AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 5 ಕೋಟಿ ರೂ. ವಹಿವಾಟು ಬೆಳಕಿಗೆ; ಇನ್ನೂ ಹಲವರ ಬಂಧನ ಸಾಧ್ಯತೆ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದಲ್ಲಿ 5 ಕೋಟಿ ರೂ. ವಹಿವಾಟು ನಡೆದಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದ್ದು, ಇದುವರೆಗೆ 15 ಅಭ್ಯರ್ಥಿಗಳು ಸೇರಿ ಕೆಲ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ KPSCಯ 3 ನೇಮಕಾತಿಯಲ್ಲೂ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಎಡವಟ್ಟು ಮಾಡಿಕೊಂಡಿರೋದು ತನಿಖೆ ವೇಳೆ ಬಯಲಾಗಿದೆ.

ಕೆಪಿಎಸ್​ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 5 ಕೋಟಿ ರೂ. ವಹಿವಾಟು ಬೆಳಕಿಗೆ; ಇನ್ನೂ ಹಲವರ ಬಂಧನ ಸಾಧ್ಯತೆ
ಕೆಪಿಎಸ್​ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣImage Credit source: KPSC
ಪ್ರದೀಪ್​ ಚಿಕ್ಕಾಟಿ
| Edited By: |

Updated on:Sep 13, 2026 | 9:01 AM

Share

ಬೆಂಗಳೂರು, ಸೆಪ್ಟೆಂಬರ್​​ 13: ಕೆಪಿಎಸ್​ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳಿಂದ ತನಿಖೆ ಮುಂದುವರಿದಿದ್ದು, ಒಂದೊಂದೇ ಸ್ಫೋಟಕ ಮಾಹಿತಿ ರಿವೀಲ್​​ ಆಗ್ತಿದೆ. 5 ಕೋಟಿ ರೂಪಾಯಿ ವಹಿವಾಟು ನಡೆದಿರೋದು ಸಿಐಡಿ ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದ್ದು, 85 ಲಕ್ಷ ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿರೋದು ಪತ್ತೆಯಾಗಿದೆ. ಇದುವರೆಗೂ ಪ್ರಕರಣದಲ್ಲಿ 273 ಮಂದಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ 15 ಅಭ್ಯರ್ಥಿಗಳು ಸೇರಿ ಕೆಲ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ

ನಗದು ಮೂಲಕವೇ ಹೆಚ್ಚು ವ್ಯವಹಾರವಾಗಿರೋದು ತನಿಖೆ ವೇಳೆ ಪತ್ತೆಯಾಗಿದ್ದು, ಬೀದರ್ ಸೌಹಾರ್ದ ಬ್ಯಾಂಕ್ ಮ್ಯಾನೇಜರ್ ವಿಚಾರಣೆ ಸಂದರ್ಭ, ಕನ್ನಾಳೆ ಜೊತೆಗಿನ ವ್ಯವಹಾರದ ಬಗ್ಗೆ ಅವರು ತಪ್ಪೊಪ್ಪಿಕೊಂಡಿದ್ದಾರೆ. ಉಳಿದಂತೆ ಶಾಂತ ಹೊಸಮನಿ ವಿಚಾರಣೆಗೆ ಬಾರದ ಹಿನ್ನಲೆ ಅವರಿಗೆ ಮತ್ತೊಮ್ಮೆ ನೋಟಿಸ್​​​ ಕೊಡಲು ಸಿಐಡಿ ತಯಾರಿ ಮಾಡಿಕೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ಐಎಎಸ್​ ಅಧಿಕಾರಿ ಜ್ಞಾನೇಂದ್ರ ವಿಚಾರಣೆ ನಡೆಸಿರೋ ಅಧಿಕಾರಿಗಳು, ಅವರ ಜೊತೆಗಿದ್ದ ಯುವತಿ ಬಳಿಯಿದ್ದ 23 ಲಕ್ಷದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಬಸವರಾಜ್ ಕನ್ನಾಳೆ ಸಹಚರರಿಗೂ ಬಲೆ ಬೀಸಿರುವ ಸಿಐಡಿ, ಪ್ರಕರಣ ಸಂಬಂಧ ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೆಪಿಎಸ್​ಸಿಯಲ್ಲಿ ಮತ್ತೊಂದು ಭಾರೀ ಅಕ್ರಮ: ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿಯಲ್ಲೂ ಅಕ್ರಮ, ಒಎಂಆರ್ ಶೀಟ್ ತಿದ್ದುಪಡಿ!

KPSCಯ 3 ನೇಮಕಾತಿಯಲ್ಲೂ ಶಾಂತ ಹೊಸಮನಿ ಎಡವಟ್ಟು

KPSCಯ 3 ನೇಮಕಾತಿಯಲ್ಲೂ ಶಾಂತ ಹೊಸಮನಿ ಎಡವಟ್ಟು ಮಾಡಿಕೊಂಡಿದ್ದು, RWD ಇಲಾಖೆ AEE ಅಕ್ರಮದಲ್ಲೂ ಶಾಂತಾ ಹೆಸರು ತಳಕುಹಾಕಿಕೊಂಡಿದೆ. 2023ರಲ್ಲಿ AEE ಅಕ್ರಮ ತನಿಖೆಗೆ ಉಪ ಸಮಿತಿ ನೇಮಿಸಲಾಗಿತ್ತು. ಆದರೆ ಸದಸ್ಯರಿಗೆ ತಿಳಿಸಿದೆ ಆಯ್ಕೆ ಪಟ್ಟಿ ಪ್ರಕಟಿಸಲು ಶಾಂತ ಹೊಸಮನಿ ಮುಂದಾಗಿದ್ದರು. ಆಗಿನ ಕಾರ್ಯದರ್ಶಿ ಲತಾ ಕುಮಾರಿ ಮೂಲಕ ಪ್ರಕಟಣೆಗೆ ಮುಂದಾಗಿದ್ದರು. ಆದರೆ ಕೆಲ ಸದಸ್ಯರ ಆಕ್ಷೇಪದಿಂದ ಪಟ್ಟಿ ಪ್ರಕಟವಾಗಿರಲಿಲ್ಲ. ಬಳಿಕ ಉಪ ಸಮಿತಿಯಿಂದ ಶಾಂತ ಹೊಸಮನಿ ಹೊರಗಿಡಲಾಗಿತ್ತು ಎಂಬುದೀಗ ಬಹಿರಂಗಗೊಂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:59 am, Sun, 13 September 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್