ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆದೇಶ ಸೆಪ್ಟೆಂಬರ್ 4ರಂದು ಒಂದು ದಿನದ ಮಟ್ಟಿಗೆ ಮಾತ್ರ ಸೀಮಿತವಾಗಿರಲಿದ್ದು, ನಿಯಮ ಉಲ್ಲಂಘಿಸುವ ಮಾಂಸ ಮಾರಾಟಗಾರರ ವಿರುದ್ಧ ಜಿಬಿಎ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ
ಸಾಂದರ್ಭಿಕ ಚಿತ್ರ
Image Credit source: PTI

Updated on: Sep 03, 2026 | 11:31 AM

ಮುಖ್ಯಾಂಶಗಳು

  • ಸೆ.​​ 4ರಂದು ಪ್ರಾಣಿ ವಧೆ, ಮಾಂಸ ಮಾರಾಟ ಬಂದ್​
  • ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆ ಜಿಬಿಎ ಆದೇಶ
  • ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಆದೇಶ ಅನ್ವಯ

ಬೆಂಗಳೂರು, ಸೆಪ್ಟೆಂಬರ್​​ 03: ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್​​ 4ರಂದು (ಶುಕ್ರವಾರ) ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪ ನಿರ್ದೇಶಕ (ಪಶುಪಾಲನೆ) ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಹಾಗೂ ಮಾಂಸದ ಅಂಗಡಿ ಮಾಲೀಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಜಿಬಿಎ ಆದೇಶದಲ್ಲಿ ಏನಿದೆ?


ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರದೇಶ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಆದೇಶ ಸೆಪ್ಟೆಂಬರ್ 4ರಂದು ಒಂದು ದಿನದ ಮಟ್ಟಿಗೆ ಮಾತ್ರ ಸೀಮಿತವಾಗಿರಲಿದ್ದು, ನಿಯಮ ಉಲ್ಲಂಘಿಸುವ ಮಾಂಸ ಮಾರಾಟಗಾರರ ವಿರುದ್ಧ ಜಿಬಿಎ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದು, ನಾಳೆ 2 ದಿನ ಚಿಕನ್ ಅಂಗಡಿಗಳು ಬಂದ್; ತ್ಯಾಜ್ಯ ಶುಲ್ಕದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಖ್ಯವಾದ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ಹಬ್ಬಗಳು ಮತ್ತು ಅಹಿಂಸೆಯನ್ನು ಬೋಧಿಸಿದ ಮಹಾಪುರುಷರ ಜಯಂತಿಗಳ ದಿನದಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ಸಂಪೂರ್ಣವಾಗಿ ನಿಷೇಧ ವಿಧಿಸುವುದು ಈ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಅದರಂತೆ ಈ ಬಾರಿಯೂ ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ನಗರದಲ್ಲಿ ಮಾಂಸ ಮಾರಾಟಕ್ಕೆ ಜಿಬಿಎ ಬ್ರೇಕ್​​ ಹಾಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us