AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಕೆಎಸ್​​​ಆರ್​​ಟಿಸಿ ಗುಡ್​​ ನ್ಯೂಸ್: ಬೆಂಗಳೂರಿನಿಂದ 2,600 ಹೆಚ್ಚುವರಿ ವಿಶೇಷ ಬಸ್

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ 2,600 ಹೆಚ್ಚುವರಿ ವಿಶೇಷ ಬಸ್‌ಗಳನ್ನು ನವೆಂಬರ್ 6-8 ರವರೆಗೆ ಕಾರ್ಯಾಚರಣೆಗೊಳಿಸಲಿದೆ. ನವೆಂಬರ್ 10-11 ರಂದು ವಾಪಸಾತಿಗೂ ಬಸ್ ವ್ಯವಸ್ಥೆ ಇದೆ. ಮೆಜೆಸ್ಟಿಕ್, ಮೈಸೂರು ರಸ್ತೆ ಬಸ್ ನಿಲ್ದಾಣಗಳಿಂದ ವಿವಿಧ ಜಿಲ್ಲೆಗಳು ಮತ್ತು ನೆರೆ ರಾಜ್ಯಗಳಿಗೆ ಸೇವೆ ಲಭ್ಯ. ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ 10% ವರೆಗೆ ರಿಯಾಯಿತಿ ಪಡೆಯಬಹುದು.

ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಕೆಎಸ್​​​ಆರ್​​ಟಿಸಿ ಗುಡ್​​ ನ್ಯೂಸ್: ಬೆಂಗಳೂರಿನಿಂದ 2,600 ಹೆಚ್ಚುವರಿ ವಿಶೇಷ ಬಸ್
ಸಾಂದರ್ಭಿಕ ಚಿತ್ರImage Credit source: Google
ಅಕ್ಷಯ್​ ಪಲ್ಲಮಜಲು​​
|

Updated on: Nov 02, 2026 | 8:56 PM

Share

ಬೆಂಗಳೂರು, ನ.2: ದೀಪಾವಳಿ ಹಬ್ಬ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರಿ ದಟ್ಟಣೆಯನ್ನು ನಿರ್ವಹಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ದೊಡ್ಡ ಸಿದ್ಧತೆ ಮಾಡಿಕೊಂಡಿದೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ನೆರೆ ರಾಜ್ಯಗಳಿಗೆ ನವೆಂಬರ್ 6 ರಿಂದ 8 ರವರೆಗೆ ಒಟ್ಟು 2,600 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಿದೆ. ಹಬ್ಬ ಮುಗಿಸಿ ಮರಳುವ ಸಾರ್ವಜನಿಕರ ಅನುಕೂಲಕ್ಕಾಗಿ ನವೆಂಬರ್ 10 ಮತ್ತು 11 ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ಹಿಂತಿರುಗಲು ಸಹ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ನವೆಂಬರ್ 8 ರಂದು ನರಕ ಚತುರ್ದಶಿ ಹಾಗೂ ನವೆಂಬರ್ 10 ರಂದು ಬಲಿಪಾಡ್ಯಮಿ ಹಬ್ಬಗಳಿದ್ದು, ಸಾರ್ವಜನಿಕರು ತಡೆರಹಿತವಾಗಿ ತಮ್ಮ ಊರುಗಳಿಗೆ ತಲುಪಲು ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಟಿಟಿಎಂಸಿಯಿಂದ ವಿಶೇಷ ಬಸ್‌ಗಳು ಹೊರಡಲಿವೆ. ಬಿಎಂಟಿಸಿಯ ಶಾಂತಿನಗರ, ವಿಜಯನಗರ, ಯಶವಂತಪುರ, ಜಯನಗರ ಟಿಟಿಎಂಸಿಗಳು, ಮಲ್ಲೇಶ್ವರಂ 18ನೇ ಕ್ರಾಸ್, ಬಸವೇಶ್ವರನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಹಾಗೂ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣಗಳಿಂದಲೂ ಹೆಚ್ಚುವರಿ ರಿಸರ್ವ್ಡ್ ಬಸ್‌ಗಳ ಕಾರ್ಯಾಚರಣೆ ಇರಲಿದೆ.

ಇದನ್ನೂ ಓದಿ: ಡೀಸೆಲ್ ಹಾಕಿಸಲೂ ದುಡ್ಡಿರಲಿಲ್ಲ: ಮುಂದಿನ 2 ವರ್ಷ ಹೊಸ ಕೆಲಸ ತಗೋಬೇಡಿ; ಆರ್ಥಿಕ ಬಿಕ್ಕಟ್ಟಿಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಯಾವ ಯಾವ ಮಾರ್ಗಗಳಿಗೆ ವಿಶೇಷ ಬಸ್ ಸೌಲಭ್ಯ?:

ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಮಂಗಳೂರು, ಉಡುಪಿ, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ ಹಾಗೂ ಅಂತರ್ ರಾಜ್ಯ ನಗರಗಳಾದ ಹೈದರಾಬಾದ್, ವಿಜಯವಾಡ ಮತ್ತು ತಿರುಪತಿಗೆ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಮಡಿಕೇರಿ, ವಿರಾಜಪೇಟೆ ಸೇರಿದಂತೆ ಸುತ್ತಮುತ್ತಲಿನ ಭಾಗಗಳಿಗೆ ಬಸ್‌ಗಳು ಲಭ್ಯವಿರಲಿವೆ.

ಶಾಂತಿನಗರ ಟಿಟಿಎಂಸಿ: ಪ್ರೀಮಿಯರ್ ಲಕ್ಸರಿ ಬಸ್‌ಗಳು ಚೆನ್ನೈ, ಕೊಯಮತ್ತೂರು, ಮಧುರೈ, ತಿರುಚಿ, ಪಾಲಕ್ಕಾಡ್, ತೃಶ್ಶೂರ್, ಎರ್ನಾಕುಲಂ ಹಾಗೂ ಕೋಝಿಕ್ಕೋಡ್‌ಗೆ ಹೊರಡಲಿವೆ.

ಟಿಕೆಟ್ ಬುಕಿಂಗ್‌ಗೆ ಆಕರ್ಷಕ ರಿಯಾಯಿತಿ

ಒಂದೇ ಟಿಕೆಟ್‌ನಲ್ಲಿ 4 ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರ ಪ್ರಯಾಣದ ಟಿಕೆಟ್ ಬುಕ್ ಮಾಡಿದರೆ ಶೇಕಡಾ 5% ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೆ ಬುಕ್ ಮಾಡಿದರೆ ಒಟ್ಟು ಪ್ರಯಾಣ ದರದಲ್ಲಿ ಶೇಕಡಾ 10% ರಷ್ಟು ರಿಯಾಯಿತಿ ಕಲ್ಪಿಸಲಾಗಿದೆ. ಪ್ರಯಾಣಿಕರು ಕೊನೆಯ ಕ್ಷಣದ ಧಾವಂತವನ್ನು ತಪ್ಪಿಸಲು ಮುಂಚಿತವಾಗಿಯೇ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಟಿಕೆಟ್ ಕಾಯ್ದಿರಿಸಿಕೊಳ್ಳಲು ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಜೂಪಲ್ಲಿ ರಾಮೇಶ್ವರ ರಾವ್
ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಜೂಪಲ್ಲಿ ರಾಮೇಶ್ವರ ರಾವ್
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!