ
ಬಳ್ಳಾರಿ ಪಾದಯಾತ್ರೆ ಯಶಸ್ಸಿನ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಯಾತ್ರೆ
ಬಳ್ಳಾರಿ ಪಾದಯಾತ್ರೆ ಯಶಸ್ಸಿನ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಯಾತ್ರೆ