AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ-ಬಿಟಿ ಸೇರಿದಂತೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಆಗ್ರಹ: ಡಿ.12ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರವೇ ನಿರ್ಧಾರ

ಕರವೇ ಬೆಂಗಳೂರು ಐಟಿ-ಬಿಟಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಜಾರಿಗೆ ತರಲು ಡಿ.12ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ಸಿದ್ಧವಾಗಿದೆ. 800ಕ್ಕೂ ಹೆಚ್ಚು ಐಟಿ ಸಂಸ್ಥೆಗಳಿಂದ ಸಂಗ್ರಹಿಸಿದ ಮಾಹಿತಿ ಪ್ರಕಾರ ಕೇವಲ 10-18% ಮಾತ್ರ ಕನ್ನಡಿಗರಿಗೆ ಉದ್ಯೋಗವಿದೆ. ಸರ್ಕಾರ ಮರೆತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕರವೇ, ಡಿ.12ಕ್ಕೆ ಬೃಹತ್ ರ್ಯಾಲಿಗೆ ಕರೆ ನೀಡಿದೆ. ಕಾಯ್ದೆ ಜಾರಿಯಾಗುವವರೆಗೂ ಹೋರಾಟ ನಿಲ್ಲದು ಎಂದಿದೆ.

ಐಟಿ-ಬಿಟಿ ಸೇರಿದಂತೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಆಗ್ರಹ: ಡಿ.12ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರವೇ ನಿರ್ಧಾರ
ಸಾಂದರ್ಭಿಕ ಚಿತ್ರ
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Nov 25, 2026 | 6:49 PM

Share

ಬೆಂಗಳೂರು, ನ.25: ರಾಜಧಾನಿಯಲ್ಲಿ ಐಟಿ-ಬಿಟಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಿರ್ಣಾಯಕ ಮತ್ತು ಅನಿರ್ದಿಷ್ಟಾವಧಿ ಹೋರಾಟಕ್ಕೆ ಸಜ್ಜಾಗಿದೆ. ಡಿಸೆಂಬರ್ 12ರಿಂದ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಘೋಷಿಸಿದ್ದಾರೆ. ಬೆಂಗಳೂರಿನ ಗಾಂಧಿನಗರದ ಜಯಾನ್ ಹೋಟೆಲ್‌ನಲ್ಲಿ ಇಂದು (ನವೆಂಬರ್ 25) ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ಪೂರ್ವಭಾವಿ ಸಭೆ ನಡೆಯಿತು.

800ಕ್ಕೂ ಹೆಚ್ಚು ಐಟಿ ಸಂಸ್ಥೆಗಳಿಂದ ಮಾಹಿತಿ ಸಂಗ್ರಹ:

ಸಭೆಯ ಬಳಿಕ ಮಾತನಾಡಿದ ನಾರಾಯಣ ಗೌಡ, “ನಮ್ಮ ಪ್ರತಿಜ್ಞೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ನವೆಂಬರ್ 2ರಿಂದ ನಮ್ಮ 10 ತಂಡಗಳು ಸುಮಾರು 800ಕ್ಕೂ ಹೆಚ್ಚು ಐಟಿ ಉದ್ಯಮಗಳಿಗೆ ತೆರಳಿ ಒಟ್ಟು ಉದ್ಯೋಗಗಳು, ಅದರಲ್ಲಿ ಕನ್ನಡಿಗರ ಸಂಖ್ಯೆ ಹಾಗೂ ವಿವಿಧ ಹಂತಗಳಲ್ಲಿ ಎಷ್ಟು ಕನ್ನಡಿಗರಿದ್ದಾರೆ ಎಂಬುದರ ಲೆಕ್ಕ ಕೇಳುವ ಆಂದೋಲನ ಆರಂಭಿಸಿವೆ. ನಾನೂ ಹಲವು ಐಟಿ ಪಾರ್ಕ್‌ಗಳಿಗೆ ಭೇಟಿ ನೀಡಿ 40–50 ಕಂಪನಿಗಳ ಮಾನವ ಸಂಪನ್ಮೂಲ ಅಧಿಕಾರಿಗಳೊಂದಿಗೆ ಗಂಟೆಗಟ್ಟಲೆ ಚರ್ಚಿಸಿದ್ದೇನೆ” ಎಂದು ವಿವರಿಸಿದರು.

