ಇಂದಿನಿಂದ ರಾಜ್ಯ ಸಾರಿಗೆ ನೌಕರರ ಪ್ರತಿಭಟನೆ: ಧರಣಿಯಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ- ಸಾರಿಗೆ ಮಂಡಳಿ

TV9kannada Web Team

TV9kannada Web Team | Edited By: Vivek Biradar

Updated on: Jan 24, 2023 | 12:30 PM

ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿಯಲಿದ್ದಾರೆ.

ಇಂದಿನಿಂದ ರಾಜ್ಯ ಸಾರಿಗೆ ನೌಕರರ ಪ್ರತಿಭಟನೆ: ಧರಣಿಯಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ- ಸಾರಿಗೆ ಮಂಡಳಿ
ಕೆಎಸ್​ಆರ್​ಟಿ ಬಸ್​

ಬೆಂಗಳೂರು: ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿಯಲಿದ್ದಾರೆ. ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದಿನಿಂದ (ಜ.24) ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಧರಣಿ ನಡೆಯಲಿದೆ. ಇನ್ನು ಬಿಎಂಟಿಸಿ (BMTC) ನೌಕರರು ಫ್ರೀಡಂ ಪಾರ್ಕ್​ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.

ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್​ನಲ್ಲಿ 15 ದಿನ ಮುಷ್ಕರ ನಡೆಸಿದ್ದರು. ಅಲ್ಲದೇ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿದ್ದರು.

ಸಾರಿಗೆ ನೌಕರರ ಧರಣಿಯಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುವುದಿಲ್ಲ

ಸಾರಿಗೆ ನೌಕರರ ಪ್ರತಿಭಟನೆಯಿಂದ ಕೆಎಸ್​ಆರ್​ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲವೆಂದು ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಪ್ರಯಾಣಿಕರಿಗೆ ನಿಯಮಿತ, ವ್ಯವಸ್ಥಿತ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶವಿದೆ. ಹೀಗಾಗಿ ಸಾರಿಗೆ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಸಾರಿಗೆ ಮಂಡಳಿ ಕಾರ್ಯದರ್ಶಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ನಿಯಮಬದ್ಧವಾಗಿ 2020 ಮಾರ್ಚ್​ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ ನ್ನುವರೆಗು ವೇತನ ಪರೀಷ್ಕರಣೆಯಾಗಿಲ್ಲ. ನಿಗಮಗಳ ಈ ನಿರ್ಧಾರಕ್ಕೆ ಕೆಎಸ್ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1 ಲಕ್ಷ 30 ನೌಕರರು ಅಸಮಾಧಾನ ಹೊರಹಾಕಿದ್ದಾರೆ.

2016 ರಲ್ಲಿ ಶೇ 12.5 ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ.

ಸಾರಿಗೆ ನೌಕರರ ಬೇಡಿಕೇನು..?

1. ಸಾರಿಗೆ ನೌಕರರಿಗೆ ಶೇ 25 ರಷ್ಟು ವೇತನ ಹೆಚ್ಚಳ ಆಗಬೇಕು

2. ನೌಕರರ ಹಾಲಿ ಇರುವ ಬಾಟ,ಭತ್ಯೆಗಳು 5 ಪಟ್ಟು ಹೆಚ್ಚಿಸವೇಕು

3. ವೈದ್ಯಕೀಯ ಸೌಲಭ್ಯ

4. ಎಲ್ಲಾ ನೌಕರರಿಗೆ ಪ್ರತಿ ತಿಂಗಳು ಹೊರರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ನೀಡಬೇಕು

5. ಕಳೆದ ಬಾರಿ ಮುಷ್ಕರ ವೇಳೆ ವಜಾಗೊಂಡ ನೌಕರರ ಮರುನೇಮಕ

6. ಹೆಚ್ಚುವರಿ ಕೆಲಸದ ಅವಧಿಗೆ ಟೈಮ್ ಭತ್ಯೆ ನೀಡಬೇಕು

7. ನೌಕರರಿಗೆ ಪಾಳಿ ವ್ಯವಸ್ಥೆ ಜಾರಿಯಾಗಬೇಕು

8. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ ನಿಲ್ಲಿಸಬೇಕು

9. ಎಲ್ಲ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು

10. ಕೂಡಲೇ ಖಾಲಿ ಹುದ್ದೆಗಳನ್ನ ಭರ್ತಿ ಮಾಡಬೇಕು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada