ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ, ಎದ್ದು ಕಾಣುತ್ತಿತ್ತು ಕೆ.ಎಸ್.ಈಶ್ವರಪ್ಪ ಅನುಪಸ್ಥಿತಿ

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ, ಎದ್ದು ಕಾಣುತ್ತಿತ್ತು ಕೆ.ಎಸ್.ಈಶ್ವರಪ್ಪ ಅನುಪಸ್ಥಿತಿ
ಸಚಿವ ಈಶ್ವರಪ್ಪ

ಒಂದು ಕಡೆ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪದಗ್ರಹಣ ಮಾಡುತ್ತಿದ್ದರೆ. ಮತ್ತೊಂದು ಕಡೆ ಕೆ.ಎಸ್.ಈಶ್ವರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.

TV9kannada Web Team

| Edited By: Ayesha Banu

Jul 28, 2021 | 11:57 AM

ಬೆಂಗಳೂರು: ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋದಿಸಿದ್ದು ದೇವರ ಹೆಸರಿನಲ್ಲಿ ಬೊಮ್ಮಾಯಿ‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಚಿವ ಅರ್. ವಿ. ದೇಶಪಾಂಡೆ, ಸೇರಿದಂತೆ ಹಿಂದಿನ ಸಚಿವ ಸಂಪುಟದ ಬಹುತೇಕ ಸಚಿವರು, ಅನೇಕ ಬಿಜೆಪಿ ಶಾಸಕರು, ಬಿಜೆಪಿ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಆದರೆ ಮಾಜಿ ಸಚಿವ K.S.ಈಶ್ವರಪ್ಪರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಕೆ.ಎಸ್.ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿತ್ತು
ಒಂದು ಕಡೆ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪದಗ್ರಹಣ ಮಾಡುತ್ತಿದ್ದರೆ. ಮತ್ತೊಂದು ಕಡೆ ಕೆ.ಎಸ್.ಈಶ್ವರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ಶಾಂತಮಯ ಶಿವಾಚಾರ್ಯ ರೇವಣಶಿದ್ದೇಶ್ವರ ಗುರುಪೀಠ ಸರೂರು, ಸೋಮಲಿಂಗೇಶ್ವರ ಸ್ವಾಮಿ ಅಮೋಘಶಿದ್ದೇಶ್ವರ ಗುರುಪೀಠ ಮಕಣಾಪುರ, ಅಮರೇಶ್ವರ ಸ್ವಾಮಿ ಅಥಣಿ, ಬಿಂದುಶೇಖರ ಒಡೇಯರು ತುಮಕೂರು ಸೇರಿ‌ ಹಲವು ಶ್ರೀ ಗಳನ್ನು ಭೇಟಿ ಮಾಡಿದ್ದಾರೆ.

ಸ್ವಾಮೀಜಿಗಳ ಭೇಟಿ ಬಳಿಕ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಉಪಮುಖ್ಯಮಂತ್ರಿ ಹುದ್ದೆ ಪಡೆಯುವಂತೆ ಸ್ವಾಮೀಜಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬಿಎಸ್‌ವೈ ಸಿಎಂ ಸ್ಥಾನ ಬಿಡುವ ದಿನದಿಂದ ಈ ಚರ್ಚೆ ಇತ್ತು. ನಾನು ಮುಖ್ಯಮಂತ್ರಿ ಆಗಬೇಕೆಂಬ ಚರ್ಚೆ ಇತ್ತು. ಈಗ ಉಪಮುಖ್ಯಮಂತ್ರಿ ಆಗಲೇಬೇಕೆಂದು ಒತ್ತಾಯಿಸಿದ್ದಾರೆ. ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಡಿಸಿಎಂ ಹುದ್ದೆ ಒತ್ತಾಯ ಗಮನಕ್ಕೆ ತರುತ್ತೇನೆಂದು ಹೇಳಿದ್ದೇನೆ. ಬೊಮ್ಮಾಯಿ ಶ್ಯಾಡೋ ಸಿಎಂ ಎಂದು ಹೇಳಲು ಸಿದ್ಧನಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಿದ ಬಸವರಾಜ ಬೊಮ್ಮಾಯಿ

Follow us on

Related Stories

Most Read Stories

Click on your DTH Provider to Add TV9 Kannada