ಇದನ್ನು ಸರ್ಕಾರ ಮಾಡಬೇಕಿತ್ತು; ಆದರೆ ಸರ್ಕಾರ ಮರೆತು ಕುಳಿತಿದೆ. ಅಂಕಿಅಂಶ ಸಂಗ್ರಹಿಸಲು ಕಾರ್ಮಿಕ ಇಲಾಖೆ ಪತ್ರ ಬರೆದು ಅನುಮತಿ ಕೇಳಿದರೂ ಸರ್ಕಾರ ನೀಡಿಲ್ಲ. ಕಂಪನಿಗಳಿಗೆ ಭೇಟಿ ನೀಡಿದಾಗ ಕೇವಲ ಶೇ. 10ರಿಂದ 18ರಷ್ಟು ಮಾತ್ರ ಕನ್ನಡಿಗರಿಗೆ ಉದ್ಯೋಗ ಇರುವುದು ಗಮನಕ್ಕೆ ಬಂದಿದೆ. ಬೇರೆ ರಾಜ್ಯಗಳಲ್ಲಿ ಸ್ಥಳೀಯರಿಗೆ ಶೇ. 80ರಷ್ಟು ಅವಕಾಶವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಐಟಿ ಕಂಪನಿಗಳು ಮಾಹಿತಿ ನೀಡದೆ ಇದ್ದರೆ ಅಥವಾ ನಮ್ಮ ಚಳುವಳಿ ವಿರುದ್ಧ ನಿಂತರೆ ಅಲ್ಲಿಯೇ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಇ.ಡಿ ಬೆನ್ನಲ್ಲೇ ಎಸ್​​ಐಟಿಯಿಂದಲೂ ಚಾರ್ಜ್​​ಶೀಟ್​​ ಸಲ್ಲಿಕೆ

ಡಿ.11ಕ್ಕೆ ಬೆಳಗಾವಿ ಅಧಿವೇಶನ ಅಂತ್ಯ – ಡಿ.12ಕ್ಕೆ ಬೃಹತ್ ರ್ಯಾಲಿ; ಮೋಹನ್‌ದಾಸ್ ಪೈಗೆ ತಿರುಗೇಟು:

ಡಿಸೆಂಬರ್ 11ಕ್ಕೆ ಬೆಳಗಾವಿ ಅಧಿವೇಶನ ಮುಗಿಯಲಿದ್ದು, ಡಿಸೆಂಬರ್ 12ರಂದು ನ್ಯಾಷನಲ್ ಕಾಲೇಜ್ ಮೈದಾನದಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ರ್ಯಾಲಿ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳಿಂದ ಬಸ್, ರೈಲುಗಳ ಮೂಲಕ ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಲಿದ್ದು, ಪ್ರತಿ ಜಿಲ್ಲೆಯಿಂದ ಸುಮಾರು 30,000 ಕಾರ್ಯಕರ್ತರು ಮತ್ತು ಬೆಂಗಳೂರು ವಿಧಾನಸಭಾ ಕ್ಷೇತ್ರಗಳಿಂದ 20–25 ಸಾವಿರ ಜನರನ್ನು ರ್ಯಾಲಿಗೆ ಸೇರಿಸಲು ನಿರ್ಧರಿಸಲಾಗಿದೆ. ಕಾಯ್ದೆ ಜಾರಿಯಾಗುವವರೆಗೂ ಹೋರಾಟ ನಿಲ್ಲದು ಎಂದು ತಿಳಿಸಿದರು. ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರೆ “ನೂರು ಮೋಹನ್‌ದಾಸ್ ಪೈ ಬಂದರೂ ಏನೂ ಮಾಡಲಾಗಲ್ಲ, ರಾಜ್ಯ ಬಿಟ್ಟು ಹೋಗಲ್ಲ ಅವರು” ಎಂದು ನಾರಾಯಣ ಗೌಡ ಖಡಕ್ ತಿರುಗೇಟು ನೀಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'