ನಾವು ಮುಷ್ಕರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್

ವೇತನ ಹೆಚ್ಚಳ ಬಗ್ಗೆ ಸರ್ಕಾರದಿಂದ ನೋಟಿಫಿಕೇಷನ್ ಬಂದಿಲ್ಲ. ಸಿಎಂ ನಮ್ಮನ್ನು ಕರೆದು ಮಾತನಾಡಿದ್ರೆ ಸಮಸ್ಯೆ ಇತ್ಯರ್ಥ ಆಗುತ್ತದೆ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್​.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.

ನಾವು ಮುಷ್ಕರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್
ಕೆಸ್​ಆರ್​ಟಿಸಿ (ಸಾಂದರ್ಭಿಕ ಚಿತ್ರ)
Follow us
|

Updated on:Mar 16, 2023 | 5:33 PM

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತಾಗಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ (Transport employees Association) ಅಧ್ಯಕ್ಷ ಹೆಚ್​.ವಿ. ಅನಂತ ಸುಬ್ಬರಾವ್ ಖಡಕ್ ಆಗಿ ಹೇಳಿದ್ದಾರೆ. ಅದರಂತೆ ಸಾರಿಗೆ ನೌಕರರ ಸಂಘವು ಮಾರ್ಚ್​ 21ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಿದೆ. ನಗರದಲ್ಲಿ ಮಾತನಾಡಿದ ಅವರು, ಮಾರ್ಚ್​ 21ರಂದು ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದೇವೆ. ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರಿಯಲಿದೆ. ಇದರಲ್ಲಿ ಜನರಿಗೆ ತೊಂದರೆ ಮಾಡುವ ಉದ್ದೇಶ ಇಲ್ಲ. ವಜಾಗೊಂಡ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಸಾರಿಗೆ ನೌಕರರ ವೇತನ ಹೆಚ್ಚಳದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಸದ್ಯಕ್ಕೆ ನಾವು ಮುಷ್ಕರದಿಂದ (Karnataka Transport employees strike) ಹಿಂದೆ ಸರಿಯುವ ಮಾತಿಲ್ಲ. ವೇತನ ಹೆಚ್ಚಳ ಬಗ್ಗೆ ಸರ್ಕಾರದಿಂದ ನೋಟಿಫಿಕೇಷನ್ ಬಂದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮನ್ನು ಕರೆದು ಮಾತನಾಡಿದರೆ ಸಮಸ್ಯೆ ಇತ್ಯರ್ಥ ಆಗುತ್ತದೆ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತೆ ಎಂದರು.

AITUC ಕಚೇರಿಯಲ್ಲಿ ಹೇಳಿಕೆ ನೀಡಿದ ಅನಂತ ಸುಬ್ಬರಾವ್, ಶೇ. 25 ರಷ್ಟು ವೇತನ ಹೆಚ್ಚಳ ಮಾಡುವುದು, ಇನ್ಸೆಟಿವ್ ಹೆಚ್ಚು ಮಾಡುವುದು, ಬಾಟಾವನ್ನ ಹೆಚ್ಚು ಮಾಡುವುದು, ಜೊತೆಗೆ ವಜಾ ಮಾಡಿದ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ನಾವು ಈ ಆದೇಶಕ್ಕೆ ಕಾಯುತ್ತಿದ್ದೇವೆ. ನಮ್ಮ ಜೊತೆ ನಡೆಸಿದ ಚರ್ಚೆ ಅಪೂರ್ಣವಾಗಿದೆ. ನಮ್ಮ ನಿರ್ಧಾರ ಈ ಹಿಂದೆ ಎನಿತ್ತೋ ಅದು ಮುಂದುವರೆಯಲಿದೆ. ಮಾರ್ಚ್ 21 ರಿಂದ ಸಾರಿಗೆ ಬಂದ್ ನಡೆಯಲಿದೆ. ಇದು ಏಕಪಕ್ಷೀಯ ನಿರ್ಧಾರ ಸರಿಯಲ್ಲ ಎಂದರು.

