ಬೆಂಗಳೂರನ್ನು ರಿಪೇರಿ ಮಾಡಲು ವಿಶ್ವಸಂಸ್ಥೆ ಬಂದ್ರೂ ಆಗಲ್ಲ: ವಿಧಾನ ಪರಿಷತ್​ನಲ್ಲಿ ಕೆಎಸ್ ಈಶ್ವರಪ್ಪ ಉತ್ತರ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧರಿದ್ದೇವೆ. ಸೀಮಾ ನಿರ್ಣಯ ಸಮಿತಿ ವರದಿ ಬಳಿಕ ನಿರ್ಧಾರ ಮಾಡುತ್ತೇವೆ. ವರದಿ ಬರುವವರೆಗೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಈ ವೇಳೆ, ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಬೆಂಗಳೂರನ್ನು ರಿಪೇರಿ ಮಾಡಲು ವಿಶ್ವಸಂಸ್ಥೆ ಬಂದ್ರೂ ಆಗಲ್ಲ: ವಿಧಾನ ಪರಿಷತ್​ನಲ್ಲಿ ಕೆಎಸ್ ಈಶ್ವರಪ್ಪ ಉತ್ತರ
ಸಚಿವ ಕೆ.ಎಸ್.ಈಶ್ವರಪ್ಪ
Follow us
TV9 Web
| Updated By: ganapathi bhat

Updated on: Mar 11, 2022 | 12:15 PM

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ರಿಪೇರಿ ಮಾಡಲು ವಿಶ್ವಸಂಸ್ಥೆ ಬಂದ್ರೂ ಆಗಲ್ಲ. ಬೆಂಗಳೂರಿನಲ್ಲಿ ಎಲ್ಲೆಲ್ಲೋ ಮನೆ ನಿರ್ಮಾಣ ಆಗಿದೆ. ಬೆಂಗಳೂರು ರಿಪೇರಿಗೆ ಸಂಪುಟ ಉಪ ಸಮಿತಿ ರಚಿಸಿದ್ದೇವೆ. ಅರಣ್ಯ ಇಲಾಖೆ ಜತೆ ಚರ್ಚಿಸಿ ಜನರಿಗೆ ಅನುಕೂಲ ಮಾಡ್ತೇವೆ. ಕೊಳಚೆ ನೀರು ಕೆರೆಗಳಿಗೆ ಹೋಗದಂತೆ ಕ್ರಮ ಕೈಗೊಳ್ತೇವೆ. 554 ಕೆರೆ ಅಭಿವೃದ್ಧಿಗೆ ಯೋಜನಾ ವರದಿ ರೆಡಿ ಮಾಡ್ತಿದ್ದೇವೆ ಎಂದು ವಿಧಾನಪರಿಷತ್​ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಉತ್ತರ ನೀಡಿದ್ದಾರೆ. ಎಂಎಲ್​ಸಿ ಪಿ.ಆರ್. ರಮೇಶ್ ಪ್ರಶ್ನೆಗೆ ಸಚಿವ ಈಶ್ವರಪ್ಪ ಉತ್ತರಿಸಿದ್ದಾರೆ.

ವಿಧಾನ ಪರಿಷತ್ ಕಲಾಪ ಇಂದು (ಮಾರ್ಚ್ 11) ನಡೆಯುತ್ತಿದೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ನಾವು ಸಿದ್ಧರಿದ್ದೇವೆ. ಸೀಮಾ ನಿರ್ಣಯ ಸಮಿತಿ ವರದಿ ಬಳಿಕ ನಿರ್ಧಾರ ಮಾಡುತ್ತೇವೆ. ವರದಿ ಬರುವವರೆಗೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಈ ವೇಳೆ, ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

OBC ಮೀಸಲಾತಿ ಸದ್ಯಕ್ಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. SC, ST, ಜನರಲ್ ಕೆಟಗರಿ ಇಟ್ಟುಕೊಂಡು ಚುನಾವಣೆ ಮಾಡುವಂತೆ ಸುಪ್ರೀಂಕೋರ್ಟ್ ಹೇಳಿದೆ. 2010 ರಿಂದ ಇದನ್ನು ಯಾರು ನೋಡಿಕೊಂಡು ಬಂದಿಲ್ಲ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆಯಾಗಿದ್ದು, ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಯುತ್ತಿದೆ. ಆದಷ್ಟು ಬೇಗ ಒಬಿಸಿಗಳಿಗೂ ಅವಕಾಶ ನೀಡಿ ಚುನಾವಣೆ ಮಾಡುವುದಕ್ಕೆ ಯತ್ನಿಸುತ್ತೇವೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳು STಗೆ ಹೋಗಬೇಕೆಂದು ಕಾಯುತ್ತಿವೆ. ಹೀಗಾಗಿ ಕಾಂತರಾಜು ವರದಿ ಸ್ವೀಕರಿಸಿ ಎಂದು ಹರಿಪ್ರಸಾದ್ ಹೇಳಿದ್ದಾರೆ. ಹಾಗೇನಾದರೂ ಆದರೆ ನಿಮ್ಮ ಬಾಯಿಗೆ ಸಕ್ಕರೆ ಹಾಕುತ್ತೇನೆ ಎಂದು ಹೇಳಿದ್ದಾರೆ. ಅದಕ್ಕೆ, ಸಕ್ಕರೆ ಬೇಡ ಚಿಕನ್ ಹಾಕುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕಾಂತರಾಜು ವರದಿ ಸ್ವೀಕರಿಸದೆ ಮೋಸ ಮಾಡಿದರು. ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಮೋಸ ಮಾಡಿದರು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪ ಮಾಡಿದ್ದಾರೆ. ಕಾಂತರಾಜು ವರದಿ ಮಾಹಿತಿ ಬಗ್ಗೆ ನಾವು ಪರಿಶೀಲಿಸುತ್ತೇವೆ. ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿ ಚುನಾವಣೆ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಅಲೆಮಾರಿ ಜನಾಂಗಕ್ಕೆ ಗುರುತಿಸಿದ ಜಾಗದಲ್ಲಿ ನಿವೇಶನಗಳನ್ನು ನೀಡುತ್ತಿಲ್ಲ

ರಾಜ್ಯದಲ್ಲಿ 51 ಎಸ್‌ಸಿ ಸಮುದಾಯ, 23 ಎಸ್‌ಟಿ ಸಮುದಾಯದ ಅಲೆಮಾರಿ ಜನಾಂಗದವರು ಇದ್ದಾರೆ. ಈ ಜನಾಂಗಕ್ಕೆ ಗುರುತಿಸಿದ ಜಾಗದಲ್ಲಿ ನಿವೇಶನಗಳನ್ನು ನೀಡುತ್ತಿಲ್ಲ. ಹಲವರು ಟೆಂಟ್ ಹಾಕಿಕೊಂಡು ವಾಸ ಮಾಡುತ್ತಿದ್ದಾರೆ. ಹೀಗಾಗಿ ಈ ಜನಾಂಗದ ಮಕ್ಕಳು ಲೆಕ್ಕಕ್ಕೇ ಸಿಗುತ್ತಿಲ್ಲವೆಂದು ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ಪ್ರಸ್ತಾಪ ವಿಧಾನ ಪರಿಷತ್​ನಲ್ಲಿ ಮಾಡಿದ್ದಾರೆ.

ಹರ್ಬಲ್ ಸೀಡ್ ಹೆಸರಿನಲ್ಲಿ ರೈತರಿಗೆ ಅನ್ಯಾಯ

ಹರ್ಬಲ್ ಸೀಡ್ ಹೆಸರಿನಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ನಕಲಿ ಕಂಪನಿಗಳ ಹಾವಳಿ ಹೆಚ್ಚಾಗಿದೆ ಎಂದು ಬಿಜೆಪಿ ಸದಸ್ಯ ಎನ್. ರವಿಕುಮಾರ್ ಪ್ರಸ್ತಾಪ ಮಾಡಿದ್ದಾರೆ. ಈ ಸಂಬಂಧ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ನಕಲಿ ಕಂಪನಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೃಷಿ ಸಚಿವರ ಪರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಬೆರಳೆಣಿಕೆಯಷ್ಟಿರುವ ಮುಸಲ್ಮಾನ್ ಗೂಂಡಾಗಳಿಂದ ಇಡೀ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ: ಕೆ ಎಸ್ ಈಶ್ವರಪ್ಪ

ಇದನ್ನೂ ಓದಿ: ಸೈಬರ್ ಕ್ರೈಂ ಇಂದ ಹಿರಿಯ ಅಧಿಕಾರಿಗಳೇ ಮೋಸಗೊಳಗಾಗಿದ್ದಾರೆ; ವಿಧಾನಪರಿಷತ್​​ನಲ್ಲಿ ಸೈಬರ್ ಕ್ರೈಂ ಬಗ್ಗೆ ಚರ್ಚೆ

ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