ಕೃಷ್ಣಭೈರೇಗೌಡ ಟ್ವೀಟ್​ಗೆ ಸ್ಪಂದನೆ: ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಆರಂಭ, ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​​

ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಸಚಿವ ಕೃಷ್ಣಭೈರೇಗೌಡ ಅವರ ಟ್ವೀಟ್​ಗೆ ಸ್ಪಂದಿಸಿರುವ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವೀರಣ್ಣಪಾಳ್ಯದಿಂದ ಹೆಬ್ಬಾಳ ವೃತ್ತದ ಕಡೆಗಿನ ರಿಂಗ್​​​ ರೋಡಿನ ಸರ್ವಿಸ್ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಿದೆ.

ಕೃಷ್ಣಭೈರೇಗೌಡ ಟ್ವೀಟ್​ಗೆ ಸ್ಪಂದನೆ: ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಆರಂಭ, ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​​
ಕೃಷ್ಣಭೈರೇಗೌಡ, ರಸ್ತೆ ಗುಂಡಿ ಮುಚ್ಚುವ ಕಾಮಗಾರಿ
Follow us
|

Updated on:Aug 18, 2024 | 8:23 AM

ಬೆಂಗಳೂರು, ಆಗಸ್ಟ್​​ 18: ಮಳೆಗಾಲ (Monsoon) ಆರಂಭವಾದರೆ ಸಾಕು ಬೆಂಗಳೂರಿನ (Bengaluru) ರಸ್ತೆಗಳಲ್ಲಿನ ಗುಂಡಿಗಳು (Potholes) ಬಾಯಿ ತೆರೆದುಕೊಳ್ಳುತ್ತವೆ. ಈ ಗುಂಡಿಗಳಿಗೆ ಬಿದ್ದು ಅದೆಷ್ಟೊ ಜನರು ಗಾಯಗೊಂಡಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಸ್ವತಃ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅವರು ಟ್ವೀಟ್​ ಮಾಡಿದ್ದರು. ಇದು ರಾಜ್ಯದ ಅಭಿವೃದ್ಧಿ ವಿಷಯದಲ್ಲಿ, ರಸ್ತೆ ದುರಸ್ತಿಗೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರದ ಸಚಿವರೇ ಅಸಹಾಯಕರಾಗಿದ್ದಾರೆಯೇ? ಎಂಬ ಪ್ರಶ್ನೆ ಉದ್ಭವಾಗುವಂತೆ ಮಾಡಿತ್ತು. ಇದೀಗ ಸಚಿವರ ಟ್ವೀಟ್​​ಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಸ್ಪಂದಿಸಿದೆ. ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ.

ಕೃಷ್ಣಭರೇಗೌಡ ಟ್ವೀಟ್​ಗೆ ಸ್ಪಂದನೆ

ವೀರಣ್ಣಪಾಳ್ಯದಿಂದ ಹೆಬ್ಬಾಳ ವೃತ್ತದ ಕಡೆಗಿನ ರಿಂಗ್​​​ ರೋಡಿನ ಸರ್ವಿಸ್ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ. ರವಿವಾರ 18 ರಿಂದ ಬುಧವಾರ 21ರವರೆಗೆ ಬಿಬಿಎಂಪಿ ರಸ್ತೆ ಗುಂಡಿಗಳನ್ನು ಮುಚ್ಚಲಿದೆ. ಹೀಗಾಗಿ ರಾತ್ರಿ 10.00 ಗಂಟೆಯಿಂದ ಮುಂಜಾನೆ 06.00 ಗಂಟೆಯ ವರೆಗೆ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಲಾಗಿದೆ.

ಇದನ್ನೂ ಓದಿ: ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ

ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳದ ಕಡೆಗೆ ಸಂಚರಿಸುವ ವಾಹನ ಸವಾರರು ಹೊರ ವರ್ತುಲ ರಸ್ತೆಯ ಮುಖ್ಯ ಪಥವನ್ನೇ ಪರ್ಯಾಯ ರಸ್ತೆಯನ್ನಾಗಿ ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸ್​ ಸೂಚಿಸಿದೆ.

ಕೃಷ್ಣಭರೇಗೌಡ ಟ್ವೀಟ್​

ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್​​ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಕೃಷ್ಣಭೈರೇಗೌಡ ಟ್ವೀಟ್​​​ನಲ್ಲಿ ಉಲ್ಲೇಖಿಸಿದ್ದರು.

ಒಂದಿದೆ ಡಿಕೆ ಶಿವಕುಮಾರ್ ಬ್ರ್ಯಾಂಡ್​​​ ಬೆಂಗಳೂರು ಎಂದು ಭಾಷಣ ಮಾಡುತ್ತಿದ್ದರೆ, ಇತ್ತ ಅವರದ್ದೇ ಸರ್ಕಾರದ ಸಚಿವರು ನೇರವಾಗಿ ಬೆಂಗಳೂರಿನ ರಸ್ತೆ ಸಮಸ್ಯೆ ಬಗ್ಗೆ ಹೇಳಿಕೊಳ್ಳಲಾಗದೆ ಈ ರೀತಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಕಟಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Sun, 18 August 24