AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬೆಂಗಳೂರಿನ ಕೆಎಸ್​ಆರ್​, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಮೋದಿ

ಕೆಎಸ್​ಆರ್​, ಕಂಟೋನ್ಮೆಂಟ್ ಸೇರಿ ಬೆಂಗಳೂರಿನ ಇತರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶೀಘ್ರವೇ ಬೆಂಗಳೂರಿನ ಕೆಎಸ್​ಆರ್​, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಮೋದಿ
Narendra Modi
TV9 Web
| Updated By: ನಯನಾ ರಾಜೀವ್|

Updated on:Nov 11, 2022 | 2:00 PM

Share

ಕೆಎಸ್​ಆರ್​, ಕಂಟೋನ್ಮೆಂಟ್ ಸೇರಿ ಬೆಂಗಳೂರಿನ ಇತರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣಗೊಳಿಸಿ ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಬ್ರಾಡ್​ಗೇಜ್ ಪರಿವರ್ತನೆಗೆ ವೇಗ ಕೊಟ್ಟಿದ್ದೇವೆ. ಹಲವು ಹೊಸ ಪ್ರದೇಶಗಳಿಗೆ ರೈಲು ಸಂಪರ್ಕ ಸಿಕ್ಕಿದೆ ಎಂದರು.

ನಮ್ಮ ರೈಲು ನಿಲ್ದಾನಗಳು ಆಧುನೀಕರಣಗೊಂಡಿವೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೇರೆಯೇ ಅನುಭವ ಕೊಡುತ್ತದೆ. ದೇಶದ ಇತರ ರೈಲು ನಿಲ್ದಾಣಗಳನ್ನು ಇದೇ ರೀತಿ ಆಧುನೀಕರಣ ಮಾಡುತ್ತೇವೆ. ಬೆಂಗಳೂರು ನಗರ, ಯಶವಂತಪುರ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.

ಭಾರತ ಇನ್ನು ಕುಂಟುವುದಿಲ್ಲ. ಅತ್ಯಂತ ವೇಗವಾಗಿ ಓಡುತ್ತದೆ. ಭಾರತದಾದ್ಯಂತ ವಂದೇ ಭಾರತ್ ರೈಲು, ವಿಸ್ಟರ್​ಡೊಮ್ ಬೋಗಿಗಳು ಇರುತ್ತವೆ. ಸಾರಿಗೆಯನ್ನು ನಾವು ಸುಧಾರಿಸುತ್ತೇವೆ. ಸಮಯ ಉಳಿಸುತ್ತೇವೆ.

ವಂದೇ ಭಾರತ್ ಎಕ್ಸ್​ಪ್ರೆಸ್​ ಕೇವಲ ಒಂದು ರೈಲು ಮಾತ್ರವೇ ಅಲ್ಲ. ಅದು ಹೊಸ ಭಾರತದ ಹೊಸ ಮೈಲಿಗಲ್ಲು ಮುಂದಿನ ದಿನಗಳಲ್ಲಿ ಭಾರತದ ರೈಲುಗಲು ಹೇಗಿರಲಿವೆ ಎಂಬುದರ ಒಂದು ಝಲಕ್ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸ್ಟಾರ್ಟ್​ಅಪ್​ ಎನ್ನುವುದು ಒಂದು ಕಂಪನಿಯಿಂದ ಆಗುವುದಿಲ್ಲ. ಅದೊಂದು ಮನೋಭಾವ, ಸಮಗ್ರ ಪ್ರಯತ್ನದ ಫಲ. ಬೆಂಗಳೂರು ಭಾರತದ ಭವಿಷ್ಯಕ್ಕೆ ಅತ್ಯಂತ ಮುಖ್ಯ ನಗರ. ಬೆಂಗಳೂರು ಭಾರತದ ಯುವಶಕ್ತಿಯ ಪ್ರತೀಕವಾಗಿದೆ. KIA ಟರ್ಮಿನಲ್ 2 ಫೋಟೋಗಳಲ್ಲಿ ಕಾಣುವುದಕ್ಕಿಂತ ಹೆಚ್ಚು ಆಧುನಿಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Fri, 11 November 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?