ಇದನ್ನೂ ಓದಿ: ಇಂದು ಮಧ್ಯರಾತ್ರಿ 12ರಿಂದ ಲಾರಿ ಮುಷ್ಕರ; ಸರಕು ಸಾಗಣೆಯಲ್ಲಿ ವ್ಯತ್ಯಯ ಸಾಧ್ಯತೆ

ಚುನಾವಣೆ ಪ್ರಕ್ರಿಯೆ ಇರುವುದರಿಂದ ನಾವೂ ಮಾರ್ಚ್ 21ಕ್ಕೆ ಬಂದ್ ಕರೆ ನೀಡಿದ್ದೇವೆ. ಜನರಿಗೆ ತೊಂದರೆ ಮಾಡುವ ಉದ್ದೇಶ ನಮಗೆ ಇಲ್ಲ, ಸರ್ಕಾರದಿಂದ ಆದೇಶದ ಪ್ರತಿ ಬಂದ ನಂತರ ಅದರಲ್ಲಿ ಯಾವ ಅಂಶ ಇದೆ ಎಂಬುದನ್ನು ನೋಡಬೇಕಾಗಿದೆ. ಸದ್ಯಕ್ಕೆ ಯಾವುದೇ ಆದೇಶ ಬಾರದ ಹಿನ್ನಲೆ ಯಾವ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. KPTCL ಅವರಿಗೆ 20ರಷ್ಟು ಏರಿಕೆ ಮಾಡಿ ನಮಗ್ಯಾಕೆ ಈ ರೀತಿ ಮಾಡಿದ್ದು? ಎಂದು ಪ್ರಶ್ನಿಸಿದ್ದಾರೆ.

ನಾಳೆ ಸಾರಿಗೆ ನೌಕರರ ಸಂಘದ ಸಮಾವೇಶ ನಡೆಯಲಿದೆ. 21ಕ್ಕೆ ಮುಷ್ಕರ ಆರಂಭಗೊಳ್ಳಳಿದೆ. ಒಂದೊಮ್ಮೆ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡದಿದ್ದರೆ ಖಂಡಿತ ಮುಷ್ಕರ ನಡೆಯಲಿದೆ. ನಮ್ಮ ಜೊತೆ ಸಭೆ ಮಾಡದೇ ಈ ರೀತಿ ಆದೇಶ ಮಾಡಿದ್ದಾರೆ. ನಾಳೆ ಸಿಎಂ ನಮ್ಮ ಜೊತೆ ಚರ್ಚೆಗೆ ಬರಬೇಕು. ಕೇವಲ ಒಂದು ಬೇಡಿಕೆ ಈಡೇರಿಸುವ ಆದೇಶ ಬಂದರೆ ನಮ್ಮ ಹೋರಾಟ ನಡೆಯಲಿದೆ ಎಂದು ಅನಂತ ಸುಬ್ಬರಾವ್ ಹೇಳಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರಕ್ಕೆ ತೀರ್ಮಾನಿಸಿದ ಬೆನ್ನಲ್ಲೇ ಸರ್ಕಾರವು 4 ನಿಗಮಗಳ ಎಂಡಿಗಳ ಜತೆ ಸಭೆ ನಡೆಸಿತ್ತು. ಆದರೆ, ನಿಗಮಗಳ ನೌಕರರು ವೇತನ ಹೆಚ್ಚಳದ ಬೇಡಿಕೆ ಸಡಿಲಿಸಲು ಸಮ್ಮತಿಸದೆ ಪಟ್ಟು ಹಿಡಿದ ಕಾರಣ ಒಮ್ಮತಕ್ಕೆ ಬರುವಲ್ಲಿ ಸಭೆ ವಿಫಲವಾಗಿತ್ತು. ಸತತ 4 ಗಂಟೆ ಸಭೆ ನಡೆಸಲಾಗಿದ್ದು ಒಮ್ಮತಕ್ಕೆ ಬರುವುದು ಸಾಧ್ಯವಾಗಿಲ್ಲ.

ಇದನ್ನೂ ಓದಿ: KPTCL ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ; ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಶೇಕಡಾ 14ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿದರು. ಅದನ್ನು ನಾವು ಒಪ್ಪಿಲ್ಲ. ಕೆಪಿಟಿಸಿಎಲ್ ನೌಕರರಿಗೆ ಶೇ 20, ಸರ್ಕಾರಿ ನೌಕರರಿಗೆ ಶೇ 17ರಷ್ಟು ವೇತನ ಹೆಚ್ಚಿಸಿದ್ದಾರೆ. ಸಾರಿಗೆ ನೌಕರರಿಗೆ ಶೇ 14ರಷ್ಟು ಸಂಬಳ ಹೆಚ್ಚಿಸುವುದಾಗಿ ಹೇಳಿದರು. ನಾವಿದನ್ನು ಒಪ್ಪಿಲ್ಲ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅಂಗಳದಲ್ಲಿ ನಮ್ಮ ಬೇಡಿಕೆ ಇದೆ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದರು.

ಮಾರ್ಚ್​ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧರಿಸಿರುವುದಾಗಿ ಕೆಎಸ್​ಆರ್​ಟಿಸಿ ನೌಕರರು ಘೋಷಿಸಿದ್ದಾರೆ. ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಅಂದಿನಿಂದ ​23,000 ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ಈ ಹಿಂದೆ ಮಾಹಿತಿ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Thu, 16 March 23