KRS ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್
ಕೆಆರ್ಎಸ್(KRS) ಬಳಿ ಗಣಿಗಾರಿಕೆಗೆ ಅನುಮತಿ(Mining Permission) ಕೋರಿದ್ದ ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್(High Court) ಮುಖ್ಯ ನ್ಯಾಯಾಧೀಶರಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.
ಬೆಂಗಳೂರು, ಡಿ.13: ಕೆಆರ್ಎಸ್(KRS) ಬಳಿ ಗಣಿಗಾರಿಕೆಗೆ ಅನುಮತಿ(Mining Permission) ಕೋರಿದ್ದ ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್(High Court) ಮುಖ್ಯ ನ್ಯಾಯಾಧೀಶರಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.
ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನೂ ಪರಿಗಣಿಸಬೇಕಾಗಿದೆ. ಕೆಆರ್ಎಸ್ ಪ್ರಮುಖ ಜಲಾಶಯವಾಗಿದ್ದು, ಸೂಕ್ಷ್ಮ ವಿಷಯವಾಗಿದೆ. ಜೊತೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ ಸೇರಿ ಎಲ್ಲಾ ಅಂಶಗಳನ್ನು ಪರಿಶೀಲಿಸದೇ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ಸಾಧ್ಯವಿಲ್ಲ. ಈ ವಿಚಾರಣೆಯನ್ನು ಹೈಕೋರ್ಟ್ ಜನವರಿ 2ನೇ ವಾರಕ್ಕೆ ಮುಂದೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:23 pm, Wed, 13 December 23