AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ.

KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ
ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು
TV9 Web
| Edited By: |

Updated on:Jan 16, 2023 | 11:06 AM

Share

ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​​​ಗೆ ಚಾಲನೆ ಸಿಕ್ಕಿದೆ. ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ಇಂದು ರಸ್ತೆಗೆ ಇಳಿದಿವೆ. ಸಂಚಾರ ಶುರು ಮಾಡಿವೆ. ಮೆಜೆಸ್ಟಿಕ್​ ಕೆಎಸ್​​ಆರ್​​ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ KSRTC ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ KSRTC ನಿಲ್ದಾಣದಲ್ಲಿ ಎಲೆಕ್ಟ್ರಿಕ್​ ಬಸ್​​ಗೆ ಚಾಲನೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ. ಮುಂದಿನ ಮೂರು ತಿಂಗಳಲ್ಲಿ 50 KSRTC ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಿವೆ. ಬೆಂಗಳೂರಿನ ಹತ್ತಿರದ ಜಿಲ್ಲೆಗಳಿಗೆ ಸಂಚರಿಸಲಿವೆ. 300 ಕಿ.ಮೀ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್​​ ಬಸ್ ಓಡಿಸಲು KSRTC ನಿರ್ಧಾರ ಮಾಡಿದೆ.

ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌ , ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಳ್ಳಲಿದೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿರುತ್ತದೆ.

KSRTC Electric bus

ಇದನ್ನೂ ಓದಿ: ನರ್ಸ್ ಅಂತ ಬಂದು ಸಿಕ್ಕಿದ್ದನೆಲ್ಲಾ ಕದಿತಾಳೆ, ಡಾಕ್ಟರ್ ಅಂತಾ ಬಂದು ರೋಗಿಯ ಮೈಮೇಲಿದ್ದ ಚಿನ್ನಾಭರಣವೇ ಗಾಯಬ್; ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳಿ

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರೋಡಿಗಿಳಿಯುವ 50 ಬಸ್​ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜ​ಪೇಟ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗುತ್ತದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:06 am, Mon, 16 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು