AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು

ಕರ್ನಾಟಕದಲ್ಲಿ ಮೇ 20ರಂದು ನಿಗದಿಯಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದೆ. KSRTC ಜಂಟಿ ಕ್ರಿಯಾ ಸಮಿತಿ ಹೈಕೋರ್ಟ್ ತೀರ್ಪಿಗೆ ಗೌರವ ಸಲ್ಲಿಸಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಹೀಗಾಗಿ ರಾಜ್ಯಾದ್ಯಂತ ಬಸ್ ಸೇವೆಗಳು ಎಂದಿನಂತೆ ಸುಗಮವಾಗಿ ನಡೆಯಲಿವೆ. ಸರ್ಕಾರದೊಂದಿಗೆ ಸಭೆ ನಡೆಸುವಂತೆ ಹೈಕೋರ್ಟ್ ನಿರ್ದೇಶಿಸಿದ್ದು, ನೌಕರರು ಸಭೆಯನ್ನು ಸದುಪಯೋಗಪಡಿಸಿಕೊಳ್ಳಲು ಸಿದ್ಧರಿರೋದಾಗಿ ತಿಳಿಸಿದ್ದಾರೆ.

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು
ಕೆಎಸ್​​​ಆರ್​​​​​ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: mathrubhumi.com
ಪ್ರಸನ್ನ ಹೆಗಡೆ
|

Updated on:May 19, 2026 | 5:20 PM

Share

ಬೆಂಗಳೂರು, ಮೇ 19: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ತಿಳಿಸಿದ್ದಾರೆ. ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್​​ ನಿರ್ದೇಶನ ಕೊಟ್ಟಿದೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ ಸಭೆ ಮಾಡಬೇಕು ಅಂತಲೂ ಹೇಳಿದೆ. ಹೈಕೋರ್ಟ್ ಆದೇಶದ ಪ್ರಕಾರ ಮುಷ್ಕರ ಹಿಂಪಡೆದಿದ್ದೇವೆ ಎಂದವರು ತಿಳಿಸಿದ್ದಾರೆ.

ಎಲ್ಲಾ ಕಾರ್ಮಿಕರಿಗೂ ಪ್ರತಿಭಟನೆ ಮಾಡುವ ಹಕ್ಕು ಇದ್ದು, ಏಕಪಕ್ಷೀಯವಾಗಿ ನೀವು ತೀರ್ಮಾನ ಮಾಡಿದ್ದೀರಿ. ಯಾರೋ ಹಾಕಿದ PILನಿಂದಾಗಿ ಸರ್ಕಾರ ನಮ್ಮ ಜೊತೆ ಸಭೆ ಮಾಡಬೇಕಿದೆ. ಅದನ್ನ ಸರ್ಕಾರವೇ ನಿರ್ಧಾರ ಮಾಡಿ ಸಭೆ ಮಾಡಬಹುದಿತ್ತು. ಹೈಕೋರ್ಟ್ ಸೂಚಿಸಿರುವ ಪ್ರಕಾರ ಸರ್ಕಾರದ ಜೊತೆಗಿನ ಸಭೆಯನ್ನು ಸದುಪಯೋಗ ಮಾಡಿಕೊಳ್ಳುತ್ತೇವೆ . ನಮ್ಮ ಒಂದಷ್ಟು ಮನವಿಯನ್ನು ಕೂಡ ಹೈಕೋರ್ಟ್ ಗಮನಿಸಿದೆ ಎಂದು ಜಂಟಿ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರಿಗೆ ಬಿಗ್​​ ಶಾಕ್​​; ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ

ಸರ್ಕಾರ ಇದನ್ನ ಪ್ರತಿಷ್ಠೆಯ ವಿಚಾರವಾಗಿ ತೆಗೆದುಕೊಳ್ಳಬಾರದು. ಮುಷ್ಕರದ ನೋಟಿಸ್​​ನ ಅಧಿಕೃತವಾಗಿ ವಾಪಸ್ ತೆಗೆದುಕೊಳ್ಳುತ್ತಿದ್ದೇವೆ. ಸಿಎಂ ಜೊತೆಗಿನ ಸಭೆ ಯಾವಾಗ ಎಂದು ಇನ್ನೂ ನಿಗದಿ ಮಾಡಿಲ್ಲ. KSRTC ಎಂಡಿ ಮೂಲಕ ಸಿಎಂ ಜೊತೆಗಿನ ಸಭೆಗೆ ಸಿದ್ದ ಇದ್ದೇವೆ. ಇನ್ಕ್ರಿಮೆಂಟ್ ಹಾಗೂ DA ಹೆಚ್ಚಳ ಆಗಬೇಕಿದೆ. ಎಸ್ಮಾ ತಂದರೂ ಕೂಡ ಹಲವು ಬಾರಿ ಮುಷ್ಕರ ಮಾಡಿದ್ದೇವೆ. ಜಂಟಿ ಕ್ರಿಯಾ ಸಮಿತಿ ಒಂದು ಸಂಘಟ ಅಲ್ಲ, ಹಲವು ಗುಂಪು ಸೇರಿ ಆಗಿರುವಂತಹದ್ದು. ಮುಷ್ಕರ ಆಗಿದ್ದರೆ, ಬೆಂಬಲ ವಾಪಸ್ ತೆಗೆದುಕೊಂಡವರ ಶಕ್ತಿ ಗೊತ್ತಾಗ್ತಾ ಇತ್ತು. ಬೆಂಬಲ ವಾಪಸ್ ತೆಗೆದುಕೊಂಡವರಿಗೆ ಒತ್ತಡ ಇರಬಹುದು. ಸರ್ಕಾರವೇ ಹಿಂದೆ ನಿಂತು PIL ಅರ್ಜಿ ಹಾಕಿಸುತ್ತಿದೆ. ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದೇವೆ ಅಂದರೆ, ಎಸ್ಮಾ ಯಾಕೆ ಹಾಕಿದ್ರಿ? ಸಾರಿಗೆ ಸಚಿವರು ಸ್ಮಾರ್ಟ್ ಇದ್ದಾರೆ, ಅದನ್ನ ಜನಕ್ಕೆ ಉಪಯೋಗ ಆಗುವ ರೀತಿ ಮಾಡಬೇಕು ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:40 pm, Tue, 19 May 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