KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಇ.ಡಿ ಬೆನ್ನಲ್ಲೇ ಎಸ್​​ಐಟಿಯಿಂದಲೂ ಚಾರ್ಜ್​​ಶೀಟ್​​ ಸಲ್ಲಿಕೆ

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ ಅಕ್ರಮಗಳ ಕುರಿತು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಶ್ನೆಪತ್ರಿಕೆ ನೀಡಿ ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದ ಬಗ್ಗೆಯೂ ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಇ.ಡಿ ಬೆನ್ನಲ್ಲೇ ಎಸ್​​ಐಟಿಯಿಂದಲೂ ಚಾರ್ಜ್​​ಶೀಟ್​​ ಸಲ್ಲಿಕೆ
KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ
Edited By:

Updated on: Nov 25, 2026 | 6:06 PM

ಬೆಂಗಳೂರು, ನವೆಂಬರ್​​ 25: KPSCಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಕೂಡ ಚಾರ್ಜ್​​ಶೀಟ್​​ ಸಲ್ಲಿಕೆ ಮಾಡಿದ್ದಾರೆ. ಹಿಂದಿನ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್, ಮಧ್ಯವರ್ತಿ ಬಸವರಾಜ ಕನ್ನಾಳೆಯ ಅಕ್ರಮ ಮತ್ತು ಅವ್ಯವಹಾರಗಳ ಬಗ್ಗೆ ಇದರಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳ ಬಳಿ 40 ಲಕ್ಷದಿಂದ 80 ಲಕ್ಷದವರೆಗೆ ಹಣ ವಸೂಲಿ ಮಾಡಲಾಗಿತ್ತು ಎಂಬುದನ್ನು ಸೇರಿ 15 ಅಭ್ಯರ್ಥಿಗಳ ಜೊತೆ ಡೀಲ್ ವಿಚಾರ, ಪ್ರಶ್ನೆಪತ್ರಿಕೆ ಸೋರಿಕೆ, ಪ್ರಶ್ನೆಪತ್ರಿಕೆ ನೀಡಿ ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದ ಬಗ್ಗೆಯೂ ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.

ಇಡಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಏನಿತ್ತು?

ಸಿಸಿ ಕ್ಯಾಮರಾ ಇಲ್ಲದ ಜಾಗದಲ್ಲೇ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗತಿತ್ತು. ಪಶುವೈದ್ಯಾಧಿಕಾರಿ, ಜೆಇ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಸಂದರ್ಶನ ಇದೇ ರೀತಿ ನಡೆದಿತ್ತು. ಅಕ್ರಮ ನಡೆಸುವ ಉದ್ದೇಶದಿಂದಲೇ ಈ ರೀತಿಯ ಜಾಗವನ್ನು ಆಯ್ದುಕೊಳ್ಳಲಾಗುತ್ತಿತ್ತು . ಜ್ಞಾನೇಂದ್ರ ಕುಮಾರ್ ಕುಟುಂಬಸ್ಥರ ಬ್ಯಾಂಕ್ ಖಾತೆಗಳಿಗೆ ನಗದು ಜಮೆ ಮಾಡಲಾಗಿದೆ. ಜ್ಞಾನೇಂದ್ರ ಅತ್ತಿಗೆಯ ಬ್ಯಾಂಕ್ ಖಾತೆಗೆ 15 ಲಕ್ಷದ 39 ಸಾವಿರದ 500 ರೂಪಾಯಿ ಮತ್ತು ತಮ್ಮನ ಬ್ಯಾಂಕ್ ಖಾತೆಗೆ 10 ಲಕ್ಷದ 94 ಸಾವಿರ ರೂಪಾಯಿ ಡೆಪಾಸಿಟ್ ಮಾಡಿರುವ ಬಗ್ಗೆ ಚಾರ್ಜ್​​ಶೀಟ್​​ಬಲ್ಲಿ ಇಡಿ ಉಲ್ಲೇಖಿಸಿದೆ.

Loading...

ಇದನ್ನೂ ಓದಿ: ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಚಾರ್ಜ್​​ಶೀಟ್​​ನಲ್ಲಿ ಆರೋಪಿಗಳ ಕಳ್ಳಾಟ ಬಿಚ್ಚಿಟ್ಟ ಇಡಿ

ಪ್ರಶ್ನೆಪತ್ರಿಕೆ ಸೋರಿಕೆಗಾಗಿ 10 ಅಭ್ಯರ್ಥಿಗಳಿಂದ 3.20 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿತ್ತು. ಅದರಲ್ಲಿ 1.52 ಕೋಟಿ ಹಣ ವಸೂಲಿ‌ ಮಾಡಿರುವ ಬಗ್ಗೆ ದಾಖಲೆ ಪತ್ತೆಯಾಗಿದೆ. ಬ್ಯಾಂಕ್ ಖಾತೆ ಮೂಲಕ 92 ಲಕ್ಷ, ನಗದು ರೂಪದಲ್ಲಿ 60 ಲಕ್ಷ ಪಡೆದಿದ್ದರು. ಪರೀಕ್ಷೆಗೆ ಒಂದು ದಿನ ಮೊದಲು ಬೆಂಗಳೂರು ಹೊರವಲಯದ ವಿಲ್ಲಾಗಳಲ್ಲಿ ಅಭ್ಯರ್ಥಿಗಳಿಗೆ ಪ್ರಿಂಟ್​ಔಟ್ ನೀಡಲಾಗಿತ್ತು. 6 ಅಭ್ಯರ್ಥಿಗಳಿಗೆ ಕೀ ಉತ್ತರ, ಸಂದರ್ಶನದಲ್ಲಿ ಹೆಚ್ಚು ಅಂಕ ನೀಡಲು ಡೀಲ್ ಆಗಿತ್ತು. ಶಿವಶಂಕರಪ್ಪ ಸಾಹುಕಾರ್ 4.17 ಕೋಟಿ, ಜ್ಞಾನೇಂದ್ರ ಕುಮಾರ್ 1.52 ಕೋಟಿ, ಬಸವರಾಜ್ ಕನ್ನಾಳೆ 1.52 ಕೋಟಿ ಮತ್ತು ಗೀತಾ 1.18 ಕೋಟಿ ಹಣವನ್ನು ಅಕ್ರಮ ಹಣಸಂಪಾದನೆ ಮಾಡಿರುವುದು ಪತ್ತೆಯಾಗಿದೆ. ನಾಲ್ವರು ಪ್ರಮುಖ ಆರೋಪಿಗಳ ಬಂಧನವಾಗಿದ್ದು, 1.22 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಚಾರ್ಜ್​​ಶೀಟ್​​ನಲ್ಲಿ ಇಡಿ ತಿಳಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
Loading...
Unable to load recommendations.
Follow Us