ಸಚಿವ ಕೃಷ್ಣಬೈರೇಗೌಡರ ಸಭೆಯಲ್ಲಿ ಏನೆಲ್ಲಾ ನಿರ್ಧಾರವಾಯ್ತು? ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಿಷ್ಟು

ಬೆಂಗಳೂರಿನಲ್ಲಿ ಒಂದು ಕಡೆ ಫುಟ್‌ಪಾತ್​ ತೆರವು ಕಾರ್ಯಾಚರಣೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆ ಸಚಿವ ಕೃಷ್ಣಬೈರೇಗೌಡ ಬೀದಿಬದಿ ವ್ಯಾಪಾರಿಗಳು ಹಾಗೂ ಸಂಘಟನೆಗಳ ಜೊತೆ ಸಭೆ ಮಾಡಿದರು. ಈ ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಮತ್ತು ಒಪ್ಪಿಗೆ ಕುರಿತಾಗಿ ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ ಮಾಹಿತಿ ನೀಡಿದ್ದಾರೆ.

ಸಚಿವ ಕೃಷ್ಣಬೈರೇಗೌಡರ ಸಭೆಯಲ್ಲಿ ಏನೆಲ್ಲಾ ನಿರ್ಧಾರವಾಯ್ತು? ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದಿಷ್ಟು
ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ
Image Credit source: tv9 kannada

Updated on: Jul 09, 2026 | 8:06 PM

ಬೆಂಗಳೂರು, ಜುಲೈ 09: ರಾಜ್ಯ ಬೀದಿಬದಿ ವ್ಯಾಪಾರಿಗಳ ಒಕ್ಕೂಟಗಳಿಂದ ಬುಧವಾರ ಫುಟ್‌ಪಾತ್​ ತೆರವು (Footpath Eviction Drive) ವಿರೋಧಿಸಿ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟಿಸುವ ಮೂಲಕ ನಮ್ಮ ವ್ಯಾಪಾರಕ್ಕೆ ಸೂಕ್ತ ಸ್ಥಳ ಒದಗಿಸುವಂತೆ ಹಕ್ಕೊತ್ತಾಯ ಮಂಡಿಸಿದರು. ಈ ಬೆನ್ನಲ್ಲೇ ಇಂದು ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಮುಖಂಡರ ಜೊತೆ ಸಚಿವ ಕೃಷ್ಣಬೈರೇಗೌಡ (Krishna Byre Gowda) ಮಹತ್ವದ ಸಭೆ ಮಾಡಿದರು. ಈ ಬಗ್ಗೆ ಮಾತನಾಡಿದ ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ, ತೆರವು ಕಾರ್ಯಾಚರಣೆಗೆ ನಮ್ಮ ಸಂಪೂರ್ಣ ಸಹಮತ ಇದೆ ಎಂದು ಹೇಳಿದ್ದಾರೆ.

ಆಂತರಿಕ ರಸ್ತೆಯಲ್ಲಿ ವ್ಯಾಪಾರ ಮಾಡಲು ಯಾವುದೇ ವಿರೋಧವಿಲ್ಲ: ರಂಗಸ್ವಾಮಿ

ಸಚಿವ ಕೃಷ್ಣಬೈರೇಗೌಡರೊಂದಿಗಿನ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ, ‘‘ಇಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಸಭೆ ಕರೆದಿದ್ದರು. ಸಭೆಯಲ್ಲಿ ನಮ್ಮ ಕಷ್ಟ, ಗೊಂದಲಗಳಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪ್ರಮುಖ ರಸ್ತೆಯನ್ನು ಹೊರತು ಪಡಿಸಿ ಆಂತರಿಕ ರಸ್ತೆಯಲ್ಲಿ ವ್ಯಾಪಾರ ಮಾಡಲು ಯಾವುದೇ ರೀತಿಯ ವಿರೋಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ’’ ಎಂದರು.

ಇದನ್ನೂ ಓದಿ: ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಸಚಿವ ಕೃಷ್ಣಬೈರೇಗೌಡ ಸುಳಿವು

‘‘ಅಷ್ಟೇ ಅಲ್ಲದೆ ಆದಷ್ಟು ಬೇಗ ವೆಂಡಿಂಗ್ ಜೋನ್​ಗಳ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಹೇಳಿದ್ದಾರೆ. ಹಾಗಾಗಿ ಸಚಿವ ಕೃಷ್ಣಬೈರೇಗೌಡರ ತೆರವು ಕಾರ್ಯಾಚರಣೆಗೆ ನಮ್ಮ ಸಂಪೂರ್ಣ ಸಹಮತ ಇದೆ’’ ಎಂದು ರಂಗಸ್ವಾಮಿ ಹೇಳಿದ್ದಾರೆ.

ಜಾಗ ಇದ್ರೆ ಅಂಗಡಿ ಮಾಡಿಕೊಡುವುದಾಗಿ ಸಿಎಂ ಭರವಸೆ!

ಇನ್ನು ಕೃಷ್ಣಬೈರೇಗೌಡರೊಂದಿಗಿನ ಸಭೆಗೂ ಮುಂಚೆ ಸಿಎಂ ಡಿಕೆ ಶಿವಕುಮಾರ್​​​ ಭೇಟಿ ಮಾಡಿ ಅಧ್ಯಕ್ಷ ರಂಗಸ್ವಾಮಿ ಮಾತನಾಡಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ‘‘ಇಂದು ಬೆಳಿಗ್ಗೆ ಸಿಎಂ ಡಿಕೆ ಶಿವಕುಮಾರ್​​ರನ್ನು ಸಹ ಭೇಟಿ ಮಾಡಿ ಅವರ ಜೊತೆಗೆ ಮಾತಾಡಿದ್ದೇನೆ. ಬೀದಿಬದಿ ವ್ಯಾಪಾರಸ್ತರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತೆ. ಗುರುತು ಮಾಡಿದ ಜಾಗದಲ್ಲಿ ವ್ಯಾಪಾರ ಮಾಡುವಂತೆ ಸೂಚಿಸಿದ್ದಾರೆ. ಜಾಗ ಇದ್ದರೆ ಅಂಗಡಿ ಮಾಡಿ ಕೊಡುವುದಾಗಿ ಸಿಎಂ ತಿಳಿಸಿದ್ದಾರೆ’’ ಎಂದರು.

ವರದಿ: ಅರುಣ್​ ಕುಮಾರ್​ ಮೆಟ್ರೋ

Krishna Byregowda ಜೊತೆಗಿನ ಸಭೆ ಬಳಿಕ ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ರಂಗಸ್ವಾಮಿ ಹೇಳಿದ್ದೇನು?| #TV9D

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us