ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಎಸ್​ಐಟಿ ರಚಿಸಿ ಹೈಕೋರ್ಟ್​​ನಿಂದ ಮಹತ್ವದ ಆದೇಶ

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಅಲೋಕ್ ಕುಮಾರ್ ನೇತೃತ್ವದ ವಿಶೇಷ ತನಿಖಾ ತಂಡ (SIT) ರಚಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದು, 100 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದೆ. ರಾಜ್ಯ ಸರ್ಕಾರ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಬೇಕು. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಬೇಕು ಎಂದೂ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಿಳಿಸಿದೆ.

ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಎಸ್​ಐಟಿ ರಚಿಸಿ ಹೈಕೋರ್ಟ್​​ನಿಂದ ಮಹತ್ವದ ಆದೇಶ
ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಎಸ್​ಐಟಿ ರಚಿಸಿ ಹೈಕೋರ್ಟ್​​ನಿಂದ ಮಹತ್ವದ ಆದೇಶ
Image Credit source: PTI
Edited By:

Updated on: Sep 21, 2026 | 5:12 PM

ಬೆಂಗಳೂರು, ಸೆಪ್ಟೆಂಬರ್​​ 21: ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಸಂಬಂಧ  ತನಿಖೆಗೆ ಎಸ್‌ಐಟಿ ರಚಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಎಸ್‌ಐಟಿ ತಂಡದ ನೇತೃತ್ವವನ್ನು ಅಲೋಕ್ ಕುಮಾರ್ ವಹಿಸಲಿದ್ದು, ದಿವ್ಯಾ ಗೋಪಿನಾಥ್, ಅನೂಪ್ ಶೆಟ್ಟಿ, ಕುಶಾಲ್ ಚೌಕ್ಸೆ, ಕ್ಷಮಾ ಮಿಶ್ರಾ ಅವರಿರುವ ವಿಶೇಷ ತನಿಖಾ ತಂಡ ರಚಿಸಿ ಕೋರ್ಟ್​​ ಆದೇಶಿಸಿದೆ. ಇಡಿಗೂ ಅಗತ್ಯ ಸಹಕಾರ ನೀಡಲು ಎಸ್‌ಐಟಿಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. 100 ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದ್ದು, 30 ದಿನಗಳಿಗೊಮ್ಮೆ ತನಿಖಾ ಪ್ರಗತಿ ವರದಿ ಸಲ್ಲಿಸಲು ಕೋರ್ಟ್​​ ತಿಳಿಸಿದೆ.

ಖಡಕ್​​ ಸೂಚನೆ ಕೊಟ್ಟಿರುವ ಹೈಕೋರ್ಟ್​​

ಪ್ರಕರಣ ಸಂಬಂಧ ಸಿಐಡಿ ಸಂಪೂರ್ಣ ದಾಖಲೆಗಳನ್ನು ಎಸ್‌ಐಟಿ ವಶಕ್ಕೆ ನೀಡಬೇಕು. ತನಿಖೆ ನಡೆಸುತ್ತಿರುವ ಪೊಲೀಸರು ಒಂದು ವಾರದಲ್ಲಿ ದಾಖಲೆಗಳನ್ನು ಹಸ್ತಾಂತರಿಸಬೇಕು. ರಾಜ್ಯ ಸರ್ಕಾರ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಬೇಕು. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಬೇಕು. ಜೊತೆಗೆ ತನಿಖೆಗೆ ಯಾವುದೇ ಅಡ್ಡಿವುಂಟುಮಾಡಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: ಕೆಪಿಎಸ್​​ಸಿ ಕರ್ಮಕಾಂಡದ ಮತ್ತಷ್ಟು ಸ್ಫೋಟಕ ಸಂಗತಿ ಬಯಲು: ಅಕ್ರಮದ ಹಣದಲ್ಲಿ ಗೆಳತಿಯೊಂದಿಗೆ ಮೋಜು ಮಸ್ತಿ

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಹಿನ್ನೆಲೆ

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಹೊರಬಿದ್ದ ತಕ್ಷಣ, ಸುಮಾರು 50ಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬೆನ್ನಲ್ಲೇ ಮಧ್ಯವರ್ತಿಗಳು ಪ್ರತಿ ಪಶು ವೈದ್ಯಾಧಿಕಾರಿ ಹುದ್ದೆಗೆ 70 ಲಕ್ಷದಿಂದ 80 ಲಕ್ಷದವರೆಗೆ ಲಂಚ ಕೇಳುತ್ತಿರುವ ಆಡಿಯೋ ಸಂಭಾಷಣೆಗಳು ಬಹಿರಂಗಗೊಂಡಿದ್ದವು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರವು ಇದರ ತನಿಖೆಯನ್ನು ಸಿಐಡಿ (CID)ಗೆ ವಹಿಸಿತ್ತು. ಜೊತೆಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ಜಾರಿ ನಿರ್ದೇಶನಾಲಯ (ED) ಕೂಡ ಕೇಸ್​​ ಸಂಬಂಧ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಈಗಾಗಲೇ ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​, ಅಭ್ಯರ್ಥಿಗಳು ಸೇರಿ ಸಾಕಷ್ಟು ಮಂದಿಯ ವಿಚಾರಣೆ ನಡೆಸಲಾಗಿದೆ. KPSC ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಪ್ರಮುಖ ಕಿಂಗ್‌ಪಿನ್ ಹಾಗೂ ಮಧ್ಯವರ್ತಿಯಾಗಿದ್ದ ಬಸವರಾಜ್ ಕನ್ನಾಳೆ ಎಂಬಾತನನ್ನು ಬಂಧಿಸಿ ಗ್ರಿಲ್​​ ಮಾಡಲಾಗ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:10 pm, Mon, 21 September 26

Loading...
Unable to load recommendations.
Follow Us