AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

ಬೆಂಗಳೂರು ನಗರದಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಕೆಎಸ್​ಎನ್​ಡಿಎಮ್​ಸಿ ಸ್ಪಷ್ಟನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ
ಬೆಂಗಳೂರು (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 26, 2021 | 2:29 PM

Share

ಬೆಂಗಳೂರು: ನಗರದಲ್ಲಿ ‌ಭೂಕಂಪ ಆಗಿಲ್ಲ. ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಯಿಂದ ಸ್ಪಷ್ಟನೆ ನೀಡಿದೆ. ಆದರೆ ಶಬ್ದ ಹೇಗೆ ಬಂತು ಎಂಬ ಬಗ್ಗೆ ಅಧಿಕಾರಿಗಳಿಗಳು, ತಜ್ಞರಿಗೂ ಸದ್ಯಕ್ಕೆ ಮಾಹಿತಿ ಇಲ್ಲ ಎನ್ನಲಾಗಿದ್ದು, ಈ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಈ ಹಿಂದೆ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೊದಲ ಸಲ ಲಘುವಾಗಿ, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಆದರೆ ಇದೀಗ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ ನೀಡಿದ್ದು, ಭೂಮಿ ಕಂಪಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

‘‘ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೊದಲಾದೆಡೆ 11.50 ರಿಂದ 12.15 ವರೆಗೆ ಭೂಮಿ ಕಂಪಿಸಿದ ವರದಿಗಳನ್ನು ಆಧರಿಸಿ, ಮಾಪಕದಲ್ಲಿ ಮಾಹಿತಿ ಇದೆಯೇ ಎಂದು ಪರಿಶೀಲಿಸಲಾಯಿತು. ಆದರೆ ಯಾವುದೇ ಕಂಪನದ ಅಲೆಗಳು ದಾಖಲಾಗಿಲ್ಲ’’ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ:

KSNDMC note on Bengaluru earthquake

ಕೆಎಸ್​​ಎನ್​ಎಮ್​ಡಿಸಿ ನೀಡಿರುವ ಸ್ಪಷ್ಟನೆ

ಭೂಕಂಪದ ಕುರಿತು ಸಚಿವ ಬಿಸಿ ಪಾಟೀಲ್ ಹೇಳಿಕೆ: ಇಲಾಖೆಯಿಂದ ಭೂಕಂಪದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಕಳೆದ ಬಾರ ಕಲಬುರ್ಗಿ ಭಾಗದಲ್ಲಿ ಆದಾಗ ಕಂದಾಯ ಸಚಿವರು ಬಂದು ವಿಚಾರಣೆ ಮಾಡಿದ್ದಾರೆ. ಇಲಾಖೆಯಿಂದ ಅಗತ್ಯವಿದ್ದರೆ ಪರಿಶೀಲನೆ ಮಾಡಿಸುತ್ತೇವೆ. ಇವತ್ತಿನ ಸದ್ದಿನ ಬಗ್ಗೆ ಮಾಹಿತಿ ಬಂದಿಲ್ಲ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಅವರು ನುಡಿದಿದ್ದಾರೆ.

ಇದನ್ನೂ ಓದಿ:

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

ಇದ್ದೂ ಇಲ್ಲದಂತಾದ ಸೋಲಾರ್ ಬೀದಿ ದೀಪಗಳು, ಅಳವಡಿಸುವಾಗ ಇದ್ದ ಜೋಷ್ ನಿರ್ವಹಣೆಯಲ್ಲಿ ಇಲ್ಲ

Published On - 1:45 pm, Fri, 26 November 21

Follow Us
TV9 Web
TV9 Web

TV9 Kannada

Read More
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು