ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಚಾರ್ಜ್​​ಶೀಟ್​​ನಲ್ಲಿ ಆರೋಪಿಗಳ ಕಳ್ಳಾಟ ಬಿಚ್ಚಿಟ್ಟ ಇಡಿ

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿ ನಾಲ್ವರು ಆರೋಪಿಗಳ ಕೋಟ್ಯಂತರ ರೂಪಾಯಿ ಅಕ್ರಮ ಹಣ ಸಂಪಾದನೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಡೀಲ್ ಕುರಿತು ಹಲವು ಪ್ರಮುಖ ಅಂಶಗಳನ್ನು ಇದರಲ್ಲಿ ಉಲ್ಲೇಖಿಸಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದೆ.

ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಚಾರ್ಜ್​​ಶೀಟ್​​ನಲ್ಲಿ ಆರೋಪಿಗಳ ಕಳ್ಳಾಟ ಬಿಚ್ಚಿಟ್ಟ ಇಡಿ
ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ
Edited By:

Updated on: Nov 16, 2026 | 3:01 PM

ಬೆಂಗಳೂರು, ನವೆಂಬರ್​​ 16: ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಸಂಬಂಧ ಬೆಂಗಳೂರಿನ PMLA ವಿಶೇಷ ಕೋರ್ಟ್​ಗೆ ಇಡಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ, ಸದಸ್ಯೆ ಗೀತಾ, KPSC ಪರೀಕ್ಷಾ ನಿಯಂತ್ರಕನಾಗಿದ್ದ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಬಸವರಾಜ ಕನ್ನಾಳೆ ವಿರುದ್ಧ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ವೇಳೆ ನಡೆದಿದ್ದ ಡೀಲ್ ಬಗ್ಗೆ ಇದರಲ್ಲಿ ಉಲ್ಲೇಖಿಸಲಾಗಿದೆ.

’10 ಅಭ್ಯರ್ಥಿಗಳಿಂದ 3.20 ಕೋಟಿ ರೂಪಾಯಿಗೆ ಬೇಡಿಕೆ’

ಪ್ರಶ್ನೆಪತ್ರಿಕೆ ಸೋರಿಕೆಗಾಗಿ 10 ಅಭ್ಯರ್ಥಿಗಳಿಂದ 3.20 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿತ್ತು. ಅದರಲ್ಲಿ 1.52 ಕೋಟಿ ಹಣ ವಸೂಲಿ‌ ಮಾಡಿರುವ ಬಗ್ಗೆ ದಾಖಲೆ ಪತ್ತೆಯಾಗಿದೆ. ಬ್ಯಾಂಕ್ ಖಾತೆ ಮೂಲಕ 92 ಲಕ್ಷ, ನಗದು ರೂಪದಲ್ಲಿ 60 ಲಕ್ಷ ಪಡೆದಿದ್ದರು. ಪರೀಕ್ಷೆಗೆ ಒಂದು ದಿನ ಮೊದಲು ಬೆಂಗಳೂರು ಹೊರವಲಯದ ವಿಲ್ಲಾಗಳಲ್ಲಿ ಅಭ್ಯರ್ಥಿಗಳಿಗೆ ಪ್ರಿಂಟ್​ಔಟ್ ನೀಡಲಾಗಿತ್ತು. 6 ಅಭ್ಯರ್ಥಿಗಳಿಗೆ ಕೀ ಉತ್ತರ, ಸಂದರ್ಶನದಲ್ಲಿ ಹೆಚ್ಚು ಅಂಕ ನೀಡಲು ಡೀಲ್ ಆಗಿತ್ತು ಎಂದು ಚಾರ್ಜ್​​ಶೀಟ್​​ನಲ್ಲಿ ಇಡಿ ತಿಳಿಸಿದೆ.

Loading...

ಇದನ್ನೂ ಓದಿ: 3 OMR ಶೀಟ್, ಎಲೆಕ್ಷನ್ ಮಾದರಿಯಲ್ಲಿ ಭದ್ರತೆ: ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಯ ಹಾಜರಾತಿ ವಿವರ ಪ್ರಕಟ

ಶಿವಶಂಕರಪ್ಪ ಸಾಹುಕಾರ್ 4.17 ಕೋಟಿ, ಜ್ಞಾನೇಂದ್ರ ಕುಮಾರ್ 1.52 ಕೋಟಿ, ಬಸವರಾಜ್ ಕನ್ನಾಳೆ 1.52 ಕೋಟಿ ಮತ್ತು ಗೀತಾ 1.18 ಕೋಟಿ ಹಣವನ್ನು ಅಕ್ರಮ ಹಣಸಂಪಾದನೆ ಮಾಡಿರುವುದು ಪತ್ತೆಯಾಗಿದೆ. ನಾಲ್ವರು ಪ್ರಮುಖ ಆರೋಪಿಗಳ ಬಂಧನವಾಗಿದ್ದು, 1.22 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಕೆಪಿಎಸ್​ಸಿ ಸದಸ್ಯೆ ಗೀತಾ ಶಿವಮೂರ್ತಿ, ಪುತ್ರಿ ಹೆಸರಲ್ಲಿ ಪ್ರಾಪರ್ಟಿ ಪತ್ತೆಯಾಗಿದೆ. ರಿಯಲ್ ಎಸ್ಟೇಟ್, ಶಹಾಪುರದಲ್ಲಿ ಶಾಲೆ, ಕನ್ವೆನ್ಷನ್ ಹಾಲ್ ನಿರ್ಮಾಣದ ಬಗ್ಗೆಯೂ ಗೊತ್ತಾಗಿದೆ. ಜ್ಞಾನೇಂದ್ರ ಕೂಡ ಸ್ನೇಹಿತರ ಹೆಸರಿನಲ್ಲಿ 52.30 ಲಕ್ಷ ಮೌಲ್ಯದ ಚಿನ್ನ-ವಜ್ರ ಖರೀದಿಸಿದ್ದಾರೆ ಎಂದು ಇಡಿ ತಿಳಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಚಾರ್ಜ್​​ಶೀಟ್​​ನಲ್ಲಿ ಉಲ್ಲೇಖಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:00 pm, Mon, 16 November 26

ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
Loading...
Unable to load recommendations.
Follow Us