ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು
ಕೃಷ್ಣ ಜನ್ಮಾಷ್ಟಮಿ ಹಬ್ಬದ ನಿಮಿತ್ತ ಬೆಂಗಳೂರಿನ ಇಸ್ಕಾನ್ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬರುತ್ತಿದ್ದಾರೆ. ಇದರಿಂದ ಸಂಚಾರ ದಟ್ಟಣೆಯನ್ನು ತಪ್ಪಿಸಲು ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಭಕ್ತರು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು, ಆಗಸ್ಟ್ 15: ಶ್ರೀ ಕೃಷ್ಣ ಜನ್ಮಾಷ್ಟಮಿ (Krishna Janmashtami) ಹಬ್ಬದ ಪ್ರಯುಕ್ತ ಶುಕ್ರವಾರ ಮತ್ತು ಶನಿವಾರ (ಆ.15, 16) ರಂದು ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ (Iskcon Temple) ಲಕ್ಷಾಂತರ ಭಕ್ತರು, ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ ದೇವಸ್ಥಾನದ ಅಕ್ಕಪಕ್ಕದ ರಸ್ತೆಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರದಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಉತ್ತರ, ಉಪ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಸಂಚಾರ ಮಾರ್ಗ ಬದಲಾವಣೆ
- ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಪ್ಯಾಕ್ಷರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿಲೇಔಟ್ ಮಹಾಲಕ್ಷ್ಮಿಲೇಔಟ್ ಕಡೆ ಹೋಗುವಂತಹ ವಾಹನಗಳು ಸೋಪ್ ಪ್ಯಾಕ್ಷರಿ ಜಂಕ್ಷನ್‌ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್‌ನಲ್ಲಿ ಅಥವಾ ಕೇತಮಾರನಹಳ್ಳಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 1ನೇ ಬ್ಲಾಕ್ ರಾಜಾಜಿನಗರ ಸಿಗ್ನಲ್‌ನಲ್ಲಿ ಕಾರ್ಡ್ ರಸ್ತೆಗೆ ತಲುಪಬೇಕು.
- ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಪ್ಯಾಕ್ಷರಿ ಜಂಕ್ಷನ್‌ನಿಂದ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದವರೆಗೆ ಪಿಕ್ ಆಫ್ ಮತ್ತು ಡ್ರಾಪ್ ಮಾಡುವುದನ್ನು ನಿಷೇಧಿಸಲಾಗಿದೆ.
- ಇಸ್ಕಾನ್ ದೇವಸ್ಥಾನಕ್ಕೆ ಸಾರ್ವಜನಿಕರನ್ನು ಕರೆತರುವ ಆಟೋ, ಕ್ಯಾಬ್ ಚಾಲಕರು ಮಹಾಲಕ್ಕಿ ಮೆಟ್ರೋ ಸಮೀಪ ಅಥವಾ ಸೋಪ್ ಪ್ಯಾಕ್ಟರಿ ಸಮೀಪ ಪಿಕ್ ಅಪ್ ಮತ್ತು ಡ್ರಾಪ್ ಮಾಡಬಹುದಾಗಿದೆ.
- ಇಸ್ಕಾನ್ ದೇವಸ್ಥಾನಕ್ಕೆ ಸ್ವಂತ ವಾಹನದಲ್ಲಿ ಬರುವ ಭಕ್ತಾಧಿಗಳು ಮಹಾಲಕ್ಷ್ಮಿ ಮೆಟ್ರೋದಿಂದ ಸೋಪ್ ಪ್ಯಾಕ್ಷರಿ ಕಡೆಗೆ ಹೋಗುವ ರಸ್ತೆಯಲ್ಲಿ ಪಿಕ್ ಅಪ್ ಮತ್ತು ಡ್ರಾಪ್ ಮಾಡಬಹುದಾಗಿದೆ.
- ತುಮಕೂರು ರಸ್ತೆ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್‌ಗಳು ಯಶವಂತಪುರ ಸರ್ಕಲ್ ಮಾರಮ್ಮ ಮಾರ್ಗೋಸಾ ರಸ್ತೆ- ಕೆ.ಸಿ.ಜಿ.ಸಿಗ್ನಲ್ ಮಾರ್ಗವಾಗಿ ಲಿಂಕ್ ರಸ್ತೆ ಮುಖಾಂತರ ತೆರಳಬೇಕು.
ಟ್ವಿಟರ್ ಪೋಸ್ಟ್
ಸಂಚಾರ ಸಲಹಾ ನಕ್ಷೆ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ಟೆಂಪಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದಿನಾಂಕ 15 .08 2025 ಮತ್ತು 16. 08. 2025 ರಂದು ಸದರಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಇರುವುದರಿಂದ ಸಾರ್ವಜನಿಕರು ಸಹಕರಿಸಲು ಕೋರಿದೆ. pic.twitter.com/qs9J440m2w
— Assistant Commissioner of Police (@AcptrnorthBTP) August 15, 2025
ಇದನ್ನೂ ಓದಿ: ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲೇ ಶ್ಲೋಕ
ಸೂಚನೆಗಳು
- ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಸಾರ್ವಜನಿಕ ಸಂಪರ್ಕ ಸಾರಿಗೆ ಬಸ್ಗಳನ್ನು ಬಳಸಿ.
- ದೇವಸ್ಥಾನದ ವತಿಯಿಂದ ಪಾಸ್‌ಗಳನ್ನು ವಿತರಿಸಿದ್ದು, ಅಂತಹವರುಗಳು ನಿಗಧಿ ಪಡಿಸಿರುವ ಸ್ಥಳಗಳಲ್ಲಿ ವಾಹನವನ್ನು ನಿಲ್ಲಿಸಿ.
- ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಾಧ್ಯವಾದಷ್ಟು ಸಂಜೆ 5-00 ಗಂಟೆಯೊಳಗೆ ದೇವರ ದರ್ಶನ ಪಡೆಯಿರಿ.
- ಹಿರಿಯ ನಾಗರೀಕರು ಮತ್ತು ಮಕ್ಕಳನ್ನು ಮಧ್ಯಾಹ್ನ 12-00 ಗಂಟೆಯೊಳಗೆ ದರ್ಶನ ಮಾಡಿಸಿಕೊಂಡು ಸುರಕ್ಷಿತವಾಗಿ ಮನೆಗೆ ತೆರಳಲು ಕೋರಿದೆ.
- ದೇವರ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಆಭರಣ ಮತ್ತು ಬೆಲೆ ಬಾಳುವ ವಸ್ತುಗಳೊಂದಿಗೆ ಬರುವುದನ್ನು ತಪ್ಪಿಸುವುದು.
- ಸಾರ್ವಜನಿಕರು ದೇವರ ದರ್ಶನ ಮುಗಿದ ನಂತರ ದೇವಸ್ಥಾನದ ಆವರಣದಲ್ಲಿ ಸೆಲ್ಲಿ, ಫೋಟೋ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿ ಇತರರಿಗೆ ಅಡ್ಡಿಪಡಿಸದಂತೆ ಶೀಘ್ರವಾಗಿ ದೇವಸ್ಥಾನದ ಆವರಣದಿಂದ ನಿರ್ಗಮಿಸುವಂತೆ ಮನವಿ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:57 pm, Fri, 15 August 25




